Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಗ್ರಾಪಂ ಹಾಲಿ ಸದಸ್ಯರ...

ಉಡುಪಿ: ಗ್ರಾಪಂ ಹಾಲಿ ಸದಸ್ಯರ ಮುಂದುವರಿಕೆಗೆ ಆರ್‌ಜಿಪಿಆರ್‌ಎಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 May 2020 10:03 PM IST
share

ಉಡುಪಿ, ಮೇ 18: ಕೋವಿಡ್-19 ಸೋಂಕಿನ ಕಾರಣ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಅನೇಕ ಬದಲಾವಣೆಗಳ ಜೊತೆಗೆ ಲಾಕ್‌ಡೌನ್‌ನಿಂದ ಜನಜೀವನ ಸಹ ಅಸ್ತವ್ಯಸ್ತ ಗೊಂಡಿದೆ.ಇದರ ಪರಿಣಾಮ ಚುನಾವಣಾ ಆಯೋಗ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಆಯ್ಕೆಗಾಗಿ ಯಾವುದೇ ಚುನಾವಣಾ ಪ್ರಕ್ರಿಯೆಯನ್ನು ಇದು ವರೆಗೆ ಮಾಡಿಲ್ಲ. ಕೋವಿಡ್-19 ಸೋಂಕಿನ ಪ್ರಯುಕ್ತ ಗ್ರಾಪಂ ಚುನಾವಣೆ ಯನ್ನು 6 ತಿಂಗಳ ಕಾಲ ಮುಂದೂಡುವುದು ಅನಿವಾರ್ಯ ಎಂದು ಸರಕಾರ ಈಗಾಗಲೇ ತಿಳಿಸಿದೆ. ಹೀಗಾಗಿ ಈಗ ಇರುವ ಹಾಲಿ ಗ್ರಾಪಂ ಸದಸ್ಯರನ್ನೇ ಮುಂದಿನ ಚುನಾವಣೆವರೆಗೆ ಮುಂದುವರಿಸಬೇಕು ಎಂದು ಉಡುಪಿ ಜಿಲ್ಲಾ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಆಗ್ರಹಿಸಿದೆ.

ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗಾರಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕಳುಹಿಸಿದ ಮನವಿ ಯಲ್ಲಿ ಸಂಘಟನೆ ಈ ಒತ್ತಾಯ ಮಾಡಿದೆ. ಆದರೆ ಇದೇ ಸಂದರ್ಭದಲ್ಲಿ ಗ್ರಾಪಂನ ಇತಿಹಾಸದಲ್ಲೆ ಪ್ರಥಮ ಬಾರಿಗೆ ಪಂಚಾಯತಿಗಳಿಗೆ ನಾಮನಿರ್ದೇಶಿತ ಸದಸ್ಯರನ್ನು ನೇಮಿಸಲು ಸಿದ್ಧತೆ ನಡೆದಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈ ಸದಸ್ಯರನ್ನು ನೇಮಕ ಮಾಡಲಿದ್ದು ಇವರನ್ನು ಒಳಗೊಂಡ ಆಡಳಿತ ಸಮಿತಿ ಅಸ್ತಿತ್ವಕ್ಕೆ ಬರಲಿದೆ ಎಂದು ಮಾಧ್ಯಮ ಗಳು ವರದಿ ಮಾಡಿವೆ.

ಒಂದು ವೇಳೆ ಈ ಸಮಿತಿ ರಚನೆ ಆಗಿದ್ದೆ ಹೌದಾದಲ್ಲಿ ಈಗ ಆಡಳಿತದಲ್ಲಿ ಇರುವಂತಹ ಬಿಜೆಪಿ ಸರಕಾರ ಮತ್ತು ಶಾಸಕರುಗಳು ಅವರದ್ದೇ ಆದ ಕಾರ್ಯಕರ್ತರನ್ನು ಈ ಸಮಿತಿಗಳಲ್ಲಿಯಲ್ಲಿ ನೇಮಕಮಾಡಿ ಈ ಸಮಿತಿಯನ್ನು ರಾಜಕೀಯಕರಣಗೊಳಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಸಂಘಟನೆ ಕಳವಳ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ 6029 ಗ್ರಾಪಂಗಳದ್ದು, ಸುಮಾರು 95,168 ಸದಸ್ಯರು ಈ ಗ್ರಾಪಂಗಳನ್ನು ಪ್ರತಿನಿಧಿಸುತ್ತಿದ್ದಾರೆ. ಗ್ರಾಪಂಗಳ ಅವಧಿ ಮೇ 15ರಿಂದ ಜೂನ್ 30ರ ಒಳಗೆ ಪೂರ್ಣಗೊಳ್ಳುತ್ತದೆ. ಪ್ರಸ್ತುತ ಅಧಿಕಾರದಲ್ಲಿರುವ ಗ್ರಾಪಂ ಪ್ರತಿನಿಧಿಗಳು ಬರ, ಪ್ರವಾಹದಂತಹ ಕಠಿಣ ಪರಿಸ್ಥಿತಿ ಹಾಗೂ ಕೋಡ್ 19 ಸೊಂಕಿನ ಸಂದರ್ಭದಲ್ಲಿಯೂ ಗ್ರಾಮೀಣ ಅಭಿವೃದ್ಧಿಯನ್ನು ಸುಸೂತ್ರವಾಗಿ ನಿಭಾಯಿಸುವ ಮೂಲಕ ಉತ್ತಮವಾಗಿ ಕೆಲಸ ಮಾಡಿ ದ್ದಾರೆ. ಗ್ರಾಮೀಣ ಭಾಗದಲ್ಲಿ ಸೋಂಕು ತೀವ್ರವಾಗಿ ಹರಡುತಿ್ತಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಗ್ರಾಪಂ ಚುನಾವಣೆಗಳು ಪಕ್ಷಾತೀತವಾಗಿ ನಡೆಯುತ್ತಿದ್ದು ಈಗಿನ ಹಾಲಿ ಸದಸ್ಯರು ಪಕ್ಷದ ಚಿಹ್ನೆಯಿಂದ ಆಯ್ಕೆ ಆದವರಲ್ಲ ಹಾಗೂ ನೇರ ಜನರಿಂದ ಆಯ್ಕೆಯಾಗಿ ಬಂದಿರುವ ಜನಪ್ರತಿನಿಧಿಗಳಾಗಿರುವುದರಿಂದ ಹಾಲಿ ಇರುವ ಗ್ರಾಪಂ ಸದಸ್ಯರನ್ನೇ ಮುಂದುವರಿಸಬೇಕು. ಗ್ರಾಪಂಗಳ ಕಾರ್ಯ ವೈಖರಿ ಕುರಿತು ಏನೇನು ತಿಳುವಳಿಕೆ ಇಲ್ಲದವರನ್ನು ಆಡಳಿತ ಸಮಿತಿಗೆ ಸೇರಿಸಿದರೆಕೊರೊನಾದಂತಹಾ ಭೀಕರ ಬಿಕ್ಕಟ್ಟನ್ನು ನಿಭಾಯಿಸಲು ಕಷ್ಟವಾಗುತ್ತದೆ. ಇದರ ಜೊತೆಗೆ ಗ್ರಾಮೀಣ ಭಾಗದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಹೀಗಾಗಿ ಯಾವುದೇ ಕಾರಣಕ್ಕೂ ಹೊಸ ಸಮಿತಿ ರಚನೆ ಮಾಡುವ ಪ್ರಯತ್ನ ಮಾಡಬಾರದು. ಈಗ ಇರುವ ಹಾಲಿ ಗ್ರಾಪಂ ಸದಸ್ಯರುಗಳನ್ನು ಮುಂದಿನ ಚುನಾವಣೆ ನಡೆಸುವವರೆಗೆ ಮುಂದುವರಿಸುವ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಬೇಕು ಎಂಬ ಆಗ್ರಹವನ್ನು ಸಂಘಟನೆ ಗೌರವ ಸಲಹೆಗಾರರಾದ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X