ಮಹಿಳಾ ಸಿಬ್ಬಂದಿಗೆ ಕಿರುಕುಳ ಆರೋಪ: ಗೃಹರಕ್ಷಕ ದಳದ ನೌಕರ ಬಂಧನ

ಬೆಂಗಳೂರು, ಮೇ 15: ಗೃಹರಕ್ಷಕ ದಳದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ, ಇದೇ ಘಟಕದ ಹಿರಿಯ ನೌಕರ ವೈ.ಕೆ. ನಂಜೇಗೌಡ ಎಂಬಾತನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಜೆ.ಪಿ. ನಗರ ಬಳಿಯಿರುವ ಗೃಹ ರಕ್ಷಕ ದಳದಲ್ಲಿ ನಂಜೇಗೌಡ ಹಾಗೂ ಮಹಿಳಾ ಸಿಬ್ಬಂದಿ ಜೊತೆಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು, ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಮಹಿಳಾ ಸಿಬ್ಬಂದಿ ನೀಡಿರುವ ದೂರಿನ್ವಯ ಆರೋಪಿಯನ್ನು ಬಂಧಿಸಿ, ವಿಚಾರಣೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story





