Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನಕ್ಕೆ ಬಲಿಯಾದ ಐವರಿಗೂ ಪಡೀಲ್...

ಕೊರೋನಕ್ಕೆ ಬಲಿಯಾದ ಐವರಿಗೂ ಪಡೀಲ್ ಆಸ್ಪತ್ರೆಯೇ ಲಿಂಕ್ !

ದ.ಕ. ಜಿಲ್ಲೆಯಲ್ಲಿ ಹೆಚ್ಚಿದ ಅತಂಕ

ವಾರ್ತಾಭಾರತಿವಾರ್ತಾಭಾರತಿ14 May 2020 10:21 PM IST
share
ಕೊರೋನಕ್ಕೆ ಬಲಿಯಾದ ಐವರಿಗೂ ಪಡೀಲ್ ಆಸ್ಪತ್ರೆಯೇ ಲಿಂಕ್ !

ಮಂಗಳೂರು, ಮೇ 14: ದ.ಕ. ಜಿಲ್ಲೆಯಲ್ಲಿ ಗುರುವಾರ ಕೊರೋನ ಪಾಸಿಟಿವ್‌ನಿಂದ 80 ವರ್ಷದ ವೃದ್ಧೆ ಕೊನೆಯುಸಿರೆಳೆಯುವುದರೊಂದಿಗೆ ಐದು ಮಂದಿ ಮೃತಪಟ್ಟಂತಾಗಿದೆ. ಈ ಐವರು ಮಹಿಳೆಯರೇ ಆಗಿದ್ದು, ಎಲ್ಲಾ ಪ್ರಕರಣಗಳಿಗೂ ಪಡೀಲ್‌ನ ಖಾಸಗಿ ಆಸ್ಪತ್ರೆಯೇ ಲಿಂಕ್ ಆಗಿರುವುದು ಗಮನಾರ್ಹ.

ಎ.19ರಂದು 45 ವರ್ಷದ ಮಹಿಳೆ ಮತ್ತು ಎ. 23ರಂದು 75 ವರ್ಷ ಪ್ರಾಯದ ವೃದ್ಧೆ ಹಾಗೂ ಎ.30ರಂದು 67 ವರ್ಷ ಪ್ರಾಯದ ವೃದ್ಧೆ ಮೃತಪಟ್ಟಿದ್ದರು. ಇವರು ಮೂವರೂ ಬಂಟ್ವಾಳ ತಾಲೂಕಿನವನರಾಗಿದ್ದರು. ಮೇ 13ರಂದು 58 ವರ್ಷ ಪ್ರಾಯದ ಮಹಿಳೆ ಹಾಗೂ ಮೇ 14ರಂದು 80 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಇವರಿಬ್ಬರೂ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯವರಾಗಿದ್ದರು. ಈ ಐವರ ಸಾವಿನ ಮೂಲವು ಆಸ್ಪತ್ರೆಯೇ ಆಗಿದೆ.

ಪಡೀಲ್‌ನ ಆಸ್ಪತ್ರೆಯ ಉದ್ಯೋಗಿಯಾಗಿರುವ ಬಂಟ್ವಾಳದ ನರಿಕೊಂಬುವಿನ ಮಹಿಳೆ, ಶಕ್ತಿನಗರದ 45 ವರ್ಷ ಪ್ರಾಯದ ಗಂಡಸು, ಬಂಟ್ವಾಳದ 69 ವರ್ಷದ ಗಂಡಸು, ಬೋಳೂರಿನ ಒಂದೇ ಮನೆಯ 62 ವರ್ಷದ ಗಂಡಸು, 51 ವರ್ಷದ ಗಂಡಸು, 35 ವರ್ಷದ ಮಹಿಳೆ, 11 ವರ್ಷದ ಬಾಲಕಿ, ಬಂಟ್ವಾಳದ 16 ವರ್ಷದ ಬಾಲಕಿ, ಬಂಟ್ವಾಳದ 30 ವರ್ಷದ ವ್ಯಕ್ತಿ, ಬಂಟ್ವಾಳದ 60 ಮತ್ತು 70 ವರ್ಷದ ವೃದ್ಧೆಯರು, ಕಾರ್ಕಳ ತಾಲೂಕಿನ 50 ವರ್ಷ ಪ್ರಾಯದ ಮಹಿಳೆ ಮತ್ತು 26 ವರ್ಷದ ಅವರ ಮಗ, ಸೋಮೇಶ್ವರ ಸಮೀಪದ ಪಿಲಾರ್-ದಾರಂದಬಾಗಿಲು ವಿನ 38 ವರ್ಷದ ಮಹಿಳೆ ಹೀಗೆ ದ.ಕ.ಜಿಲ್ಲೆಯ 15 ಮಂದಿಗೆ ಪಾಸಿಟಿವ್‌ಗೆ ಮತ್ತು ಸಾವಿಗೀಡಾದ 5 ಮಂದಿಗೆ ಪಡೀಲ್‌ನ ಆಸ್ಪತ್ರೆಯೇ ಮೂಲ ವಾಗಿದೆ. ಇನ್ನು ಭಟ್ಕಳದ ಪ್ರಕರಣಗಳಿಗೂ ಪಡೀಲ್ ಆಸ್ಪತ್ರೆಗೂ ಲಿಂಕ್ ಇದೆ.

ಈ ಆಸ್ಪತ್ರೆಗೆ ಸಂಬಂಧಿಸಿ ಕೊರೋನದ ಮೂಲದ ಬಗ್ಗೆ ತನಿಖೆ ನಡೆಸಲು ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯ ಮೇರೆಗೆ ಜಿಲ್ಲಾಧಿಕಾರಿ ತಜ್ಞ ವೈದ್ಯರ ಸಮಿತಿಯನ್ನು ರಚಿಸಿದೆ. ಸಮಿತಿಯು ಮಧ್ಯಂತರ ವರದಿ ಸಲ್ಲಿಸಿದೆ. ಸಂಪೂರ್ಣ ವರದಿ ಸಲ್ಲಿಕೆಗೆ ಕಾಲಾವಕಾಶ ಕೇಳಿದೆ.

ಜಿಲ್ಲೆಯಲ್ಲಿ ಕೊರೋನ ಸಾವಿನ ಮತ್ತು ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ಕೂಡ ಪಡೀಲ್‌ನ ಖಾಸಗಿ ಆಸ್ಪತ್ರೆಯ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಡಳಿತ ಹಿಂದೇಟು ಹಾಕುತ್ತಿರುವ ಬಗ್ಗೆ ಹಲವು ಸಂಶಯಗಳನ್ನು ಹುಟ್ಟು ಹಾಕಿವೆ.

ಹೆಚ್ಚಿದ ಆತಂಕ: ಒಟ್ಟಿನಲ್ಲಿ ಮಾರಕವಾಗಿ ಪರಿಣಮಿಸಿರುವ ಕೊರೋನ ಸೋಂಕಿನಿಂದಾಗಿ ದ.ಕ. ಜಿಲ್ಲೆಯ ಜನತೆ ಆತಂಕಿತರಾಗಿದ್ದಾರೆ. ಲಾಕ್‌ಡೌನ್ ಸಡಿಲಿಕೆಯ ಬಳಿಕ ಕೊರೋನ ಪಾಸಿಟಿವ್ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಜನರು ಅಕ್ಷರಶಃ ಕಂಗಾಲಾಗಿದ್ದಾರೆ. ಈ ಮಧ್ಯೆ ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿವೆ. ಇದಕ್ಕೂ ಪಡೀಲ್ ಆಸ್ಪತ್ರೆಯೇ ಮೂಲವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X