Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಮಿಕ ಇಲಾಖೆ ನೀಡಿದ ಅಕ್ಕಿ ಚೀಲದಲ್ಲಿ...

ಕಾರ್ಮಿಕ ಇಲಾಖೆ ನೀಡಿದ ಅಕ್ಕಿ ಚೀಲದಲ್ಲಿ ಕೊಳೆತ ಅಕ್ಕಿ!

ಕಾರ್ಮಿಕರಿಗೆ ಕಳಪೆ ಅಕ್ಕಿ ವಿತರಣೆ ಆರೋಪ

ವಾರ್ತಾಭಾರತಿವಾರ್ತಾಭಾರತಿ13 May 2020 6:36 PM IST
share

ಮಂಗಳೂರು, ಮೇ 13: ಲಾಕ್‌ಡೌನಿಂದಾಗಿ ಸಂಕಷ್ಟದಲ್ಲಿದ್ದು, ತಮ್ಮ ಊರುಗಳಿಗೆ ತೆರಳಲು ಹಣವೂ ಇಲ್ಲದೆ ಒದ್ದಾಡುತ್ತಿರುವ ಸಾವಿರಾರು ಕಾರ್ಮಿಕರು ಜೋಕಟ್ಟೆಯಲ್ಲಿ ಪರಿಸರದಲ್ಲಿ ಅತಂತ್ರರಾಗಿದ್ದಾರೆ. ಈ ನಡುವೆ, ಅವರಿಗೆ ಜಿಲ್ಲಾಡಳಿತದ ಭಾಗವಾಗಿ ಕೆಲ ದಿನಗಳ ಹಿಂದೆ ಕಾರ್ಮಿಕ ಇಲಾಖೆ ಪೂರೈಕೆ ಮಾಡಿದ ಅಕ್ಕಿ ಕೂಡಾ ಕಳಪೆ ಮಟ್ಟದ್ದಾಗಿದ್ದು, ಕೊಳೆತು ಹೋಗಿರುವ ಆರೋಪ ವ್ಯಕ್ತವಾಗಿದೆ.

ಉತ್ತರ ಪ್ರದೇಶ, ಬಿಹಾರದ ವಲಸೆ ಕಾರ್ಮಿಕರು ಊರಿಗೆ ತೆರಳುವ ನಿಟ್ಟಿನಲ್ಲಿ ನಗರದ ಜೋಕಟ್ಟೆ ಪ್ರದೇಶದಲ್ಲಿ ಬೀಡು ಬಿಟ್ಟಿದ್ದಾರೆ. ಅಲ್ಲಿಂದ ರೈಲಿನ ಮೂಲಕ ತೆರಳಬಹುದು ಎಂಬ ನಿರೀಕ್ಷೆಯಲ್ಲಿ ದಿನ ಕಳೆಯುತ್ತಿದ್ದಾರೆ. ಜೋಕಟ್ಟೆ ವ್ಯಾಪ್ತಿಯ ಎಂಆರ್‌ಪಿಎಲ್, ಎಸ್‌ಇಝೆಡ್ ಸುತ್ತಮುತ್ತಲ ಪರಿಸರದಲ್ಲಿ ಅಲಲ್ಲಿ ತಂಗಿರುವ ಈ ಕಾರ್ಮಿಕರಿಗೆ ಗುತ್ತಿಗೆದಾರರಾಗಲಿ, ಇವರನ್ನು ದುಡಿಸಿಕೊಂಡಿರುವ ಕಂಪನಿಗಳಾಗಲಿ ಲಾಕ್‌ಡೌನ್ ಸಂದರ್ಭದಲ್ಲಿಯೂ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಲ್ಲ. ಅವರನ್ನು ಊರಿಗೆ ಕಳುಹಿಸುವ ವ್ಯವಸ್ಥೆಯನ್ನೂ ಮಾಡಿಲ್ಲ. ಈ ನಡುವೆ ಕೆಲ ದಿನಗಳ ಹಿಂದೆ ಈ ಕಾರ್ಮಿಕರು ಕಂಪನಿ ಎದುರು ಊರಿಗೆ ಹೋಗುವುದಾಗಿ ಪ್ರತಿಭಟಿಸಿದಾಗ ಅವರಿಗೆ ರೈಲು ವ್ಯವಸ್ಥೆ ಮಾಡುವ ಭರವಸೆ ನೀಡಲಾಗಿತ್ತು. ಇದೇ ವೇಳೆ ಜಿಲ್ಲಾಡಳಿತದ ಭಾಗವಾಗಿ ಕಾರ್ಮಿಕ ಇಲಾಖೆ ಈ ಕಾರ್ಮಿಕರಿಗೆ ತಲಾ 10 ಕೆಜಿಯ 100 ಚೀಲ ಅಕ್ಕಿಯನ್ನು ಪೂರೈಸಿತ್ತು. ಸ್ಥಳೀಯ ಪಂಚಾಯತ್ ಮುಖಂಡರು ಈ ಅಕ್ಕಿ ಚೀಲವನ್ನು ಕಾರ್ಮಿಕರಿಗೆ ತಲುಪಿಸಿದ್ದರು. ಆದರೆ ತಲುಪಿಸಿದ ಬಳಿಕ ಆ ಚೀಲದಲ್ಲಿದ್ದ ಅಕ್ಕಿ ಕಳಪೆ, ಕೊಳೆತು ಹುಳು ಹಿಡಿದಿರುವುದು ಗೊತ್ತಾಗಿದೆ. ಹಾಗಾಗಿ ಪ್ರಸ್ತುತ ಪಂಚಾಯತ್ ಸದಸ್ಯರು ಹಾಗೂ ಜೋಕಟ್ಟೆ ನಾಗರಿಕ ಹೋರಾಟ ಸಮಿತಿಯ ಮುಖಂಡರೂ ಆಗಿರುವ ಅಬೂಬಕ್ಕರ್ ನೇತೃತ್ವದಲ್ಲಿ ಈ ಕಾರ್ಮಿಕರಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಕಾರ್ಮಿಕರು ತಮ್ಮ ಊರುಗಳಿಗೆ ಹಿಂತಿರುಗಲು ಹಾತೊರೆಯುತ್ತಿದ್ದಾರೆ. ಕೈಯ್ಯಲ್ಲಿ ದುಡ್ಡಿಲ್ಲದೆ ಊರಿಗೂ ತೆರಳಲಾಗದೆ, ಇಲ್ಲಿಯೂ ಇರಲು ವ್ಯವಸ್ಥೆಯಿಲ್ಲದೆ ಹತಾಶರಾಗಿದ್ದಾರೆ.

‘‘ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ನಾವೆಲ್ಲಾ ತೊಂದರೆಗೊಳಗಾಗಿದ್ದೇವೆ. ಉತ್ತರ ಪ್ರದೇಶ, ಬಿಹಾರದ ಜನತೆ ಊರಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಊರಿಗೆ ತೆರಳಲು ಮಾತ್ರವಲ್ಲ ಊಟ ತಿಂಡಿಗೂ ಹಣವಿಲ್ಲ. ಊರಿಗೆ ಹೋಗಲು ಬಯಸಿರುವ ನಮ್ಮನ್ನು ಅಲ್ಲಿಂದ ಇಲ್ಲಿಗೆ ಅಲೆದಾಡಿಸಲಾಗುತ್ತಿದೆ. ಈ ಅಲೆದಾಟದಲ್ಲೇ ನಮ್ಮಲ್ಲಿ ಇದ್ದ ಚಿಲ್ಲರೆ ಹಣವೂ ಖರ್ಚಾಗಿದೆ. ಈ ನಡುವೆ ಜಿಲ್ಲಾಡಳಿತದ ವತಿಯಿಂದ ನೀಡಲಾದ ಅಕ್ಕಿ ವಾಸನೆಯಿಂದ ಕೂಡಿದ್ದು ಉಪಯೋಗಿಸುವಂತಿಲ್ಲ’’ ಎಂದು ಉತ್ತರ ಪ್ರದೇಶದ ಗೋರಕ್‌ಪುರದ ಲಕ್ಷ್ಮಣ ಸಹಾನಿ ಎಂಬವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಹಾರ ಸಾಮಗ್ರಿ ವಿತರಣೆಯಲ್ಲಿ ಭ್ರಷ್ಟಾಚಾರ- ತನಿಖೆಯಾಗಲಿ

‘‘ಜೋಕಟ್ಟೆ ಪರಿಸರದಲ್ಲಿ ಸುಮಾರು ನಾಲ್ಕು ಸಾವಿರದಷ್ಟು ಉತ್ತರ ಭಾರತದ ವಲಸೆ ಕಾರ್ಮಿಕರಿದ್ದಾರೆ. ಅವರಿಗೆ ಗುತ್ತಿಗೆದಾರರು, ಕಂಪನಿಗಳು ಯಾವುದೇ ರೀತಿಯ ಮೂಲಭೂತ ಸೌಕರ್ಯ ಒದಗಿಸಿಲ್ಲ. ಕನಿಷ್ಠ ಊಟೋಪಚಾರದ ವ್ಯವಸ್ಥೆಯನ್ನೂ ಮಾಡಿಲ್ಲ. ಕೆಲ ದಿನಗಳ ಹಿಂದೆ ಸಾವಿರಾರು ಕಾರ್ಮಿಕರು ಪ್ರತಿಭಟನೆ ನಡೆಸಿದಾಗ ಅವರಿಗೆ ರೈಲಿನ ವ್ಯವಸ್ಥೆ ಮಾಡುವ ಭರವಸೆ ನೀಡಲಾಗಿತ್ತಾದರೂ ವ್ಯವಸ್ಥೆ ಆಗಿಲ್ಲ. ಈ ನಡುವೆ ಅವರಿಗೆ ಕಾರ್ಮಿಕ ಇಲಾಖೆಯಿಂದ ಪೂರೈಕೆ ಮಾಡಲಾದ ಅಕ್ಕಿ ಇಲಿ ಹೆಗ್ಗಣಗಳೂ ಮುಟ್ಟಲು ಸಾಧ್ಯವಿಲ್ಲದಂತಿದೆ. ಜನರ ಜೀವದ ಜತೆಗೆ ಅದರಲ್ಲೂ ವಲಸೆ ಕಾರ್ಮಿಕರನ್ನು ಅತ್ಯಂತ ನಿಕೃಷ್ಟವಾಗಿ ನೋಡುತ್ತಿರುವುದು ಖಂಡನೀಯ. ಆಹಾರ ವಿತರಣೆಯಲ್ಲಿ ಭಾರೀ ಭ್ರಷ್ಟಾಚಾರವಾಗಿದೆ. ಕೊಳೆತ ಅಕ್ಕಿಗೂ ಬಿಲ್ ಮಾಡಲಾಗುತ್ತಿದೆ. ಈ ಬಗ್ಗೆ ತನಿಖೆಯಾಗಬೇಕು. ಜನಪ್ರತಿನಿಧಿಗಳು ಏನು ಮಾಡುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ’’ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ವಿಷಾಹಾರ!
‘‘ವಲಸೆ ಕಾರ್ಮಿಕರ ಸ್ಥಿತಿ ನೋಡುವಾಗ ದು:ಖವಾಗುತ್ತಿದೆ. ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡಲಾಗದ ಪರಿಸ್ಥಿತಿ ನಮ್ಮ ಆಡಳಿತದ್ದು. ಅಕ್ಕಿಯ ರೂಪದಲ್ಲಿ ಕಾರ್ಮಿಕರಿಗೆ ವಿಷಾಹಾರ ನೀಡಲಾಗಿದೆ. ಈ ಬಗ್ಗೆ ಅಧಿಕಾರಿಗಳೂ ಗಮನ ಹರಿಸಿಲ್ಲ’’ ಎಂದು ಸ್ಥಳೀಯ ಪಂಚಾಯತ್ ಸದಸ್ಯ ಅಬೂಬಕ್ಕರ್ ಆಕ್ಷೇಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X