Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತೊಂದರೆಗೆ ಸಿಲುಕಿದ ಕನ್ನಡಿಗರು ಆತಂಕಕ್ಕೆ...

ತೊಂದರೆಗೆ ಸಿಲುಕಿದ ಕನ್ನಡಿಗರು ಆತಂಕಕ್ಕೆ ಒಳಗಾಗಬೇಡಿ: ಯುಎಇ ಕನ್ನಡಿಗರ ಜೊತೆ ವಿಡಿಯೋ ಸಂವಾದದಲ್ಲಿ ಬಿಎಸ್‌ವೈ

ವಾರ್ತಾಭಾರತಿವಾರ್ತಾಭಾರತಿ12 May 2020 8:26 PM IST
share
ತೊಂದರೆಗೆ ಸಿಲುಕಿದ ಕನ್ನಡಿಗರು ಆತಂಕಕ್ಕೆ ಒಳಗಾಗಬೇಡಿ: ಯುಎಇ ಕನ್ನಡಿಗರ ಜೊತೆ ವಿಡಿಯೋ ಸಂವಾದದಲ್ಲಿ ಬಿಎಸ್‌ವೈ

ಬೆಂಗಳೂರು, ಮೇ 12: ಯುಎಇಯಿಂದ ಹಿಂದಿರುಗುವ ಅನಿವಾಸಿ ಕನ್ನಡಿಗರನ್ನು ರಾಜ್ಯಕ್ಕೆ ತರೆತರಲು ರಾಜ್ಯ ಸರಕಾರ ಎಲ್ಲ ವ್ಯವಸ್ಥೆ ಮಾಡಲಿದ್ದು, ಅಲ್ಲಿಂದ ಬರುವ ಎಲ್ಲರೂ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್‍ಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಂಗಳವಾರ ಕೋವಿಡ್-19ನಿಂದ ತೊಂದರೆಗೀಡಾದ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಅಲ್ಲಿಂದ ಆಗಮಿಸುವವರಿಗೆ ಬೆಂಗಳೂರು ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಇರುವ ಹೊಟೇಲ್‍ಗಳಲ್ಲಿ ಕ್ವಾರಂಟೈನ್‍ಗೆ ಈಗಾಗಲೇ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಮಂಗಳೂರಿನಲ್ಲಿಯೂ ಆರೋಗ್ಯ ತಪಾಸಣೆ ಹಾಗೂ ಕ್ವಾರಂಟೈನ್ ಮಾಡಲು ಎಲ್ಲ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಸೌಲಭ್ಯ ಇರುವ ಹೊಟೇಲ್‍ಗಳಲ್ಲಿ ಕ್ವಾರಂಟೈನ್ ಆಗುವ ಇಚ್ಛೆ ಇದ್ದವರು ತಾವೇ ಹಣವನ್ನು ಪಾವತಿಸಿ ಇರಬಹುದು. ತೊಂದರೆಗೆ ಸಿಲುಕಿದ ಕನ್ನಡಿಗರು ಆತಂಕಕ್ಕೆ ಒಳಗಾಗದೆ, ಧೈರ್ಯವಾಗಿ ಪರಿಸ್ಥಿತಿಯನ್ನು ಎದುರಿಸಬೇಕು ಎಂದು ಸಲಹೆ ಮಾಡಿದರು.

ವೀಸಾ ಅವಧಿ ಮುಗಿದ ನಿರುದ್ಯೋಗಿಗಳು, ರೋಗಿಗಳು ಇತರೆ ಕಾರಣಗಳಿಂದ ವಾಪಸ್ ಬರಲಾಗದೆ ಸಂಕಷ್ಟಕ್ಕೆ ಸಿಲುಕಿರುವವರನ್ನು ತಾಯ್ನಾಡಿಗೆ ಕರೆತರಲು ರಾಜ್ಯ ಸರಕಾರ ಈಗಾಗಲೇ ವ್ಯವಸ್ಥೆ ಮಾಡಿದೆ ಎಂದ ಯಡಿಯೂರಪ್ಪ, ವಿಮಾನ ವ್ಯವಸ್ಥೆ ಮಾಡಲು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದು, ಅನಿವಾಸಿ ಕನ್ನಡಿಗರ ಎಲ್ಲ ಬೇಡಿಕೆಯನ್ನು ಈಡೇರಿಸಲು ಸರಕಾರ ಎಲ್ಲ ಪ್ರಯತ್ನ ಮಾಡಲಿದೆ ಎಂದರು.

ದೃಢ ಮನಸ್ಸಿನಿಂದ ಇರಿ: ಯುಎಇನಲ್ಲಿಯೇ ಉಳಿದುಕೊಂಡಿರುವ ಕನ್ನಡಿಗರು ಯಾವುದೇ ಕಾರಣಕ್ಕೂ ಹತಾಶರಾಗದೆ ದೃಢ ಮನಸ್ಸಿನಿಂದ ಪರಿಸ್ಥಿತಿಯನ್ನು ಎದುರಿಸಬೇಕು. ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಕರ್ನಾಟಕದಲ್ಲಿರುವ ತಮ್ಮ ಬಂಧು-ಬಳಗದ ಯೋಗಕ್ಷೇಮ ಸರಕಾರದ ಜವಾಬ್ದಾರಿ ಎಂದು ಯಡಿಯೂರಪ್ಪ ಆತ್ಮವಿಶ್ವಾಸ ಮೂಡಿಸಿದರು.

ಕೊರೋನ ಸೋಂಕು ತಡೆಗೆ ರಾಜ್ಯ ಸರಕಾರ ಶ್ರಮಿಸುತ್ತಿದ್ದು, ಶೀಘ್ರವೇ ಈ ಸಂಕಷ್ಟದಿಂದ ಪಾರಾಗುವ ಆಶಾಭಾವ ಇರಲಿ. ನಿಮಗೆ ಏನೇ ತೊಂದರೆ ಎದುರಾದರೂ ಕೇಂದ್ರ ಸರಕಾರದ ಗಮನ ಸೆಳೆದು ಅದನ್ನು ಪರಿಹರಿಸಲು ಎಲ್ಲ ಪ್ರಯತ್ನ ಮಾಡಲಾಗುವುದು. ಅಂತೆಯೇ ರಾಜ್ಯ ಸರಕಾರ ತನ್ನ ಹಂತದಲ್ಲಿ ಕೈಗೊಳ್ಳಬಹುದಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಯಡಿಯೂರಪ್ಪ ಅಭಯ ನೀಡಿದರು.

ದುಬೈನಿಂದ ಬರುವವರಿಗೆ ಕೂಡಲೇ ವಿಮಾನ ವ್ಯವಸ್ಥೆ ಮಾಡಬೇಕು. ಅದರಲ್ಲೂ ಮಂಗಳೂರಿಗೆ ಹೆಚ್ಚಿನ ವಿಮಾನ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ ಯುಎಇನಲ್ಲಿ ಸಾಕಷ್ಟು ಜನ ನಿರುದ್ಯೋಗಿಗಳಾಗಿದ್ದು ರಾಜ್ಯಕ್ಕೆ ಬರಲು ಸಾಧ್ಯವಾಗದೇ ಇದ್ದವರಿಗೆ ಆರ್ಥಿಕ ನೆರವು ನೀಡಬೇಕು. ಕಾರ್ಮಿಕರಿಗೆ ಉಚಿತ ಕ್ವಾರಂಟೈನ್ ವ್ಯವಸ್ಥೆ ಮಾಡಬೇಕು'

-ಅನಿವಾಸಿ ಕನ್ನಡಿಗರು, ಯುಎಇ

ಕೊರೋನ ಸಂಕಷ್ಟದ ಹಿನ್ನೆಲೆಯಲ್ಲಿ ಕುವೈತಿನಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಮರಳಲು ವಿಮಾನ ವ್ಯವಸ್ಥೆ ಮಾಡುವಂತೆ ಅಲ್ಲಿನ ಭಾರತೀಯ ಪ್ರವಾಸಿ ಪರಿಷತ್ತಿನ ಅಧ್ಯಕ್ಷ ರಾಜ್ ಭಂಡಾರಿಯವರು ಕೋರಿದ್ದಾರೆ. ಈಗಾಗಲೇ ಈ ಕೆಲಸ ಆರಂಭಗೊಂಡಿದೆ. ಅನಿವಾಸಿ ಕನ್ನಡಿಗರೇ ಚಿಂತಿಸಬೇಡಿ. ನಿಮ್ಮನ್ನು ತಾಯ್ನಾಡಿಗೆ ಮರಳಿ ಕರೆತರುವ ಜವಾಬ್ದಾರಿ ನಮ್ಮದು'

-ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X