Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಸ್ತೆ ಅಪಘಾತ : 24 ವಲಸೆ ಕಾರ್ಮಿಕರ...

ರಸ್ತೆ ಅಪಘಾತ : 24 ವಲಸೆ ಕಾರ್ಮಿಕರ ದಾರುಣ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ16 May 2020 8:33 AM IST
share
ರಸ್ತೆ ಅಪಘಾತ : 24 ವಲಸೆ ಕಾರ್ಮಿಕರ ದಾರುಣ ಅಂತ್ಯ

ಕಾನ್ಪುರ,ಮೇ 16: ಕಳೆದ ವಾರ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ರೈಲು ಹರಿದು 16 ವಲಸೆ ಕಾರ್ಮಿಕರು ಸಾವನ್ನಪ್ಪಿದ ದುರಂತ ಘಟನೆ ಇನ್ನೂ ಹಸಿರಾಗಿರುವಾಗಲೇ ಉತ್ತರ ಪ್ರದೇಶದ ಔರೈಯಾದಲ್ಲಿ ಶನಿವಾರ ನಸುಕಿನಲ್ಲಿ ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಲಾರಿಯೊಂದಕ್ಕೆ ಇನ್ನೊಂದು ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 24 ಜನರು ಮೃತಪಟ್ಟಿದ್ದು,20 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಗಂಭೀರ ಸ್ಥಿತಿಯಲ್ಲಿರುವ 15 ಗಾಯಾಳುಗಳನ್ನು ಇಟಾವಾ ಜಿಲ್ಲೆಯ ಸೈಫಾಯಿಯ ಪಿಜಿಐಗೆ ದಾಖಲಿಸಲಾಗಿದೆ.

ಈ ವಲಸೆ ಕಾರ್ಮಿಕರು ಆಹಾರ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ರಾಜಸ್ಥಾನದಿಂದ ಬಿಹಾರ,ಜಾರ್ಖಂಡ್ ಮತ್ತು ಪ.ಬಂಗಾಳದ ತಮ್ಮ ಊರುಗಳಿಗೆ ಮರಳುತ್ತಿದ್ದರು. ದಿಲ್ಲಿಯಿಂದ ಬರುತ್ತಿದ್ದ ಇನ್ನೊಂದು ಲಾರಿಯಲ್ಲಿನ ಕೆಲವು ಕಾರ್ಮಿಕರು ಚಹಾ ಸೇವಿಸಲೆಂದು ನಸುಕಿನ 3:30ರ ಸುಮಾರಿಗೆ ಔರೈಯಾ-ಕಾನ್ಪುರ ದೇಹಾತ್ ರಸ್ತೆಯ ಮಿಹೌಲಿ ಗ್ರಾಮದ ಪುಟ್ಟ ಹೋಟೆಲ್ ಬಳಿ ಲಾರಿಯನ್ನು ನಿಲ್ಲಿಸಿ ಕೆಳಗಿಳಿದಿದ್ದರು. ಈ ವೇಳೆ ರಾಜಸ್ಥಾನದಿಂದ ಬರುತ್ತಿದ್ದ ಲಾರಿಯು ನಿಂತ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ಲಾರಿಗಳು ರಸ್ತೆಬದಿಯ ಹೊಂಡಕ್ಕೆ ಬಿದ್ದಿದೆ.

ಅಪಘಾತದ ಕಾರಣವನ್ನು ತಿಳಿಯಲು ತನಿಖೆ ಪ್ರಗತಿಯಲ್ಲಿದೆ. ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ಒದಗಿಸಲು ಆದ್ಯತೆ ನೀಡಲಾಗಿದೆ ಎಂದು ಔರೈಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ತಿಳಿಸಿದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಅಪಘಾತಕ್ಕೆ ಕಾರಣದ ಕುರಿತು ತಕ್ಷಣವೇ ವರದಿಯನ್ನು ಸಲ್ಲಿಸುವಂತೆ ಕಾನ್ಪುರ ಐಜಿ ಮೋಹಿತ ಅಗರವಾಲ್ ಅವರಿಗೆ ಆದೇಶಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ. ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ತಲಾ ಎರಡು ಲ.ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ.ಪರಿಹಾರವನ್ನೂ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸರಕಾರವು ಸೇವೆಯಿಂದ ಅಮಾನತುಗೊಳಿಸಿದೆ.

 ಇತ್ತೀಚಿಗೆ ಉತ್ತರ ಪ್ರದೇಶ,ಮಧ್ಯಪ್ರದೇಶ ಮತ್ತು ಬಿಹಾರಗಳಲ್ಲಿ ಮೂರು ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ 15 ವಲಸೆ ಕಾರ್ಮಿಕರು ಮೃತಪಟ್ಟಿದ್ದರು. ಕಾಲ್ನಡಿಗೆಯಿಂದ ಅಥವಾ ಸೈಕಲ್‌ನಲ್ಲಿ ತವರಿಗೆ ತೆರಳುವ ವಲಸೆ ಕಾರ್ಮಿಕರಿಗೆ ಸಾರಿಗೆ ಸೌಲಭ್ಯವನ್ನು ಒದಗಿಸುವಂತೆ ಉತ್ತರ ಪ್ರದೇಶ ಸರಕಾರವು ಶುಕ್ರವಾರ ಜಿಲ್ಲಾಡಳಿತಗಳಿಗೆ ಆದೇಶ ನೀಡಿತ್ತು.

ವಲಸೆ ಕಾರ್ಮಿಕರ ಸಾವಿಗೆ ಸಂತಾಪವನ್ನು ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು,ಔರೈಯಾದಲ್ಲಿ ನಡೆದಿರುವ ಅಪಘಾತವು ತುಂಬ ದುಃಖವನ್ನುಂಟು ಮಾಡಿದೆ. ಸರಕಾರವು ಪೂರ್ಣ ಪ್ರಮಾಣದಲ್ಲಿ ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ ಎಂದು ಟ್ವೀಟಿಸಿದ್ದಾರೆ.

ಅಪಘಾತದ ವಿಷಯ ತಿಳಿದು ತುಂಬ ದಃಖವಾಗಿದೆ. ಸಂತ್ರಸ್ತರಿಗೆ ನೆರವಾಗಲು ಸ್ಥಳಿಯ ಆಡಳಿತವು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅವರೂ ವಲಸೆ ಕಾರ್ಮಿಕರ ಸಾವುಗಳಿಗೆ ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.

ಸರಕಾರವು ಕುರುಡಾಗಿದೆ: ಅಖಿಲೇಶ್ ಯಾದವ್

ವಲಸೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕುರುಡಾಗಿರುವುದಕ್ಕೆ ಉತ್ತರ ಪ್ರದೇಶದ ಬಿಜೆಪಿ ಸರಕಾರವನ್ನು ತರಾಟೆಗೆತ್ತಿಕೊಂಡಿರುವ ಎಸ್‌ಪಿ ವರಿಷ್ಠ ಅಖಿಲೇಶ್ ಯಾದವ್ ಅವರು ಅಪಘಾತವನ್ನು ‘ಹೃದಯ ಕಲಕುವ ’ಘಟನೆ ಎಂದು ಬಣ್ಣಿಸಿದ್ದಾರೆ. ಸರಕಾರವು ಈಗಲಾದರೂ ವಲಸಿಗರ ಬವಣೆಯತ್ತ ಗಮನ ಹರಿಸಲು ಆರಂಭಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ತುರ್ತಾಗಿ ಏನನ್ನಾದರೂ ಮಾಡಲೇಬೇಕು: ಕೇಜ್ರಿವಾಲ್

ಅಪಘಾತದಲ್ಲಿ ಮುಗ್ಧ ಜೀವಿಗಳು ಸಾವನ್ನಪ್ಪಿರುವುದು ತನಗೆ ತೀವ್ರ ಕಳವಳನ್ನುಂಟು ಮಾಡಿದೆ ಎಂದು ಟ್ವೀಟಿಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು,ವಲಸೆ ಕಾರ್ಮಿಕರ ಸಂಕಷ್ಟಗಳು ದಿನೇ ದಿನೇ ಇನ್ನಷ್ಟು ಹದಗೆಡುತ್ತಿವೆ. ತುರ್ತಾಗಿ ಏನನ್ನಾದರೂ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ದುಃಖ

ಘಟನೆಯ ಬಗ್ಗೆ ತೀವ್ರ ದುಃಖವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು,ಔರೈಯಾದಲ್ಲಿ 24 ವಲಸೆ ಕಾರ್ಮಿಕರ ಸಾವಿನ ಸುದ್ದಿ ತನಗೆ ತೀವ್ರ ನೋವನ್ನುಂಟು ಮಾಡಿದೆ. ಮೃತರ ಕುಟುಂಬಗಳಿಗೆ ತೀವ್ರ ಸಂತಾಪಗಳು ಎಂದು ಟ್ವೀಟಿಸಿದ್ದಾರೆ.

ಸರಕಾರದ ವಿರುದ್ಧ ಪ್ರಿಯಾಂಕಾ ದಾಳಿ

ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸರಣಿ ಟ್ವೀಟ್‌ಗಳಲ್ಲಿ ಆದಿತ್ಯನಾಥ್ ಸರಕಾರದ ವಿರುದ್ಧ ತೀವ್ರ ದಾಳಿ ನಡೆಸಿದ್ದಾರೆ. ವಲಸೆ ಕಾರ್ಮಿಕರ ಸುರಕ್ಷಿತ ವಾಪಸಾತಿಗೆ ಸರಕಾರವೇಕೆ ಸೂಕ್ತ ವ್ಯವಸ್ಥೆಗಳನ್ನು ಮಾಡುತ್ತಿಲ್ಲ ಎಂದು ಪ್ರಶ್ನಿಸಿರುವ ಅವರು,ಸರಕಾರವು ಮೂಕಪ್ರೇಕ್ಷಕನಾಗಿದೆ ಅಥವಾ ಕಾರ್ಮಿಕರ ಸಂಕಷ್ಟಗಳನ್ನು ಕಡೆಗಣಿಸಿದೆ ಎಂದಿದ್ದಾರೆ. ಹೇಳಿಕೆಗಳನ್ನು ನೀಡುವುದು ಮಾತ್ರ ಸರಕಾರದ ಕೆಲಸವೇ ಎಂದೂ ಅವರು ಪ್ರಶ್ನಿಸಿದ್ದಾರೆ.

ಮಮತಾ ಸಂತಾಪ

ಅಪಘಾತದ ಸುದ್ದಿಯು ತನಗೆ ತೀವ್ರ ದುಃಖವನ್ನುಂಟು ಮಾಡಿದೆ ಎಂದಿರುವ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ,ತಮ್ಮ ಪ್ರಾಣಗಳನ್ನು ಕಳೆದುಕೊಂಡಿರುವ ವಲಸೆ ಕಾರ್ಮಿಕರ ಕುಟುಂಬಗಳಿಗೆ ತನ್ನ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X