Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೀವ್ರ ವಿರೋಧದ ನಡುವೆಯೇ ಎಪಿಎಂಸಿ ಕಾಯ್ದೆ...

ತೀವ್ರ ವಿರೋಧದ ನಡುವೆಯೇ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಜಾರಿಗೆ ಸಂಪುಟ ಅಸ್ತು

ವಾರ್ತಾಭಾರತಿವಾರ್ತಾಭಾರತಿ14 May 2020 9:39 PM IST
share
ತೀವ್ರ ವಿರೋಧದ ನಡುವೆಯೇ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಜಾರಿಗೆ ಸಂಪುಟ ಅಸ್ತು

ಬೆಂಗಳೂರು, ಮೇ 14: ರೈತ ಸಂಘಟನೆಗಳು, ಕಾಂಗ್ರೆಸ್-ಜೆಡಿಎಸ್ ಸೇರಿದಂತೆ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೇ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಕೈಗೊಳ್ಳಲಾಗಿದ್ದು, ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ಕೋರಿ ರಾಜ್ಯಪಾಲರಿಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ರಾಜ್ಯಪಾಲರು ಹಿಂದಕ್ಕೆ ಕಳುಹಿಸಿದ್ದಾರೆಂಬುದು ಸತ್ಯಕ್ಕೆ ದೂರ. ಸಚಿವ ಸಂಪುಟದಲ್ಲಿ ಚರ್ಚಿಸಿಲ್ಲ ಎಂಬ ಕಾರಣಕ್ಕೆ ಅವರು ತಡೆ ಹಿಡಿದಿದ್ದರು. ಇದೀಗ ಸಂಪುಟದಲ್ಲಿ ಕಾಯ್ದೆ ಬಗ್ಗೆ ಚರ್ಚಿಸಲಾಗಿದೆ. ಕೇಂದ್ರದ ಕಾಯ್ದೆಯನ್ನು ಮಾದರಿಯನ್ನಾಗಿ ಇಟ್ಟುಕೊಂಡು ರಾಜ್ಯದಲ್ಲಿ ಹೊಸ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗುತ್ತಿದೆ.

ಪ್ರಧಾನಿ ಮೋದಿಯವರ ಆಶಯದಂತೆ 2020ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಾಗೂ ರೈತರ ಉತ್ಪನ್ನಗಳ ಮಾರಾಟ ಮಾಡಲು ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಈ ಕಾಯ್ದೆ ತಿದ್ದುಪಡಿ ಅನುಕೂಲವಾಗಲಿದೆ. ರೈತ ತನ್ನ ಉತ್ಪನ್ನಗಳನ್ನು ಎಪಿಎಂಸಿ ಮತ್ತು ಹೊರಗೆ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಹೆಚ್ಚಿನ ಬೆಲೆಗೆ ಖಾಸಗಿ ವ್ಯಕ್ತಿಗಳಿಗೂ ಮಾರಾಟ ಮಾಡುವ ಸ್ವಾತಂತ್ರ್ಯ ಸಿಗಲಿದೆ ಎಂದರು.

ರೈತರ ಹಿತರಕ್ಷಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಈ ತಿದ್ದುಪಡಿ ಸುಗ್ರೀವಾಜ್ಞೆ ರೂಪಿಸಲಾಗಿದೆ. ರೈತನಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ತೂಕ ಮತ್ತು ಯಾವುದೇ ಹಣಕಾಸಿನ ವಂಚನೆಯಾಗಲು ಅವಕಾಶವಿಲ್ಲ. ಈ ಬಗ್ಗೆಯೂ ರಾಜ್ಯ ಮಟ್ಟದ ಸಮಿತಿ ನಿಯಂತ್ರಿಸಲಿದೆ ಎಂದ ಅವರು, ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಅಧಿವೇಶನ ಕರೆಯಲು ಸಾಧ್ಯವಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಜಾರಿ ಅನಿವಾರ್ಯವಾಗಿದೆ ಎಂದರು.

ಕೃಷಿ ಉತ್ಪನ್ನಗಳಿಗೆ ಆರ್ಥಿಕ ನೆರವು: ಕೊರೋನ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತು ಅವರ ಕೃಷಿ ಉತ್ಪನ್ನಗಳಿಗೂ ರಾಜ್ಯ ಸರಕಾರ ನೆರವು ಘೋಷಿಸಿದ್ದು, ಈಗಾಗಲೇ ಪ್ರಕಟಿಸಿದ 1,610 ಕೋಟಿ ರೂ.ಗಳ ಜೊತೆಗೆ ಹೆಚ್ಚುವರಿಯಾಗಿ 162 ಕೋಟಿ ರೂ.ಗಳನ್ನು ಪ್ರಕಟಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ರಾಜ್ಯದಲ್ಲಿ 50,083 ಹೆಕ್ಟೇರ್ ಅಲ್ಲಿ ತರಕಾರಿ ಬೆಳೆದ ರೈತರಿಗೆ ಮತ್ತು 41,054 ಹೆಕ್ಟೇರ್ ನಲ್ಲಿ ಹಣ್ಣುಗಳನ್ನು ಬೆಳೆದ ರೈತರಿಗೆ ಪ್ರತಿ ಹೆಕ್ಟೇರ್ ಗೆ 15 ಸಾವಿರ ರೂ. ಪರಿಹಾರ ವಿತರಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಒಟ್ಟು 137 ಕೋಟಿ ರೂ. ಪರಿಹಾರ ನೀಡಲಾಗುವುದು ಎಂದು ಮಾಧುಸ್ವಾಮಿ ವಿವರ ನೀಡಿದರು.

ದಾಕ್ಷಿ, ಬಾಳೆ, ಪಪ್ಪಾಯಿ, ಅನಾನಸ್, ಕಲ್ಲಂಗಡಿ ಮತ್ತು ಕರ್ಬೂಜ, ಬೋರೆ, ಮತ್ತು ಬೆಣ್ಣೆಹಣ್ಣು ಮತ್ತು ತರಕಾರಿಗಳ ಪೈಕಿ ಹಸಿರು ಮೆಣಸಿನಕಾಯಿ, ಟಮೋಟೋ, ಹೂ ಕೋಸು, ಎಲೆ ಕೋಸು, ಸಿಹಿಗುಂಬಳ, ಬೂದುಗುಂಬಳ, ಕ್ಯಾರೆಟ್, ಈರುಳ್ಳಿ, ಸೊಪ್ಪು, ಹೀರೆಕಾಯಿ ಮತ್ತು ತೊಂಡೆಕಾಯಿಗೆ ಪರಿಹಾರ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಜತೆಗೆ ಪ್ರಸ್ತುತ ಒಂದು ಬಾರಿಗೆ ಈ ಪರಿಹಾರ ಸೌಲಭ್ಯವನ್ನು ರಾಜ್ಯದಲ್ಲಿನ 1.25 ಲಕ್ಷ ವಿದ್ಯುತ್ ಚಾಲಿತ ಘಟಕಗಳಿಗೂ ವಿಸ್ತರಿಸಲಾಗುವುದು. ಇದರ ಪ್ರಕಾರ ಪ್ರತಿ ವಿದ್ಯುತ್ ಚಾಲಿತ ಘಟಕಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ತಲಾ 2 ಸಾವಿರ ರೂ.ನಂತೆ ಒಟ್ಟು 25 ಕೋಟಿ ರೂ. ಒದಗಿಸಲಾಗುವುದು ಎಂದು ಮಾಧುಸ್ವಾಮಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X