Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಗಳವಾರ ಕೆಎಸ್ಸಾರ್ಟಿಸಿ ಬಸ್‍ಗಳ ಸಂಚಾರ...

ಮಂಗಳವಾರ ಕೆಎಸ್ಸಾರ್ಟಿಸಿ ಬಸ್‍ಗಳ ಸಂಚಾರ ಆರಂಭ

ವಾರ್ತಾಭಾರತಿವಾರ್ತಾಭಾರತಿ18 May 2020 9:58 PM IST
share
ಮಂಗಳವಾರ ಕೆಎಸ್ಸಾರ್ಟಿಸಿ ಬಸ್‍ಗಳ ಸಂಚಾರ ಆರಂಭ

ಬೆಂಗಳೂರು, ಮೇ 18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕರಾರಸಾ)ದ ಸಾರಿಗೆಗಳ ಕಾರ್ಯಾಚರಣೆಯನ್ನು ಮೇ 19ರಿಂದ ಪುನರಾರಂಭಿಸಲಾತ್ತಿದ್ದು, ಮೊದಲಿಗೆ ಸುಮಾರು 1500 ಅನುಸೂಚಿಗಳನ್ನು(ಶೇ.25ರಷ್ಟು) ಕಾರ್ಯಾಚರಣೆ ಮಾಡಲಾಗುತ್ತದೆ. ಬಳಿಕ ಹಂತ-ಹಂತವಾಗಿ ಸಾರಿಗೆಗಳ ಸಂಖ್ಯೆಯನ್ನು ಹೆಚ್ಚಿಸಿ ಕಾರ್ಯಾಚರಣೆಗೊಳಿಸಲಾಗುವುದು ಎಂದು ಕರಾರಸಾ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಸಾರಿಗೆಗಳು ಕಾರ್ಯಾಚರಣೆ ಮಾಡುವಾಗ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಬಸ್ ಪ್ರಯಾಣ ದರಗಳಲ್ಲಿ ಯಾವುದೇ ಹೆಚ್ಚಳವಿರುವುದಿಲ್ಲ. ಹಗಲು ವೇಳೆಯಲ್ಲಿ ಮಾತ್ರ ಅಂದರೆ ಬೆಳಗ್ಗೆ 7ಗಂಟೆಯಿಂದ ಸಂಜೆ 7ಗಂಟೆವರೆಗೆ ಸಾರಿಗೆಗಳು ಕಾರ್ಯಾಚರಿಸಲಿವೆ. ಗಮ್ಯ(ದೂರ) ಸ್ಥಳಗಳನ್ನು ಸಂಜೆ 7ಗಂಟೆಯೊಳಗೆ ತಲುಪುವಂತಿರಬೇಕು.

ಉದಾಹರಣೆಗೆ ಬೆಂಗಳೂರು-ಮೈಸೂರು, ಪ್ರಯಾಣದ ಅವಧಿ 3ಗಂಟೆ, ಬೆಂಗಳೂರಿನಿಂದ ಕಡೆಯ ಸಾರಿಗೆ ನಿರ್ಗಮಿಸುವ ಸಮಯ ಸಂಜೆ 4ಗಂಟೆ, ಬೆಂಗಳೂರು-ಮಂಗಳೂರು,  ಪ್ರಯಾಣದ ಅವಧಿ ಏಳೂವರೆ ಗಂಟೆ, ಬೆಂಗಳೂರಿನಿಂದ ಕಡೆಯ ಸಾರಿಗೆ ನಿರ್ಗಮಿಸುವ ಸಮಯ ಬೆಳಗ್ಗೆ 11.30ಗಂಟೆಗೆ ಹೀಗೆ ದೂರವನ್ನು ಸಂಜೆ 7ಗಂಟೆಯೊಳಗೆ ತಲುಪುವಂತಿರಬೇಕು. 

ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಯಾವುದೇ ಬಸ್‍ಗಳ ಕಾರ್ಯಾಚರಣೆ ಇರುವುದಿಲ್ಲ. ಮುಖಕ್ಕೆ ಮಾಸ್ಕ್ ಧರಿಸಿದ ಪ್ರಯಾಣಿಕರಿಗೆ ಮಾತ್ರ ಬಸ್‍ನಲ್ಲಿ ಪ್ರಯಾಣಿಸಲು ಅವಕಾಶವಿದೆ. ಪ್ರಯಾಣಿಕರು ಮುಖಕ್ಕೆ ಮಾಸ್ಕ್ ಧರಿಸದಿದ್ದರೆ ಬಸ್ ಒಳಗೆ ಅನುಮತಿಯಿಲ್ಲ. 
ಬಸ್ ನಿಲ್ದಾಣ ಹಾಗೂ ಬಸ್‍ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಒಂದು ಬಸ್ಸಿನಲ್ಲಿ ಗರಿಷ್ಠ 30 ಜನ ಪ್ರಯಾಣಿಕರು ಮಾತ್ರ ಪ್ರಯಾಣಿಸಲು ಅವಕಾಶವಿದೆ. ಬಸ್ ನಿಲ್ದಾಣಗಳಲ್ಲಿ ಮಾತ್ರ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 

ರಾಜ್ಯದೊಳಗಿನ ಪ್ರಮುಖ ಸ್ಥಳಗಳಿಗೆ ಮಾತ್ರ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು. ಪ್ರಸ್ತುತ, ಅಂತರ-ರಾಜ್ಯ ಸಾರಿಗೆಗಳ ಕಾರ್ಯಾಚರಣೆ ಇರುವುದಿಲ್ಲ. ಪ್ರಸ್ತುತ ಹವಾನಿಯಂತ್ರಿತ ಬಸ್‍ಗಳ ಕಾರ್ಯಾಚರಣೆ ಇರುವುದಿಲ್ಲ. ಪ್ರತಿ ರವಿವಾರದಂದು ಯಾವುದೇ ಬಸ್‍ಗಳ ಕಾರ್ಯಾಚರಣೆ ಇರುವುದಿಲ್ಲ. ಬಸ್ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್‍ಗೆ ಒಳಪಡಿಸಲಾಗುವುದು.

ಮುಂಗಡ ಆಸನಗಳನ್ನು www.ksrtc.in ವೆಬ್‍ಸೈಟ್ ಮುಖಾಂತರ ಕಾಯ್ದಿರಿಸಿಕೊಳ್ಳಬಹುದು. ಸಾರ್ವಜನಿಕ ಪ್ರಯಾಣಿಕರು ಆದಷ್ಟು ಕಡಿಮೆ ಪ್ರಮಾಣದ ಲಗ್ಗೇಜುಗಳನ್ನು ತರುವಂತೆ ಹಾಗೂ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಬೇಕು. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಮಾರ್ಗ ಮಧ್ಯದಲ್ಲಿ ಊಟ/ಉಪಹಾರಕ್ಕಾಗಿ ನಿಲುಗಡೆ ಇರುವುದಿಲ್ಲ. ಹೀಗಾಗಿ, ಕುಡಿಯುವ ನೀರು ಮತ್ತು ಆಹಾರವನ್ನು ಪ್ರಯಾಣಿಕರೇ ತರಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X