ಗರ್ಭಿಣಿಯರ ಗಂಟಲಿನ ದ್ರವ ವರದಿ ನೆಗೆಟಿವ್ ಬಂದರೆ ಹೋಂ ಕ್ವಾರಂಟೈನ್ : ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಮೇ 13: ಕೋವಿಡ್ -19ಗೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಹೊರಡಿಸಿದ ಹೊಸ ಮಾರ್ಗಸೂಚಿಯ ಅನ್ವಯ ಗರ್ಭಿಣಿಯರು, 10 ವರ್ಷ ಪ್ರಾಯಕ್ಕಿಂತ ಕೆಳಗಿನವರು ಮತ್ತು 80 ವರ್ಷ ಪ್ರಾಯ ಮೇಲ್ಪಟ್ಟ, ವಿದೇಶಿ ಪ್ರಯಾಣಿಕರಲ್ಲಿ ಗಂಟಲಿನ ದ್ರವದ ಮಾದರಿಯ ಪರೀಕ್ಷೆಯ ಪ್ರಥಮ ವರದಿಯಲ್ಲಿ ನೆಗೆಟಿವ್ ಬಂದರೆ ಅವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಬುಧವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು ಈವರೆಗೆ ಸತತ 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರಬೇಕಿತ್ತು. ಇದೀಗ ಹೊಸ ಮಾರ್ಗಸೂಚಿಯ ಅನ್ವಯ ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. ಕ್ವಾರಂಟೈನ್‌ಗೆ ಒಳಗಾದ ಬಳಿಕದ 12ನೆ ದಿನದಲ್ಲಿ ಮಾಡಲಾಗುವ ಗಂಟಲಿನ ದ್ರವ ಮಾದರಿಯ ಪರೀಕ್ಷೆಯ ವರದಿಗೆ ಕಾಯಬೇಕಾಗಿಲ್ಲ. ಮೊದಲ ವರದಿಯು ನೆಗೆಟಿವ್ ಬಂದರೆ ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗುವುದು ಎಂದರು.
Next Story





