Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬರುವ...

ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬರುವ ನಾಗರಿಕರಿಗೆ ಬೆಳಗಾವಿ ಗಡಿಯಲ್ಲಿ ಸಹಾಯಕೇಂದ್ರ : ಡಿಸಿ

ವಾರ್ತಾಭಾರತಿವಾರ್ತಾಭಾರತಿ13 May 2020 9:55 PM IST
share

ಉಡುಪಿ, ಮೇ 13: ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬರುವ ಸಾರ್ವಜನಿಕರಿಗೆ ರಾಜ್ಯಕ್ಕೆ ಪ್ರವೇಶಿಸಲು ಅಗತ್ಯ ನೆರವು ನೀಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಸೂಚನೆಯಂತೆ ಉಡುಪಿಯಿಂದ ತೆರಳಿರುವ ಅಧಿಕಾರಿಗಳ ತಂಡ, ಬೆಳಗಾವಿ ಗಡಿಭಾಗ ವಾದ ನಿಪ್ಪಾಣಿಯಲ್ಲಿ ತೆರೆದಿರುವ ಸಹಾಯಕೇಂದ್ರದಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ.

 ಮಹಾರಾಷ್ಟ್ರದಿಂದ ಬರುವ ಜಿಲ್ಲೆಯ ನಾಗರಿಕರ ಉಡುಪಿ ಜಿಲ್ಲೆಯ ವಿಳಾಸದ ಕುರಿತು ಪರಿಶೀಲನೆ ನಡೆಸಿ ಅದನ್ನು ದೃಢೀಕರಿಸಿ, ಅವರು ರಾಜ್ಯ ಪ್ರವೇಶಿಸಲು ಸಹಾಯ ಮಾಡುವುದು ಮಾತ್ರವಲ್ಲದೇ ಉಡುಪಿ ಜಿಲ್ಲೆಗೆ ಆಗಮಿಸಿದ ನಂತರದ ಇಲ್ಲಿನ ಕ್ವಾರಂಟೈನ್ ಕ್ರಮಗಳು, ಜಿಲ್ಲಾಡಳಿತ ಒದಗಿಸುವ ಸೌಲಭ್ಯಗಳು ಮತ್ತಿತರ ಅಗತ್ಯ ಮಾಹಿತಿಗಳನ್ನು ಸಹ ಇಲ್ಲಿ ನೀಡಲಾಗುತ್ತದೆ.

ಈ ಮೂಲಕ ಜಿಲ್ಲೆಗೆ ಬರುವ ನಾಗರಿಕರ ಅನಗತ್ಯ ಆತಂಕವನ್ನು ದೂರ ಮಾಡಿ, ನಿರಾಳವಾಗಿ ಜಿಲ್ಲೆ ತಲುಪಲು ಬೇಕಾದ ವ್ಯವಸ್ಥೆಯನ್ನು ಮಾಡಲಾ ಗುತ್ತದೆ. ಅಲ್ಲದೇ ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಸಾರ್ವಜನಿಕರ ಸಂಪೂರ್ಣ ವಿವರಗಳನ್ನು ಅವರು ಜಿಲ್ಲೆ ತಲುಪುವ ಮೊದಲೇ ಜಿಲ್ಲಾಡಳಿತಕ್ಕೆ ತಲುಪಿಸಲಾಗುತ್ತಿದೆ.

ಈ ತಂಡ ಕಾರ್ಯ ನಿರ್ವಹಿಸುವ ಮೊದಲು, ರಾಜ್ಯದ ಗಡಿ ಪ್ರವೇಶಿಸಲು ಅನೇಕ ಸಮಸ್ಯೆ ಎದುರಿಸುತ್ತಿದ್ದ ಜಿಲ್ಲೆಯ ಸಾರ್ವಜನಿಕರು ಈಗ ಸುಗಮವಾಗಿ ಆಗಮಿಸುತ್ತಿದ್ದು, ಪ್ರಸ್ತುತ ಪ್ರತಿನಿತ್ಯ ಸರಾಸರಿ 600 ಮಂದಿ ಉಡುಪಿ ಜಿಲ್ಲೆಯ ನಾಗರಿಕರು ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಿಂದ ನಿಪ್ಪಾಣಿ ಗಡಿಗೆ ಆಗಮಿಸುತ್ತಿದ್ದಾರೆ. ಇವರಿಗೆ ಕರ್ನಾಟಕ ರಾಜ್ಯ ಪ್ರವೇಶಿಸಿ, ಉಡುಪಿ ಜಿಲ್ಲೆಗೆ ಆಗಮಿಸಲು ಈ ತಂಡದ ಮೂಲ ಅಗತ್ಯ ನೆರವು ನೀಡಲಾಗುತ್ತಿದೆ.

ಈ ತಂಡದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಮತ್ತು ಸಹಾಯಕರಾಗಿ ಜಿಲ್ಲಾ ನಗರಾಭಿವೃಧ್ದಿ ಕೋಶದ ಕಾಶೀನಾಥ್ ಕಾರ್ಯ ನಿರ್ವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X