9, 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಬರೆಯಲು ಅವಕಾಶ: ಸಿಬಿಎಸ್‌ಇ

ಹೊಸದಿಲ್ಲಿ, ಮೇ 14: ಈ ರ್ಷದ 9 ಹಾಗೂ 11ನೇ ತರಗತಿಯ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ,ಇನ್ನೊಂದು ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ನೀಡಲಾಗುವುದು ಎಂದು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಗುರುವಾರ ತಿಳಿಸಿದೆ.
ಕೋವಿಡ್-19 ಹಾವಳಿಯ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆಯೆಂದು ಅದು ಹೇಳಿದೆ.
ಲಾಕ್‌ಡೌನ್ ಕಾರಣದಿಂದಾಗಿ ಎಂಟನೆಯ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗಳಲ್ಲಿ ಅವರ ನಿರ್ವಹಣೆಯನ್ನು ಪರಿಗಣಿಸದೆಯೇ ಉತ್ತೀರ್ಣಗೊಳಿಸುವುದಾಗಿ ಸಿಬಿಎಸ್‌ಇ ಮಾರ್ಚ್‌ನಲ್ಲಿ ಪ್ರಕಟಿಸಿತ್ತು.
‘‘ಪ್ರಸಕ್ತ ಅಸಾಧಾರಣ ಸನ್ನಿವೇಶವನ್ನು ಗಮನದಲ್ಲಿರಿಸಿ ಪಾಲಕರು ಹಾಗೂ ವಿದ್ಯಾರ್ಥಿಗಳ ಮನವಿಯ ಮೇರೆಗೆ, 9ನೇ ಹಾಗೂ 11 ನೇ ತರಗತಿಗಳಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾಧಾರಿತ ಪರೀಕ್ಷೆಗೆ ಮತ್ತೊಮ್ಮೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಸಿಬಿಎಸ್‌ಇನ ಪರೀಕ್ಷಾ ನಿಯಂತ್ರಣಾಧಿಕಾರಿ ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾರೆ.
Next Story





