Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಅನಾಮಧೇಯ ಸೂಟ್‍ಕೇಸ್...

ಚಿಕ್ಕಮಗಳೂರು: ಅನಾಮಧೇಯ ಸೂಟ್‍ಕೇಸ್ ಸೃಷ್ಟಿಸಿದ ಅವಾಂತರ

ಸೂಟ್‍ಕೇಸ್ ಇಟ್ಟು ನಾಪತ್ತೆಯಾದ ಮಹಿಳೆಯ ಚಲನವಲನ ಸಿಸಿ ಕ್ಯಾಮರದಲ್ಲಿ ಸೆರೆ

ವಾರ್ತಾಭಾರತಿವಾರ್ತಾಭಾರತಿ13 May 2020 9:33 PM IST
share
ಚಿಕ್ಕಮಗಳೂರು: ಅನಾಮಧೇಯ ಸೂಟ್‍ಕೇಸ್ ಸೃಷ್ಟಿಸಿದ ಅವಾಂತರ

ಚಿಕ್ಕಮಗಳೂರು, ಮೇ 13: ನಗರದಲ್ಲಿ ಅನಾಮಧೇಯ ಸೂಟ್‍ಕೇಸ್ ಒಂದು ಸಾರ್ವಜನಿಕರು ಹಾಗೂ ಪೊಲೀಸರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ಬುಧವಾರ ವರದಿಯಾಗಿದ್ದು, ಬಸವನಹಳ್ಳಿ ಮುಖ್ಯರಸ್ತೆ ಬದಿಯ ಪಾದಚಾರಿ ರಸ್ತೆಯಲ್ಲಿದ್ದ ಮರವೊಂದಕ್ಕೆ ಒರಗಿಸಿಟ್ಟಿದ್ದ ಸೂಟ್‍ಕೇಸ್ ಅನ್ನು ವಶಕ್ಕೆ ಪಡೆದಿರುವ ಪೊಲೀಸರು ಶ್ವಾನದಳ ಹಾಗೂ ಬಾಂಬ್ ನಿಷ್ಕ್ರೀಯದಳದ ಸಿಬ್ಬಂದಿ ಮೂಲಕ ಪರಿಶೀಲನೆಗೊಳಪಡಿಸಿದ್ದಾರೆ.

ರಸ್ತೆ ಬದಿಯೊಂದರ ಬಳಿ ಇರುವ ಮರದ ಬುಡದಲ್ಲಿ ಅನಾಮಧೇಯ ಸೂಟ್‍ಕೇಸ್ ಒಂದು ಬುಧವಾರ ಪತ್ತೆಯಾಗಿದ್ದು, ಅನಾಮಧೇಯ ಮಹಿಳೆಯೊಬ್ಬರು ನಗರದ ಮುಖ್ಯ ರಸ್ತೆಯಲ್ಲಿ ಸೂಟ್‍ಕೇಸ್ ತಂದಿಟ್ಟು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಂಪು ಬಣ್ಣದ ಚೂಡಿದಾರ ಧರಿಸಿರುವ ಮಹಿಳೆ ನಗರದ ಬಸವನಹಳ್ಳಿ ಮುಖ್ಯರಸ್ತೆಯ ಮರದ ಕೆಳಗೆ ಸೂಟ್‍ಕೇಸ್ ಇಟ್ಟು ಹೋಗಿರುವುದು ಕ್ಯಾಮರಾದಲ್ಲಿ ಕಂಡುಬಂದಿದೆ. ರಸ್ತೆ ಈ ರಸ್ತೆಯಲ್ಲಿರುವ ಹೋಟೆಲೊಂದರ ಸಿಸಿ ಟಿವಿ ಕ್ಯಾಮರದಲ್ಲಿ ಮಹಿಳೆಯ ಚಲನವಲನ ಸೆರೆಯಾಗಿದ್ದು, ಒಂದು ಕೈಯಲ್ಲಿ ಸೂಟ್ಕೇಸ್ ಹಿಡಿದಿದ್ದ ಮಹಿಳೆ ಮೊಬೈಲ್‍ನಲ್ಲಿ ಸಂಭಾಷಣೆ ನಡೆಸುತ್ತ ಬಂದು ರಸ್ತೆಯ ಪಾದಚಾರಿ ರಸ್ತೆಯಲ್ಲಿದ್ದ ಮರವೊಂದರ ಬಳಿ ಕೆಲ ಹೊತ್ತು ನಿಂತು ಮೊಬೈಲ್‍ನಲ್ಲಿ ಮಾತನಾಡುತ್ತಲೇ ತನ್ನ ಕೈಯಲ್ಲಿದ್ದ ಸೂಟ್‍ಕೇಸ್ ನ್ನು ಮರಕ್ಕೆ ಒರಗಿಸಿ ಇಟ್ಟಿದ್ದಾಳೆ. 

ನಂತರ ಕೆಲ ನಿಮಿಷಗಳವರೆಗೆ ಮರದ ಬಳಿಯೇ ನಿಂತು ಮೊಬೈಲ್‍ನಲ್ಲಿ ಮಾತನಾಡುವ ಮಹಿಳೆ ಕ್ಷಣಮಾತ್ರದಲ್ಲಿ ಅಲ್ಲಿಂದ ಮೊಬೈಲ್‍ನಲ್ಲಿ ಮಾತನಾಡುತ್ತಲೇ ಅದೇ ರಸ್ತೆಯಲ್ಲಿ ಮುಂದಕ್ಕೆ ತೆರಳುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮರದ ಬುಡದಲ್ಲಿ ಅನಾಮಧೇಯ ಸೂಟ್‍ಕೇಸ್ ಇಟ್ಟಿರುವುದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬಸವನಹಳ್ಳಿ ಠಾಣೆಯ ಪೊಲೀಸರು ಸೂಟ್‍ಕೇಸ್ ಅನ್ನು ಶಸಸ್ತ್ರ ಮೀಸಲು ಪಡೆಯ ಕವಾಯತು ಮೈದಾನಕ್ಕೆ ಕೊಂಡೊಯ್ದಿದ್ದು, ಸ್ಪೋಟಕ ವಸ್ತುಗಳಿರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಪೊಲೀಸರು ಸೂಟ್‍ಕೇಸ್ ತೆರೆಯುವ ಸಾಹಸಕ್ಕೆ ಮುಂದಾಗಿಲ್ಲ. ಸೂಟ್‍ಕೇಸ್ ಒಳಗೆ ಏನಿದೆ ಎಂಬುದು ನಿಗೂಢವಾಗಿದ್ದು, ಶ್ವಾನದಳದ ಮೂಲಕ ಸೂಟ್ಕೇಸ್‍ನ್ನು ಪರೀಶಿಲಿಸಲಾಗಿದ್ದು, ಸೂಟ್‍ಕೇಸ್ ಇಟ್ಟಿರುವ ಮಹಿಳೆಯ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ.

ಸೂಟ್‍ಕೇಸ್ನಲ್ಲಿ ಸ್ಪೋಟಕ ವಸ್ತುಗಳು ಇರಬಹುದಾದ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬಾಂಬ್ ನಿಷ್ಕ್ರೀಯ ದಳವನ್ನು ನಗರಕ್ಕೆ ಕರೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದ್ದು, ಘಟನೆಯ ಸಂಬಂಧ ತನಿಖೆಯ ನಂತರ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಘಟನೆ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X