ಮನೆಗಳಲ್ಲೇ ಈದ್ ನಮಾಝ್ ನಿರ್ವಹಿಸಲು ಸೆಂಟ್ರಲ್ ಕಮಿಟಿ ಮನವಿ
ಮಂಗಳೂರು, ಮೇ 18: ದೇಶಾದ್ಯಂತ ಕೊರೋನ ಹಿನ್ನೆಲೆಯಲ್ಲಿ ವಿಧಿಸಲಾದ ಲಾಕ್‌ಡೌನ್‌ನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಹಾಗಾಗಿ ಈ ಬಾರಿಯ ಈದುಲ್ ಫಿತರ್ ನಮಾಝನ್ನು ಈದ್ಗಾ ಹಾಗೂ ಮಸೀದಿಗಳಲ್ಲಿ ನಿರ್ವಹಿಸಲು ಸಾಧ್ಯವಿಲ್ಲದ ಕಾರಣ ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಜಮಾಅತ್‌ನವರು ಈದ್ ನಮಾಝನ್ನು ತಮ್ಮ ಮನೆಗಳಲ್ಲಿಯೇ ನಿರ್ವಹಿಸುವಂತೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಮನವಿ ಮಾಡಿದ್ದಾರೆ.
Next Story





