Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳದ ತಾಯಿ-ಮಗನಿಗೆ ಕೊರೋನ ಸೋಂಕು:...

ಕಾರ್ಕಳದ ತಾಯಿ-ಮಗನಿಗೆ ಕೊರೋನ ಸೋಂಕು: ಪಡೀಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ

ವಾರ್ತಾಭಾರತಿವಾರ್ತಾಭಾರತಿ12 May 2020 6:09 PM IST
share

ಮಂಗಳೂರು, ಮೇ 12: ದ.ಕ.ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಎರಡು ಕೊರೋನ ಸೋಂಕಿನ ಪಾಸಿಟಿವ್ ಪ್ರಕರಣ ದೃಢ ಗೊಂಡಿದೆ. ಇದರೊಂದಿಗೆ ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 33 ಪ್ರಕರಣವು ಪತ್ತೆಯಾದಂತಾಗಿದೆ.

ಕಾರ್ಕಳ ಮೂಲದ 50 ವರ್ಷ ಪ್ರಾಯದ ತಾಯಿ ಮತ್ತು ಅವರ 26 ವರ್ಷ ಪ್ರಾಯದ ಮಗನಿಗೆ ಸೋಂಕು ದೃಢಗೊಂಡಿವೆ. 50 ವರ್ಷದ ಮಹಿಳೆಯು ಪಡೀಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೈಕೆಯಲ್ಲಿ ಅವರ ಮಗ ಕೂಡ ತೊಡಗಿಸಿಕೊಂಡಿದ್ದರು. ಸೀಲ್‌ಡೌನ್ ಆದ ಹಿನ್ನೆಲೆಯಲ್ಲಿ ಇಬ್ಬರೂ ಈ ಆಸ್ಪತ್ರೆಯಲ್ಲೇ ಕ್ವಾರಂಟೈನ್‌ನಲ್ಲಿದ್ದರು. ಇವರ ಗಂಟಲಿನ ದ್ರವದ ಮಾದರಿಯ ಪರೀಕ್ಷಾ ವರದಿಯು ಮಂಗಳವಾರ ಬಂದಿದ್ದು, ಅದರಲ್ಲಿ ಇಬ್ಬರಿಗೂ ಸೋಂಕಿರುವುದು ದೃಢಗೊಂಡಿವೆ. ಇದೀಗ ಇಬ್ಬರನ್ನೂ ವೆನ್ಲಾಕ್-ಕೋವಿಡ್ 19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ಮಂಗಳವಾರದವರೆಗೆ ದೃಢಗೊಂಡ 33 ಪಾಸಿಟಿವ್‌ಗಳ ಪೈಕಿ 25 ದ.ಕ.ಜಿಲ್ಲೆಯ ನಿವಾಸಿಗಳು, ಕಾಸರಗೋಡಿನ 4, ಕಾರ್ಕಳದ 3 ಮತ್ತು ಭಟ್ಕಳದ 1 ಪ್ರಕರಣ ಸೇರಿವೆ. ಪಾಸಿಟಿವ್‌ಗಳ ಪೈಕಿ 14 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಈಗಾಗಲೆ ಬಿಡುಗಡೆ ಗೊಂಡಿದ್ದರೆ, 16 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಪೈಕಿ 14 ಮಂದಿಯ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ಮನಪಾ ವ್ಯಾಪ್ತಿಯ ಕುಲಶೇಖರ-ಶಕ್ತಿನಗರದ ದ 80 ವರ್ಷದ ವೃದ್ಧೆಯು ಪಡೀಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಸಂಪರ್ಕದಿಂದ ಅವರ 50 ವರ್ಷ ಪ್ರಾಯದ ಮಗನಿಗೆ ಸೋಂಕು ತಗುಲಿತ್ತು.

ಬೋಳೂರಿನ 58 ವರ್ಷ ಪ್ರಾಯದ ಮಹಿಳೆ ಕೂಡ ಇಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗ ಎ.30ರಂದು ಸೋಂಕು ದೃಢಪಟ್ಟಿತ್ತು. ಮೇ 1ರಂದು ಈ ಮಹಿಳೆಯ 62 ವರ್ಷ ಪ್ರಾಯದ ಪತಿಗೆ ದೃಢಪಟ್ಟಿತ್ತು. ಮೇ 5ರಂದು ಇವರ 51ರ ಹರೆಯದ ಅಳಿಯನಿಗೆ ಮತ್ತು ಮೇ 6ರಂದು ಇವರ 38ರ ಹರೆಯದ ಮಗಳಿಗೆ ಹಾಗೂ 11ರ ಹರೆಯದ ಮೊಮ್ಮಗಳಲ್ಲಿ ಕೂಡ ಸೋಂಕು ಕಂಡು ಬಂದಿತ್ತು.ಕುಲಶೇಖರ-ಶಕ್ತಿನಗರದ ತಾಯಿ-ಮಗನಿಗೆ, ಬೋಳೂರಿನ ಪತ್ನಿ, ಪತಿ, ಪುತ್ರಿ, ಅಳಿಯ, ಮೊಮ್ಮಗಳು, ಕಾರ್ಕಳದ ತಾಯಿ-ಮಗನಿಗೆ ಹಾಗೂ ಬಂಟ್ವಾಳದಲ್ಲಿ ಪತ್ತೆಯಾದ ಹಲವು ಪ್ರಕರಣ ಹೀಗೆ ಸರಣಿ ಪಾಸಿಟಿವ್‌ಗಳಿಗೆ ಪಡೀಲ್‌ನ ಖಾಸಗಿ ಆಸ್ಪತ್ರೆಯೇ ಮೂಲವಾಗಿರುವುದು ಗಮನಾರ್ಹ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X