ಮೇ 18: ಲಾಕ್‍ಡೌನ್ 4.0 ಕುರಿತು ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ

ಬೆಂಗಳೂರು, ಮೇ 17: ಲಾಕ್‍ಡೌನ್ 4.0ರ ಕುರಿತು ಕೇಂದ್ರ ಸರಕಾರದ ಮಾರ್ಗಸೂಚಿಗಳು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮೇ 18ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಮುಂದಿನ ಹಂತದ ಲಾಕ್‍ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಬಸ್ ಸಂಚಾರ: ರಾಜ್ಯದಲ್ಲಿ ಸರಕಾರಿ ಸಾರಿಗೆ ಬಸ್ಸುಗಳ ಸಂಚಾರ ಪುನರ್ ಪ್ರಾರಂಭದ ಬಗ್ಗೆ ನಾಳೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
Next Story