Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನವನ್ನು ಮಣಿಸಿದ ಸ್ಪೇನ್‌ನ 113...

ಕೊರೋನವನ್ನು ಮಣಿಸಿದ ಸ್ಪೇನ್‌ನ 113 ವರ್ಷದ ವೃದ್ಧೆ

ವಾರ್ತಾಭಾರತಿವಾರ್ತಾಭಾರತಿ13 May 2020 10:22 AM IST
share
ಕೊರೋನವನ್ನು ಮಣಿಸಿದ ಸ್ಪೇನ್‌ನ 113 ವರ್ಷದ ವೃದ್ಧೆ

ಮ್ಯಾಡ್ರಿಡ್(ಸ್ಪೇನ್) ಮೇ 13:ಸ್ಪೇನ್‌ನಲ್ಲಿ ಜೀವಿಸುತ್ತಿರುವ ಅತ್ಯಂತ ಹಿರಿಯ ವ್ಯಕ್ತಿಯಾಗಿರುವ 113ರ ವಯಸ್ಸಿನ ವೃದ್ಧೆಯೊಬ್ಬರು ನಿವೃತ್ತರ ಮನೆಯಲ್ಲಿ ಕೊರೋನ ವೈರಸ್ ವಿರುದ್ಧ ಜಯಶಾಲಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ. ನಿವೃತ್ತರ ಮನೆಯಲ್ಲಿ ದ್ದ ಹಲವು ವೃದ್ಧರು ಕೊರೋನ ವೈರಸ್‌ಗೆ ಸಾವನ್ನಪ್ಪಿದ್ದಾರೆ.

ಅಮೆರಿಕದಲ್ಲಿ ಜನಿಸಿರುವ ಈಗ ಸ್ಪೇನ್‌ನಲ್ಲಿ ಖಾಯಂ ಆಗಿ ನೆಲೆನಿಂತಿರುವ ಮರಿಯಾ ಬ್ರಾನ್ಯಾಸ್‌ಗೆ ಪೂರ್ವ ನಗರ ಒಲ್ಟಾದಲ್ಲಿರುವ ಸಾಂತಾ ಮರಿಯ ಡೆಲ್‌ಟುರಾ ಕೇರ್ ಹೋಮ್‌ನಲ್ಲಿರುವಾಗ ಎಪ್ರಿಲ್‌ನಲ್ಲಿ ಕೊರೋನ ಸೋಂಕು ತಗಲಿತ್ತು. ಮರಿಯಾ ಕೇರ್ ಹೋಮ್‌ನಲ್ಲಿ ಕಳೆದ 20 ವರ್ಷಗಳಿಂದ ನೆಲೆಸಿದ್ದಾರೆ. ತನ್ನ ಕೊಠಡಿಯಲ್ಲಿ ಪ್ರತ್ಯೇಕವಾಗಿದ್ದುಕೊಂಡು ಉಸಿರಾಟಕ್ಕೆ ಸಂಬಂಧಿಸಿ ಸಮಸ್ಯೆಯ ವಿರುದ್ಧ ಹೋರಾಡಿದ್ದಾರೆ.

ಮರಿಯಾ ಕೊರೋನದಿಂದ ಬದುಕುಳಿದಿದ್ದು, ಅವರೀಗ ಚೆನ್ನಾಗಿದ್ದಾರೆ. ಮರಿಯಾ ಅವರಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕೊರೋನ ಲಕ್ಷಣ ಕಾಣಿಸಿಕೊಂಡಿತ್ತು. ಅವರು ಕಳೆದ ವಾರ ಕೊರೋನ ಪರೀಕ್ಷೆಗೆ ಒಳಗಾಗಿದ್ದಾರೆ. ಪರೀಕ್ಷೆಯ ಫಲಿತಾಂಶ ನೆಗೆಟಿವ್ ಬಂದಿತ್ತು ಎಂದು ವೃದ್ದಾಶ್ರಮದ ವಕ್ತಾರೆ ತಿಳಿಸಿದ್ದಾರೆ.

 ಮೂರು ಮಕ್ಕಳ ತಾಯಿಯಾಗಿರುವ ಮರಿಯಾ ಕೊಠಡಿಯಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿದ್ದಾರೆ. ಅವರ ಆರೋಗ್ಯವನ್ನು ಓರ್ವ ವ್ಯಕ್ತಿ ತಪಾಸಣೆ ನಡೆಸುತ್ತಿದ್ದಾರೆ. ರೆಸಿಡೆನ್ಸಿಯ ಸಿಬ್ಬಂದಿ ತುಂಬಾ ಕರುಣೆ ಉಳ್ಳವರು ಹಾಗೂ ಹೆಚ್ಚು ಗಮನ ನೀಡುತ್ತಾರೆ ಎಂದು ಮರಿಯಾ ಶ್ಲಾಘಿಸಿದ್ದಾರೆ.

ನಿಮ್ಮ ಆರೋಗ್ಯದ ಗುಟ್ಟೇನು ಎಂದು ಕೇಳಿದ ಪ್ರಶ್ನೆಗೆ ಉತ್ತಮ ಆರೋಗ್ಯವನ್ನು ಆನಂದಿಸುತ್ತಿರುವುದು ನನ್ನ ಅದೃಷ್ಟ ಎಂದರು. ಮರಿಯಾ ಅವರ ಕುರಿತಂತೆ ಇತ್ತೀಚೆಗಿನ ದಿನಗಳಲ್ಲಿ ಸ್ಪೇನ್‌ನ ಮಾಧ್ಯಮಗಳು ಹಲವು ಲೇಖನಗಳನ್ನು ಪ್ರಕಟಿಸಿದ್ದವು. ಇವರು ದೇಶದಲ್ಲಿ ನೆಲೆಸಿರುವ ಅತ್ಯಂತ ಹಿರಿಯ ವ್ಯಕ್ತಿ ಎಂದು ಹೇಳಿದ್ದವು.

ಮರಿಯಾ 1907,ಮಾರ್ಚ್ 4ರಂದು ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಜನಿಸಿದ್ದರು.ಅವರ ತಂದೆ ಸ್ಪೇನ್‌ನಲ್ಲಿ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದರು. ಮರಿಯಾ ಮೊದಲ ವಿಶ್ವ ಮಹಾಯುದ್ಧ ನಡೆದ ಸಂದರ್ಭದಲ್ಲಿ ಬೋಟ್‌ನಲ್ಲಿ ಸ್ಪೇನ್‌ಗೆ ಬಂದಿದ್ದರು. 1918-19ರಲ್ಲಿ ವಿಶ್ವವ್ಯಾಪಿ ಹಬ್ಬಿದ್ದ ಸ್ಪೇನ್ ಫ್ಲೂ ಸಾಂಕ್ರಾಮಿಕ ಕಾಯಿಲೆ ಹಾಗೂ 1936-39ರಲ್ಲಿ ನಡೆದಿದ್ದ ನಾಗರಿಕ ಯುದ್ಧದ ಪರಿಸ್ಥಿತಿಯನ್ನು ಅನುಭವಿಸಿದ್ದಾರೆ.

ಸ್ಪೇನ್ ಕೊರೋನದಿಂದ ಬಾಧಿತವಾಗಿರುವ ದೇಶಗಳ ಪೈಕಿ ಒಂದಾಗಿದ್ದು, ಇಲ್ಲಿ ಕೋವಿಡ್-19ಗೆ 27,000 ಜನರು ಸಾವನ್ನಪ್ಪಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X