ಉಡುಪಿ: ಮದುವೆ, ಸಮಾರಂಭಗಳಿಗೆ ತಹಶೀಲ್ದಾರ್‌ರಿಂದ ಅನುಮತಿ
ಉಡುಪಿ, ಮೇ 18: ಮದುವೆ ಮತ್ತು ಇತರ ಸಮಾರಂಭಗಳಿಗೆ ಷರತ್ತು ಬದ್ಧ ಅನುಮತಿ ನೀಡುವ ಪದ್ಧತಿಯನ್ನು ಸರಳೀಕರಣಗೊಳಿಸಲಾಗಿದ್ದು, ಅನು ಮತಿ ನೀಡುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರ್‌ಗಳಿಗೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಬಂದು ಮದುವೆ ಮತ್ತು ಇತರ ಸಮಾರಂಭಗಳಿಗೆ ಅನುಮತಿಯನ್ನು ಪಡೆಯಲು ಕಷ್ಟವಾಗುವುದರಿಂದ ಮತ್ತು ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಿಲ್ಲಾಧಿಕಾರಿಯವರ ಕಚೇರಿಗೆ ಭೇಟಿ ನೀಡಿದ್ದಲ್ಲಿ ನಿರ್ವಹಣೆ ಮಾಡಲು ಕಷ್ಟಸಾಧ್ಯವಾಗುವ ಕಾರಣದಿಂದಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರು ಕಚೇರಿ ಸಮಯದಲ್ಲಿ ಅಗತ್ಯ ದಾಖಲೆಗಳೊಂದಿಗೆ ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ಈ ಅರ್ಜಿ ಗಳ ಬಗ್ಗೆ ತಹಶೀಲ್ದಾರ್ ಪರಿಶೀಲಿಸಿ, ಷರತ್ತು ವಿಧಿಸಿ ಅನುಮತಿಯನ್ನು ನೀಡಲಿ ದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





