Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನುದಾನದ ಕೊರತೆ: ಮೈತ್ರಿ ಸರಕಾರದ...

ಅನುದಾನದ ಕೊರತೆ: ಮೈತ್ರಿ ಸರಕಾರದ 'ಮಾತೃಶ್ರೀ' ಯೋಜನೆಗೆ ಇತಿಶ್ರೀ ಹಾಡಿದ ಬಿಜೆಪಿ ಸರಕಾರ

-ಯುವರಾಜ್ ಮಾಳಗಿ-ಯುವರಾಜ್ ಮಾಳಗಿ14 May 2020 8:16 PM IST
share
ಅನುದಾನದ ಕೊರತೆ: ಮೈತ್ರಿ ಸರಕಾರದ ಮಾತೃಶ್ರೀ ಯೋಜನೆಗೆ ಇತಿಶ್ರೀ ಹಾಡಿದ ಬಿಜೆಪಿ ಸರಕಾರ

ಬೆಂಗಳೂರು, ಮೇ 14: ರಾಜ್ಯದಲ್ಲಿ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ಅಪೌಷ್ಟಿಕತೆಯಿಂದ ನರಳುತ್ತಿದ್ದು, ಇಂತಹ ಸಂದರ್ಭದಲ್ಲಿ ಮೈತ್ರಿ ಸರಕಾರ ಜಾರಿಗೊಳಿಸಿದ್ದ ಜನಪ್ರಿಯ ಯೋಜನೆಯಾದ 'ಮುಖ್ಯಮಂತ್ರಿ ಮಾತೃಶ್ರೀ' ಯೋಜನೆಯನ್ನು ಬಿಜೆಪಿ ಸರಕಾರ ಸ್ಥಗಿತಗೊಳಿಸಿದೆ.

ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕ, ಆರೋಗ್ಯ ಮಟ್ಟ ಸುಧಾರಿಸಲು ಹಾಗೂ ಹೆರಿಗೆ ಖರ್ಚಿಗಾಗಿ ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯಡಿ 6 ಸಾವಿರ ರೂ. ನೀಡಲಾಗುತ್ತಿದ್ದು, ಅನುದಾನದ ಕೊರತೆಯಿಂದ ಸರಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿದೆ. ಲಾಕ್‍ಡೌನ್ ನಡುವೆ ಗರ್ಭಿಣಿಯರು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಎರಡು ತಿಂಗಳಲ್ಲಿ 1,206 ನವಜಾತ ಶಿಶುಗಳು ಮೃತಪಟ್ಟಿವೆ. ಇಂತಹ ಗಂಭೀರ ಪರಿಸ್ಥಿತಿ ನಡುವೆಯೂ ಯೋಜನೆಯನ್ನು ಸ್ಥಗಿತಗೊಳಿಸಿದೆ.

ಪ್ರಸ್ತುತ ರಾಜ್ಯದಲ್ಲಿ 4.19 ಲಕ್ಷ ಗರ್ಭಿಣಿಯರು, 4.02 ಲಕ್ಷ ಬಾಣಂತಿಯರು ಇದ್ದು, ಒಟ್ಟಾರೆ 8.22 ಲಕ್ಷ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿತ್ತು. ಆದರೀಗ ಯೋಜನೆ ಸ್ಥಗಿತದಿಂದ ಗರ್ಭಿಣಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

2018ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್‍ನಲ್ಲಿ ಮಾತೃಶ್ರೀ ಯೋಜನೆ ಘೋಷಿಸಿ, ಯೋಜನೆ ಯಶಸ್ವಿ ಅನುಷ್ಠಾನಕ್ಕೆ 250 ಕೋಟಿ ರೂ. ಮೀಸಲಿಟ್ಟಿದ್ದರು. ಮುಂದಿನ 5 ವರ್ಷದಲ್ಲಿ ಹಂತ ಹಂತವಾಗಿ ಈ ಮೊತ್ತವನ್ನು ಹೆಚ್ಚಿಸುವುದಾಗಿ ಬಜೆಟ್‍ನಲ್ಲಿ ತಿಳಿಸಿದ್ದರು. ಆದರೆ, ಲಾಕ್‍ಡೌನ್ ಹಿನ್ನೆಲೆ ಸರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅನುದಾನದ ಕೊರತೆಯ ನೆಪವೊಡ್ಡಿ ಯೋಜನೆ ಸ್ಥಗಿತಗೊಳಿಸಿದೆ.

ಏನಿದು ಮಾತೃಶ್ರೀ ಯೋಜನೆ?: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಕುಟುಂಬ) ಗರ್ಭಿಣಿ ಮಹಿಳೆಯರಿಗಾಗಿ ರಾಜ್ಯ ಸರಕಾರ ಈ ಯೋಜನೆ ಪ್ರಕಟಿಸಿತ್ತು. ಈಗಾಗಲೇ ರಾಜ್ಯ ಸರಕಾರದ ಮಾತೃಪೂರ್ಣ ಮತ್ತು ಕೇಂದ್ರ ಸರಕಾರ ಮಾತೃವಂದನಾ ಯೋಜನೆಗಳು ಕೂಡ ಜಾರಿಯಲ್ಲಿದ್ದು, ಇವುಗಳೊಂದಿಗೆ ಮಾತೃಶ್ರೀ ಯೋಜನೆಯನ್ನು ಹೊಸದಾಗಿ ರೂಪಿಸಲಾಗಿತ್ತು. ಯೋಜನೆ ಮುಖಾಂತರ ಫಲಾನುಭವಿಗಳು ಒಟ್ಟು 6 ಸಾವಿರ ರೂ. ಪಡೆಯಬಹುದಾಗಿದೆ. ಇದನ್ನು ಎರಡು ಹಂತದಲ್ಲಿ ನೀಡಲಾಗುತ್ತದೆ. ಮೊದಲನೆಯದು ಹೆರಿಗೆ ಪೂರ್ವದ ಮೂರು ತಿಂಗಳಿಗೆ ತಲಾ ಒಂದು ಸಾವಿರ ರೂ. ಹಾಗೂ ಹೆರಿಗೆ ನಂತರದ ಮೂರು ತಿಂಗಳು ತಲಾ ಒಂದು ಸಾವಿರ ರೂ. ನೀಡಲಾಗುತ್ತದೆ. ಈ ಹಣವನ್ನು ಆರೋಗ್ಯ ಮಟ್ಟ ಹಾಗೂ ಪೌಷ್ಟಿಕತೆ ಸುಧಾರಣೆಗೆ ಬಳಸಬಹುದಾಗಿತ್ತು. ಮಾತೃಶ್ರೀ ಯೋಜನೆಯ ಮೇಲುಸ್ತುವಾರಿಯನ್ನು ಆಯಾ ಗ್ರಾಮಗಳ ಅಂಗನವಾಡಿ ಶಿಕ್ಷಕಿಯರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿತ್ತು.

ಸ್ಥಗಿತಕ್ಕೆ ಗರ್ಭಿಣಿಯರ ವಿರೋಧ: ಉತ್ತರ ಕರ್ನಾಟಕ ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿನ ಗರ್ಭಿಣಿಯರು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಪ್ರತಿವರ್ಷ ಸಾವಿರಾರು ಸಂಖ್ಯೆಯಲ್ಲಿ ಶಿಶುಗಳು ಮೃತಪಡುತ್ತಿವೆ. ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ರಾಜ್ಯದಲ್ಲಿ ಸುಮಾರು 1,206 ನವಜಾತ ಶಿಶುಗಳು ಮೃತಪಟ್ಟಿದ್ದು, ಇಂತಹ ಪರಿಸ್ಥಿತಿಯಲ್ಲಿ ಯೋಜನೆ ಸ್ಥಗಿತ ಮಾಡಿರುವುದನ್ನು ಗರ್ಭಿಣಿಯರು ವಿರೋಧಿಸಿದ್ದಾರೆ.

ಮುಂದುವರಿಯಲಿದೆ ಮಾತೃವಂದನಾ: ಗರ್ಭಿಣಿಯರು ಹಾಗೂ ಬಾಣಂತಿಯರ ಪೌಷ್ಠಿಕ ಹಾಗೂ ಆರೋಗ್ಯ ಮಟ್ಟ ಸುಧಾರಿಸಲು ಸರಕಾರ ಜಾರಿಗೊಳಿಸಿದ್ದ ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯನ್ನು ಆರ್ಥಿಕ ಇಲಾಖೆ ಸ್ಥಗಿತಗೊಳಿಸಿದ್ದು, ಕೇಂದ್ರದ ಮಾತೃ ವಂದನಾ, ರಾಜ್ಯದ ಮಾತೃಪೂರ್ಣ ಯೋಜನೆ ಮುಂದುವರಿಯಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ 'ವಾರ್ತಾಭಾರತಿಗೆ' ತಿಳಿಸಿದ್ದಾರೆ.

ಈಗಾಗಲೇ ಭಾರತವು ಅಪೌಷ್ಟಿಕತೆಯ ಹಾಗೂ ಹಸಿವಿನ ಸಮಸ್ಯೆಯಲ್ಲಿ ಪ್ರಪಂಚದಲ್ಲಿಯೇ ಅಗ್ರಸ್ಥಾನಕ್ಕೆ ಏರುತ್ತಿರುವುದನ್ನು ಹಲವಾರು ಸಂಶೋಧನೆಗಳು ಈಗಾಗಲೇ ಪ್ರಕಟಿಸಿವೆ. ಈ ಹಂತದಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ನೀಡಬೇಕಾದ ಇಂತಹ ಯೋಜನೆ ಕೈಬಿಟ್ಟಿರುವುದು ನಿಜಕ್ಕೂ ದುರದೃಷ್ಟಕರ. ಸುಸ್ಥಿರ ಅಭಿವೃದ್ಧಿ ಗುರಿಯನ್ನು ಸಾಧಿಸಲು ಹಲವಾರು ಯೋಜನೆಗಳನ್ನು ರೂಪಿಸುತ್ತಿರುವ ಭಾರತವು ದೇಶದ ಅಭಿವೃದ್ಧಿಯನ್ನು ಬಹಳ ಮುಖ್ಯವೆಂದು ಪರಿಗಣಿಸಿ ಅಪೌಷ್ಟಿಕತೆ ಮತ್ತು ಹಸಿವಿನ ಸಮಸ್ಯೆಯನ್ನು ಗುರಿ 2ರಲ್ಲಿ ಸೇರಿಸಿ ಅಪೌಷ್ಟಿಕತೆಯುಕ್ತ ಭಾರತವನ್ನು ನಿರ್ಮಿಸುತ್ತೇವೆ ಎಂಬ ಘೋಷಣೆಗಳು ಬರೀ ಘೋಷಣೆಗಳಾಗಿಯೇ ಉಳಿಯುತ್ತವೆ ಎಂಬುದು ಆಹಾರದ ಹಕ್ಕು ಕಾರ್ಯಕ್ರಮ ಮತ್ತು ಮಗು ಮತ್ತು ಕಾನೂನು ಕೇಂದ್ರದ ಕುಮಾರ್ ಶೃಂಗೇರಿ ಅವರ ಅಭಿಪ್ರಾಯ.

ಮುಖ್ಯಮಂತ್ರಿ ಮಾತೃಶ್ರೀ ಯೋಜನೆ ಸ್ಥಗಿತದಿಂದ ಬಡಗರ್ಭಿಣಿಯರಿಗೆ ಬರೆ ಎಳೆದಂತಾಗಿದೆ. ಸರಕಾರದ ಈ ನಿರ್ಧಾರ ಸರಿಯಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಗರ್ಭಿಣಿಯರು ಅಪೌಷ್ಟಿಕತೆಯಿಂದ ನರಳುತ್ತಿದ್ದು, ಯೋಜನೆ ಸ್ಥಗಿತದಿಂದಾಗಿ ಮತ್ತಷ್ಟು ತೊಂದರೆಯಾಗಲಿದೆ. ಇಂತಹ ಜನಪ್ರಿಯ ಯೋಜನೆ ಸ್ಥಗಿತ ಮಾಡಿರುವುದು ಸರಿಯಲ್ಲ. ಇದನ್ನು ಬಿಜೆಪಿ ಸರಕಾರ ಮುಂದುವರಿಸಬೇಕು.

-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

share
-ಯುವರಾಜ್ ಮಾಳಗಿ
-ಯುವರಾಜ್ ಮಾಳಗಿ
Next Story
X