ಪ್ರೀತಿಸುವಂತೆ ಕಿರುಕುಳ ಆರೋಪ: ಡೆತ್‍ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

ಮಂಡ್ಯ, ಮೇ 14: ಯುವಕನೊಬ್ಬ ಪ್ರೀತಿಸುವಂತೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ನೊಂದ ಯುವತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಮ್ಯ(22) ಮೃತ ಯುವತಿ. ಅದೇ ಗ್ರಾಮದ ಶಿವರಾಜ್ ಎಂಬ ಯುವಕ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎಂದು ಆಕೆ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬುಧವಾರ ತಡರಾತ್ರಿ ಯುವಕನು ಯುವತಿಯ ಮನೆಯ ಬಳಿ ಬಂದು ಪ್ರೀತಿಸುವಂತೆ ಜಗಳ ಮಾಡಿ ಕಿರುಕುಳ ನೀಡಿದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಲಾಗಿದೆ.
ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





