Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಲಸೆ ಕಾರ್ಮಿಕರ ಸಂಕಷ್ಟಕ್ಕೆ ನೆರವಾಗಲು...

ವಲಸೆ ಕಾರ್ಮಿಕರ ಸಂಕಷ್ಟಕ್ಕೆ ನೆರವಾಗಲು ರಮಾನಾಥ ರೈ ಮನವಿ

ವಾರ್ತಾಭಾರತಿವಾರ್ತಾಭಾರತಿ12 May 2020 11:16 PM IST
share
ವಲಸೆ ಕಾರ್ಮಿಕರ ಸಂಕಷ್ಟಕ್ಕೆ ನೆರವಾಗಲು ರಮಾನಾಥ ರೈ ಮನವಿ

ಬಂಟ್ವಾಳ, ಮೇ 12: ಲಾಕ್‌ಡೌನ್‌ನ ಬಳಿಕ ಊರಿಗೆ ಮರಳಲಾಗದೆ ಉಳಿದಿದ್ದ ಉತ್ತರ ಭಾರತ ಹಾಗೂ ಉತ್ತರ ಕರ್ನಾಟಕ ಭಾಗದ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲು ವ್ಯವಸ್ಥೆ ಕಲ್ಪಿಸುವಂತೆ ಮಾಜಿ ಸಚಿವ ಬಿ.ರಮಾನಾಥ ರೈಯವರು ಬಂಟ್ವಾಳ ತಹಶೀಲ್ದಾರ್ ಅವರನ್ನು ವಿನಂತಿಸಿಕೊಂಡ ಹಿನ್ನಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಕಾರ್ಮಿಕರನ್ನು ಕಳುಹಿಸಿಕೊಡಲು ಬಸ್ಸಿನ ವ್ಯವಸ್ಥೆ ಹಾಗೂ ಉತ್ತರ ಭಾರತದ ಭಾಗದ ಕಾರ್ಮಿಕರು ಊರಿಗೆ ಹೋಗುವವರೆಗೆ ಅವರಿಗೆ ಪಡಿತರ ಸಾಮಗ್ರಿ  ವಿತರಿಸಲು ಕ್ರಮಗೊಳ್ಳಲಾಯಿತು.

ಸೆಲೂನು ಮತ್ತಿತರ ಕಡೆಗಳಲ್ಲಿ ಕೆಲಸ ನಿರ್ವಹಿಸಲು ಉತ್ತರ ಪ್ರದೇಶದಿಂದ ಬಂದಿದ್ದ 9 ಮಂದಿ ಕಾರ್ಮಿಕರು ಹಾಗೂ ಕನಪಾಡಿ ಜಾತ್ರೆಗೆ ಆಗಮಿಸಿದ್ದ ಕಾರವಾರದ ದಂಪತಿ ಹಾಗೂ ಕುಷ್ಠಗಿಯ ಒರ್ವ ಕೂಲಿ ಕಾರ್ಮಿಕ ಊರಿಗೆ ಮರಳಲಾಗದೆ ಬಂಟ್ವಾಳದಲ್ಲೇ ಉಳಿದಿದ್ದರು. ಕನಪಾಡಿಯಲಿದ್ದ ದಂಪತಿಗಳು ತಮ್ಮನ್ನು ಊರಿಗೆ ಕಳುಹಿಸಿ ಕೊಡುವಂತೆ ಬುಧವಾರ ಇಲ್ಲಿನ ಅಧಿಕಾರಿಗಳನ್ನು ಕೇಳಿಕೊಂಡಾಗ ಕಚೇರಿಯಿಂದ ಕಚೇರಿಗೆ ಅಲೆದಾಡಿಸಿದ್ದಾರೆ ಎನ್ನುವ ದೂರಿನ ಮೇರೆ ಮಾಜಿ ಸಚಿವ ಬಿ. ರಮನಾಥ ರೈ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಮಿಕರೊಂದಿಗೆ ಗುರುವಾರ ಬೆಳಗ್ಗೆ ಬಿ.ಸಿ.ರೋಡಿನ ಮಿನಿ ವಿಧಾನ ಸೌಧಕ್ಕೆ ಆಗಮಿಸಿ ರಾಜ್ಯದೊಳಗಿನ ಕಾರ್ಮಿಕರನ್ನು ಊರಿಗೆ ಕಳುಹಿಸಲು ಹಾಗೂ ಉತ್ತರ ಪ್ರದೇಶದ ಕಾರ್ಮಿಕರಿಗೆ ಊರಿಗೆ ಹೋಗುವ ವರೆಗೆ ಅವರಿಗೆ ಪಡಿತರ ನೀಡುವಂತೆ ವಿನಂತಿಕೊಂಡ ಹಿನ್ನಲೆಯಲ್ಲಿ ಗುರುವಾರವೇ ಬಸ್ಸಿನಲ್ಲಿ ರಾಜ್ಯದೊಳಗಿನ ಕಾರ್ಮಿಕರನ್ನು ಕಳುಹಿಸಿ ಕೊಡುವುದಾಗಿ ಹಾಗೂ ಉತ್ತರ ಪ್ರದೇಶದ ಕಾರ್ಮಿಕರಿಗೆ ಪಡಿತರ ಸಾಮಾಗ್ರಿ ನೀಡುವುದಾಗಿ ತಹಶೀಲ್ದಾರ್ ರಶ್ಮಿ ಎಸ್. ಆರ್ ತಿಳಿಸಿದರು.

ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ರಮನಾಥ ರೈ ಮಹರಾಷ್ಟ್ರದಲ್ಲಿ ಹಲವು ಮಂದಿ ಕನ್ನಡಿಗರು ಲಾಕ್‌ಡೌನ್‌ನಿಂದ ಸಿಲುಕಿ ಕೊಂಡಿದ್ದು ಅವರನ್ನು ಊರಿಗೆ ಕರೆತರುವಂತೆ ದೂರವಾಣಿಯ ಮೂಲಕ ವಿನಂತಿಸಿ ಕೊಂಡಿದ್ದಾರೆ. ಬಸ್ಸಿನ ವ್ಯವಸ್ಥೆಗಳನ್ನು ಅಲ್ಲಿನ ಜನರೇ ಕಲ್ಪಿಸಿಕೊಟ್ಟಿದ್ದರೂ ರಾಜ್ಯದಲ್ಲಿ ಅನುಮತಿ ಸಿಗದೇ ಇರುವುದರಿಂದ ಅವರಿಗೆ ಬರಲು ಅಡ್ಡಿಯಾಗಿದೆ.  ಅವರ ಆರೋಗ್ಯ ತಪಾಸಣೆ ಮಾಡಿಸಿ ಸುರಕ್ಷಿತವಾಗಿ ಅವರನ್ನು ಮಹರಾಷ್ಟ್ರದಿಂದ ರಾಜ್ಯಕ್ಕೆ ಕರೆತರುವ ವ್ಯವಸ್ಥೆಯನ್ನು  ಕಲ್ಪಿಸಿಕೊಡು ವಂತೆ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಈ ಸಂದರ್ಭ ಪಕ್ಷ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ವೆಂಕಪ್ಪ ಪೂಜಾರಿ, ಬಂಟ್ವಾಳ ಪುರಸಭಾ ಸದಸ್ಯ ಸಿದ್ದಿಕ್ ಗುಡ್ಡೆ ಅಂಗಡಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X