ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 12: ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆ ಮೇ 14 ಇಲ್ಲವೇ 15ರಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ.





