ಉಡುಪಿ: ಕಾಂಗ್ರೆಸ್‌ನಿಂದ ಪೌರ ಕಾರ್ಮಿಕರಿಗೆ ಮಾಸ್ಕ್ ವಿತರಣೆ

ಉಡುಪಿ, ಮೇ 16: ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ನಗರಸಭೆಯ ಸಿಬ್ಬಂದಿ ವರ್ಗದವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕೊರೊನಾ ಟಾಸ್ಕ್ ಫೋರ್ಸ್ ವತಿಯಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾಸ್ಕ್‌ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಸಹಾಯಕ ಕಾರ್ಯಪಾಲ ಅಭಿಯಂತರ ಮೋಹನ್ ರಾಜ್, ಪರಿಸರ ಅಭಿಯಂತರ ಸ್ನೇಹಾ, ವ್ಯವಸ್ಥಾಪಕ ವೆಂಕಟರಮಣ, ಕಂದಾಯ ಅಧಿಕಾರಿ ಧನಂಜಯ ಡಿ.ಬಿ., ಮನೋಹರ್ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ.ಎ. ಗಫೂರ್, ಭಾಸ್ಕರ್ ರಾವ್ ಕಿದಿಯೂರು, ಹಬೀಬ್ ಅಲಿ, ಕೀರ್ತಿ ಶೆಟ್ಟಿ, ಲೂಯಿಸ್ ಲೋಬೊ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಅಮೃತಾ ಕೃಷ್ಣಮೂರ್ತಿ, ಸೆಲಿನ್ ಕರ್ಕಡ, ಜಯ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.
Next Story





