Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 80 ವರ್ಷ ಮೀರಿದವರಿಗೆ ಕ್ಯಾಬಿನ್...

80 ವರ್ಷ ಮೀರಿದವರಿಗೆ ಕ್ಯಾಬಿನ್ ಲಗೇಜ್‌ಗೆ ಅವಕಾಶವಿಲ್ಲ

ವಿಮಾನಯಾನಕ್ಕೆ ಹೊಸ ಮಾರ್ಗಸೂಚಿಗಳು ಪ್ರಕಟ

ವಾರ್ತಾಭಾರತಿವಾರ್ತಾಭಾರತಿ12 May 2020 10:39 PM IST
share
80 ವರ್ಷ ಮೀರಿದವರಿಗೆ ಕ್ಯಾಬಿನ್ ಲಗೇಜ್‌ಗೆ ಅವಕಾಶವಿಲ್ಲ

ಹೊಸದಿಲ್ಲಿ: ದೇಶದಲ್ಲಿ ಮಾರ್ಚ್ 25ರಿಂದ ಸ್ಥಗಿತಗೊಂಡಿರುವ ದೇಶಿ ವಿಮಾನಯಾನ ಸೇವೆ ಪುನರಾರಂಭಕ್ಕೆ ಕರಡು ನಿಗದಿತ ಕಾರ್ಯಾಚರಣೆ ವಿಧಿವಿಧಾನ (ಎಸ್‌ಓಪಿ) ಸಿದ್ಧಪಡಿಸಲಾಗಿದ್ದು, ಇದರ ಅನ್ವಯ ವಿಮಾನಯಾನ ಆರಂಭದ ಬಳಿಕ ಸದ್ಯಕ್ಕೆ ಕ್ಯಾಬಿನ್ ಲಗೇಜ್‌ಗೆ ಅವಕಾಶವಿಲ್ಲ ಹಾಗೂ 80 ವರ್ಷ ಮೀರಿದವರು ವಿಮಾನಯಾನ ಕೈಗೊಳ್ಳುವಂತಿಲ್ಲ.

ಮೊದಲ ಹಂತದಲ್ಲಿ ವಾಣಿಜ್ಯ ವಿಮಾನಗಳ ಹಾರಾಟಕ್ಕೆ ಸರ್ಕಾರ ಈ ಮಾರ್ಗಸೂಚಿಯ ಕರಡು ಸಿದ್ಧಪಡಿಸಿದೆ. ನಾಗರಿಕ ವಿಮಾನಯಾನ ಸಚಿವಾಲಯವು ಪ್ರಯಾಣಿಕರು, ವಿಮಾನಯಾನ ಕಂಪನಿಗಳು, ವಿಮಾನ ನಿಲ್ದಾಣ ನಿರ್ವಹಣೆ ಮಾಡುವವರ ಸಭೆಯನ್ನು ಆಯೋಜಿಸಿದ್ದು, ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಮಧ್ಯದ ಆಸನವನ್ನು ಖಾಲಿ ಬಿಡುವುದು ಕಡ್ಡಾಯ. ಟರ್ಮಿನಲ್ ನಲ್ಲಿ ಗೇಟ್‌ಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪ್ರಯಾಣಿಕರ ಗುರುತಿನ ಚೀಟಿ ತಪಾಸಣೆ ಇರುವುದಿಲ್ಲ.

ವಿಮಾನಯಾನ ಕ್ಷೇತ್ರದ ಎಲ್ಲ ಹಕ್ಕುದಾರರು ಇದನ್ನು ಪರಾಮರ್ಶಿಸಿ ವಾರದ ಒಳಗಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಕರಡು ನಿಯಮಾವಳಿ ಅನ್ವಯ ಮನೆಯಲ್ಲೇ ವೆಬ್ ಚೆಕ್-ಇನ್ ಪೂರ್ಣಗೊಳಿಸಿದ ಬಳಿಕ ಎಲ್ಲ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಬೇಕು. ವಿಮಾನ ನಿಲ್ದಾಣದಲ್ಲಿ ವರದಿ ಮಾಡಿಕೊಳ್ಳುವ ಅವಧಿಯನ್ನು ಎರಡು ಗಂಟೆ ಹೆಚ್ಚಿಸಲಾಗಿದೆ. ಮುಂದಿನ ಆರು ಗಂಟೆಯ ಅವಧಿಯಲ್ಲಿ ಹೊರಡುವ ವಿಮಾನಗಳ ಪ್ರಯಾಣಿಕರನ್ನಷ್ಟೇ ವಿಮಾನ ನಿಲ್ದಾಣದೊಳಕ್ಕೆ ಬಿಡಲಾಗುತ್ತದೆ.

ಕ್ಯಾಬಿನ್ ಲಗೇಜ್ ಒಯ್ಯಲು ಅವಕಾಶವಿಲ್ಲ. ಅಂತೆಯೇ 20 ಕೆ.ಜಿ.ಗಿಂತ ಕಡಿಮೆ ತೂಕದ ಒಂದು ಚೆಕ್ ಇನ್ ಬ್ಯಾಗೇಜ್‌ಗೆ ಮಾತ್ರ ಅವಕಾಶ ಇರುತ್ತದೆ. ವಯಸ್ಸು ಅಥವಾ ದೇಹದ ಉಷ್ಣತೆ ಅಧಿಕ ಇರುವ ಕಾರಣದಿಂದ ವಿಮಾನ ಏರಲು ಅವಕಾಶ ಆಗದಿದ್ದರೆ, ಅಂಥವರು ಯಾವುದೇ ದಂಡ ಇಲ್ಲದೇ ಪ್ರಯಾಣ ದಿನಾಂಕವನ್ನು ಬದಲಿಸಿಕೊಳ್ಳಲು ಅವಕಾಶ ಇರುತ್ತದೆ.

ಎಲ್ಲ ಪ್ರಯಾಣಿಕರು ಆರೋಗ್ಯಸೇತು ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವುದು ಕಡ್ಡಾಯ. ಗ್ರೀನ್ ಸ್ಟೇಟಸ್ ಹೊಂದಿರುವವರು ಮಾತ್ರ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಬಹುದು.

ವಿಮಾನಯಾನ ಕಂಪನಿಗಳು ಚೆಕ್-ಇನ್ ಕೌಂಟರ್‌ಗಳನ್ನು ವಿಮಾನ ಹೊರಡುವ ಮೂರು ಗಂಟೆ ಮೊದಲು ತೆರೆಯಬೇಕು ಹಾಗೂ ವಿಮಾನ ಹೊರಡುವ 60-75 ನಿಮಿಷ ಮುನ್ನ ಮುಚ್ಚಬೇಕು. ವಿಮಾನ ಹೊರಡುವ ಒಂದು ಗಂಟೆ ಮುನ್ನ ವಿಮಾನ ಏರುವ ಪ್ರಕ್ರಿಯೆ ಆರಂಭವಾಗಿ 20 ನಿಮಿಷ ಮೊದಲು ಕೊನೆಗೊಳ್ಳುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X