ಒಂದು ದಿನದ ವೇತನ 9.85 ಕೋ.ರೂ.ನ್ನು ಸಿಎಂ ಕೋವಿಡ್ ಪರಿಹಾರ ನಿಧಿಗೆ ನೀಡಿದ ಕೆಎಸ್ಸಾರ್ಟಿಸಿ ಸಿಬ್ಬಂದಿ

ಬೆಂಗಳೂರು, ಮೇ 13: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ಸಂಸ್ಥೆಗಳ ಸಮಸ್ತ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಒಂದು ದಿನದ ವೇತನದ ಮೊತ್ತ 9.85 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳ ‘ಕೋವಿಡ್ ಪರಿಹಾರ ನಿಧಿ’ಗೆ ದೇಣಿಗೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ದೇಣಿಗೆ ಚೆಕ್ ಅನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂ.ಸವದಿ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ,
ಡಾ.ರಾಮ್ ನಿವಾಸ್ ಸಪೆಟ್, ನಿರ್ದೇಶಕಿ ಕವಿತಾ ಎಸ್ ಮನ್ನಿಕೇರಿ, ಎಚ್.ಕೆ.ರಮಾಮಣಿ ಉಪಸ್ಥಿತರಿದ್ದರು.
Next Story









