Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ವಾರಂಟೈನ್‌ಗೆ ತಾಲೂಕು ಮಟ್ಟದಲ್ಲಿ...

ಕ್ವಾರಂಟೈನ್‌ಗೆ ತಾಲೂಕು ಮಟ್ಟದಲ್ಲಿ ವ್ಯವಸ್ಥೆಗೆ ಸಚಿವ ಕೋಟ ಸೂಚನೆ

ಹೊರ ರಾಜ್ಯಗಳಿಂದ ದ.ಕ. ಜಿಲ್ಲೆಗೆ 6092 ಅರ್ಜಿ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ12 May 2020 5:43 PM IST
share
ಕ್ವಾರಂಟೈನ್‌ಗೆ ತಾಲೂಕು ಮಟ್ಟದಲ್ಲಿ ವ್ಯವಸ್ಥೆಗೆ ಸಚಿವ ಕೋಟ ಸೂಚನೆ

ಮಂಗಳೂರು, ಮೇ 12: ಹೊರ ರಾಜ್ಯಗಳಿಂದ ಬರಲಿಚ್ಚಿಸಿರುವ ದ.ಕ. ಜಿಲ್ಲೆಯವರಿಗೆ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಆಯಾ ತಾಲೂಕುಗಳಲ್ಲಿ ಕ್ವಾರಂಟೈನ್‌ಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಾಳೆಯಿಂದ (ಮೇ 13ರಿಂದ) ಸಭೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ತವರಿಗೆ ಆಗಮಿಸಲು ಸೇವಾ ಸಿಂಧುವಿನಲ್ಲಿ 6092 ಅರ್ಜಿಗಳು ಸಲ್ಲಿಕೆಯಾಗಿವೆ. ಒಂದು ಅರ್ಜಿಯಲ್ಲಿ ಕನಿಷ್ಠ 3ರಿಂದ 5 ಮಂದಿಯಂತೆ 25,000 ಜನರಿರಬಹುದು. ಇವರಿಗೆ ಸರಕಾರದ ವತಿಯಿಂದ ಸಾಂಸ್ಥಿಕವಾಗಿ ಕ್ವಾರಂಟೈನ್‌ ಗೊಳಪಡಿಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಸಭೆಗೆ ಮಾಹಿತಿ ನೀಡಿದರು.

ಈ ಸಂದರ್ಭ ತಾಲೂಕುವಾರು ಲಭ್ಯವಿರುವ ಹೊಟೇಲ್, ಸಂಸ್ಥೆಗಳ ಮಾಹಿತಿಯನ್ನು ತಹಶೀಲ್ದಾರರಿಂದ ಕೋರಲಾಯಿತು. ಸಲ್ಲಿಕೆಯಾದ ಅರ್ಜಿಗಳಿಗೆ ಪೂರಕವಾಗಿ ಕ್ವಾರಂಟೈನ್‌ಗೊಳಪಡಿಸಲು ಸಾಕಷ್ಟು ಮುಂಜಾಗೃತಾ ಕ್ರಮಗಳು ಹಾಗೂ ಸೌಲಭ್ಯಗಳ ಅಗತ್ಯವಿರುವುದರಿಂದ ಶಾಸಕರು ಹಾಗೂ ಅಧಿಕಾರಿಗಳ ನಡುವೆ ಸುದೀರ್ಘ ಚರ್ಚೆ ನಡೆಯಿತು.

ಹೊರ ರಾಜ್ಯಗಳಿಂದ ಬರುವವರು ತಮ್ಮ ಮನೆ ಅಥವಾ ಸಂಬಂಧಿಕರ ಮನೆಗಳಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್‌ಗೆ ಒಳಪಡಲು ಇಚ್ಚಿಸಿದರೆ, ಸೂಕ್ತ ಕ್ರಮಗಳೊಂದಿಗೆ ಅವರಿಗೆ ಅವಕಾಶ ಕಲ್ಪಿಸಬೇಕು. ಮಾತ್ರವಲ್ಲದೆ ಜಿಲ್ಲಾಡಳಿತ ಖಾಲಿ ಮನೆ, ಫ್ಲಾಟ್‌ಗಳಿರುವವರು ನಮ್ಮವರ ಕ್ವಾರಂಟೈನ್ ‌ಗಾಗಿ ಒದಗಿಸುವಂತೆ ಜಿಲ್ಲಾಡಳಿತ ಮನವಿ ಮಾಡಬಹುದು ಎಂದು ಶಾಸಕ ಖಾದರ್ ಸಲಹೆ ನೀಡಿದರು.

ಹೊರ ರಾಜ್ಯಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಗರ್ಭಿಣಿಯರೂ ಆಗಮಿಸಲಿರುವುದರಿಂದ ಅವರಿಗೆ ಹೋಂ ಕ್ವಾರಂಟೈನ್‌ಗೆ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅಭಿಪ್ರಾಯಿಸಿದರು. ಶಾಸಕ ವೇದವ್ಯಾಸ ಕಾಮತ್, ಜಿಲ್ಲೆಯ ಖಾಸಗಿ ವೈದ್ಯಕೀಯ, ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್‌ಗಳನ್ನು ಕೂಡಾ ಬಳಸಿಕೊಳ್ಳಲು ಕ್ರಮ ಅಗತ್ಯವಿದೆ ಎಂದರು. ಉಳಿದ ಶಾಸಕರು ಇದಕ್ಕೆ ದನಿಗೂಡಿಸಿದರು.

ಪ್ರಸ್ತುತ ಹೊರರಾಜ್ಯದಿಂದ ಬರುವವರಿಗೆ ಜಿಲ್ಲಾಡಳಿತ ನಿಗದಿಪಡಿಸಿದ್ದಲ್ಲಿಯೇ ಕ್ವಾರಂಟೈನ್ ವ್ಯವಸ್ಥೆ ಮಾಡಬೇಕಾಗಿದೆ. ಗರ್ಭಿಣಿಯರು, ವಿಕಲಚೇತನರು ಸೇರಿದಂತೆ ತುರ್ತು ಸಂದರ್ಭದಲ್ಲಿ ಹೋಮ್ ಕ್ವಾರಂಟೈನ್ ವ್ಯವಸ್ಥೆಗೆ ಸರಕಾರದ ಬಳಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಚಿವ ಕೋಟ ತಿಳಿಸಿದರು.

ಈ ಸಂದರ್ಭ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಪ್ರತಿಕ್ರಿಯಿಸಿ, ಕ್ವಾರಂಟೈನ್‌ಗೆ ಒಳಪಡಿಸುವಾಗ ಪ್ರತಿಯೊಬ್ಬರಿಗೂ ಪ್ರತ್ಯೇಕ ಶೌಚಾಲಯದ ವ್ಯವಸ್ಥೆಯೊಂದಿಗೆ ಸೌಲಭ್ಯ ಕಲ್ಪಿಸುವುದು ಅತ್ಯಗತ್ಯ. ಒಂದು ವೇಳೆ ಒಂದೇ ಮನೆಯವರಾಗಿದ್ದು ಕೂಡಾ ಒಂದೇ ಶೌಚಾಲಯ ಬಳಕೆ ಮಾಡುವ ಸಂದರ್ಭ ಸೋಂಕು ಇದ್ದಲ್ಲಿ ಅದರಿಂದ ಇತರರಿಗೆ ಹರಡುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ಹೆಚ್ಚಿನ ಗಮನ ಹರಿಸ ಬೇಕು. ಇದು ತುರ್ತು ಸಂದರ್ಭವಾದ ಕಾರಣ ಖಾಸಗಿ ಹಾಸ್ಟೆಲ್, ಶಿಕ್ಷಣ ಸಂಸ್ಥೆಗಳ ರೂಂಗಳನ್ನು ಪಡೆಯುವಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈ ಬಗ್ಗೆ ಸುದೀರ್ಘ ಚರ್ಚೆಯ ಬಳಿಕ ಆಯಾ ತಾಲೂಕುಗಳಲ್ಲಿ ಲಭ್ಯವಿರುವ ವ್ಯವಸ್ಥೆಗಳ ಬಗ್ಗೆ ಸ್ಥಳೀಯ ತಹಶೀಲ್ದಾರ್, ಆರೋಗ್ಯ ಅಧಿಕಾರಿಗಳು ಶಾಸಕರ ನೇತೃತ್ವದಲ್ಲಿ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಡಳಿತದಿಂದ ಮಾಡಲಾ ಗುವ ಸಾಂಸ್ಥಿಕ ಕ್ವಾರಂಟೈನ್ ಉಚಿತವಾಗಿರುತ್ತದೆ. ಉಳಿದಂತೆ ಸ್ಥಳೀಯ ನಿಗದಿತ ಹೊಟೇಲ್‌ಗಳಲ್ಲಿ ಉಳಿದುಕೊಳ್ಳಲು ಬಯಸುವವರಿಗೆ ಈಗಾಗಲೇ ವಿದೇಶಗಳಿಂದ ಆಗಮಿಸುವವರಿಗೆ ಮಾಡಿರುವಂತೆ ವ್ಯವಸ್ಥೆ ಕಲ್ಪಿಸಲು ಕ್ರವು ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಶಾಸಕರಾದ ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕಾ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಉಪಸ್ಥಿತರಿದ್ದರು.

ಹೊರ ರಾಜ್ಯಗಳಿಂದ ತುರ್ತು ಅಗತ್ಯಕ್ಕೆ ಮಾತ್ರ ಅವಕಾಶ

ಸದ್ಯ ದ.ಕ. ಜಿಲ್ಲೆಗೆ ಆಗಮಿಸಲು ಸೇವಾಸಿಂಧುವಿನಲ್ಲಿ ಹೊರ ರಾಜ್ಯಗಳಿಂದ 6000ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದೆ. ಆದರೆ, ಕೇಂದ್ರ ಸರಕಾರದ ಆದೇಶದ ಪ್ರಕಾರ ಪ್ರಸ್ತುತ ಆ ಅರ್ಜಿಗಳಲ್ಲಿ ಗರ್ಭಿಣಿಯರು, ಇತರ ರೋಗದಿಂದ ಅಸ್ವಸ್ಥರಾಗಿರುವವರು, ಪ್ರವಾಸಕ್ಕೆ ತೆರಳಿರು ವವರು, ವಿದ್ಯಾರ್ಥಿಗಳು, ಹೊರ ದೇಶಗಳಿಂದ ಬಂದು ಇತರ ರಾಜ್ಯಗಳಲ್ಲಿ ಬಾಕಿಯಾದವರು ಸೇರಿದಂತೆ ತುರ್ತು ಅಗತ್ಯಗಳ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ. ಮಾತ್ರವಲ್ಲದೆ, ಹೊರ ರಾಜ್ಯಗಳಿಂದ ಆಗಮಿಸುವವರು 14 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ಗೆ ಒಪ್ಪಿಕೊಂಡೇ ಅರ್ಜಿ ಸಲ್ಲಿಸಿರುತ್ತಾರೆ ಎಂದು ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್ ವಿವರ ನೀಡಿದರು.

ಸೋಂಕಿನ ಲಕ್ಷಣ ಕಂಡು ಬಂದರೆ ವೆನ್ಲಾಕ್ ‌ಗೆ

ಹೊರ ರಾಜ್ಯಗಳಿಂದ ಅಥವಾ ಹೊರ ದೇಶಗಳಿಂದ ಆಗಮಿಸುವವರಲ್ಲಿ ಮೇಲ್ನೋಟಕ್ಕೆ ಕೊರೋನ ಸೋಂಕಿನ ಗುಣ ಲಕ್ಷಣಗಳು ಕಂಡು ಬಂದರೂ ಅವರನ್ನು ನೇರವಾಗಿ ಕೋವಿಡ್ ಆಸ್ಪತ್ರೆಯಾಗಿರುವ ವೆನ್ಲಾಕ್‌ಗೆ ನೇರವಾಗಿ ದಾಖಲಿಸಲಾಗುತ್ತದೆ. ಹಾಗಾಗಿ ಯಾವುದೇ ಶಿಕ್ಷಣ ಸಂಸ್ಥೆ, ಹೊಟೇಲ್‌ಗಳಲ್ಲಿ ಕ್ವಾರಂಟೈನ್‌ಗೊಳಪಡಿಸುವ ಕುರಿತಂತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಗೊಂದಲದ ಅಗತ್ಯವಿಲ್ಲ. ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಹೊರ ರಾಜ್ಯ, ದೇಶಗಳಿಂದ ಆಗಮಿಸುವವರಿಗೆ ವ್ಯವಸ್ಥೆ ಮಾಡಲಿದೆ.

- ಕೋಟ ಶ್ರೀನಿವಾಸ ಪೂಜಾರಿ, ಉಸ್ತುವಾರಿ ಸಚಿವರು, ದ.ಕ. ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X