Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ವಾವಲಂಬಿ ಭಾರತಕ್ಕೆ ಅಡಿಪಾಯದ ನಾಲ್ಕನೆ...

ಸ್ವಾವಲಂಬಿ ಭಾರತಕ್ಕೆ ಅಡಿಪಾಯದ ನಾಲ್ಕನೆ ಪ್ಯಾಕೇಜ್; ರಾಜ್ಯಕ್ಕೆ ಹೆಚ್ಚಿನ ಲಾಭ- ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ16 May 2020 8:20 PM IST
share
ಸ್ವಾವಲಂಬಿ ಭಾರತಕ್ಕೆ ಅಡಿಪಾಯದ ನಾಲ್ಕನೆ ಪ್ಯಾಕೇಜ್; ರಾಜ್ಯಕ್ಕೆ ಹೆಚ್ಚಿನ ಲಾಭ- ಯಡಿಯೂರಪ್ಪ

ಬೆಂಗಳೂರು, ಮೇ 16: 'ಆತ್ಮ ನಿರ್ಭರ್ ಭಾರತ' ನಿರ್ಮಾಣದ ಹಾದಿಯಲ್ಲಿ ಇಂದು ಘೋಷಿಸಿದ ಹಲವು ಯೋಜನೆಗಳು ಮತ್ತು ಹಣಕಾಸು ಸಹಾಯ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದ್ದು, ಉದ್ಯೋಗಾವಕಾಶಗಳನ್ನು ವೃದ್ಧಿಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಖನಿಜ ವಲಯದಲ್ಲಿ ತರುತ್ತಿರುವ ಆಮೂಲಾಗ್ರ ಬದಲಾವಣೆ ರಾಜ್ಯದ ಖನಿಜ ನೀತಿಗೆ ಪೂರಕವಾಗಲಿದೆ. ನಮ್ಮ ರಾಜ್ಯದಲ್ಲಿ ಹಲವಾರು ಖನಿಜ ನಿಕ್ಷೇಪಗಳಿದ್ದು, ಈಗ ಅವುಗಳ ಗಣಿಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಅದರಲ್ಲೂ ಈಗಿರುವ ಖನಿಜ ಸಂಬಂಧಪಟ್ಟ ಕಾಯಿದೆಗಳು ನಮಗೆ ಹೆಚ್ಚಿನ ಅವಕಾಶ ಕಲ್ಪಿಸಲು ಮತ್ತು ಗಣಿಗಾರಿಕೆ ಮಾಡಲು ಇದ್ದ ಅಡಚಣೆಗಳು ನಿವಾರಣೆಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ರಾಜ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚುವಲ್ಲಿ ಸಹಾಯವಾಗಲಿದೆ. ರಾಜ್ಯದಲ್ಲಿ ಯಥೇಚ್ಛ ಖನಿಜ ಸಂಪತ್ತು ಇದ್ದು(ಕಬ್ಬಿಣ, ತಾಮ್ರ, ಬಂಗಾರ, ಕ್ವಾರ್ಜ್ ಮತ್ತು ಯುರೇನಿಯಂ) ಇವುಗಳನ್ನು ನಾವು ಗಣಿಗಾರಿಕೆ ಮಾಡಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ಕಾರಣವಾಗಬಹುದು. ಖಾಸಗಿ ಸಹಭಾಗಿತ್ವದ ಗಣಿಗಾರಿಕೆ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ದೇಶದ ರಕ್ಷಣಾ ವಲಯ, ಬಾಹ್ಯಾಕಾಶ, ನಾಗರಿಕ ವಿಮಾನಯಾನ, ಅಂತರಿಕ್ಷಯಾನ ಮತ್ತು ಅಂತರಿಕ್ಷ ವಲಯಗಳಲ್ಲಿ ಹೂಡಿಕೆ ಹೆಚ್ಚಾಗಿ ರಾಜ್ಯಕ್ಕೆ ಲಾಭವಾಗಲಿದೆ. ಏಕೆಂದರೆ ಈ ವಲಯದಲ್ಲಿ ಸಾಕಷ್ಟು ಉತ್ಪಾದನಾ ಘಟಕಗಳು ನಮ್ಮ ರಾಜ್ಯದಲ್ಲಿದ್ದು, ಅವುಗಳಿಗೆ ಪೂರಕವಾಗಿ ಇತರೆ ಸಂಬಂಧಪಟ್ಟ ಘಟಕಗಳು ಸ್ಥಾಪನೆಯಾಗಲಿವೆ. ಎಲ್ಲಕ್ಕೂ ಮಿಗಿಲಾಗಿ ಇಂದು ಪ್ರಕಟಿಸಿದ ಆರ್ಥಿಕ ಯೋಜನೆಗಳು ದೇಶದ ವಿದೇಶಿ ವಿನಿಮಯವನ್ನು ಉಳಿತಾಯ ಮಾಡಲಿದೆ ಎಂದು ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ಅಣು ವಿಜ್ಞಾನದಲ್ಲಿ ಖಾಸಗಿ ಸಹಭಾಗಿತ್ವ ನಮ್ಮ ರಾಜ್ಯಕ್ಕೆ ಹೆಚ್ಚಿನ ಲಾಭವಾಗಲಿದೆ. ದಾವೋಸ್ ಪ್ರವಾಸದಲ್ಲಿ ಹಲವಾರು ಬಾಹ್ಯಾಕಾಶ ಮತ್ತು ರಕ್ಷಣಾ ವಲಯದ ಕಂಪೆನಿಗಳು ಕರ್ನಾಟಕ ರಾಜ್ಯದಲ್ಲಿ ಹೂಡಿಕೆ ಮಾಡಲು ಇಚ್ಛೆ ವ್ಯಕ್ತಪಡಿಸಿದ್ದು, ಈಗ ಈ ಕಂಪೆನಿಗಳ ಯೋಜನೆಗಳು ಸಾಕಾರಗೊಳ್ಳಲಿವೆ'

-ಯಡಿಯೂರಪ್ಪ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X