Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 24 ವಲಸೆ ಕಾರ್ಮಿಕರ ಸಾವಿಗೆ ಯುಪಿ ಸರಕಾರದ...

24 ವಲಸೆ ಕಾರ್ಮಿಕರ ಸಾವಿಗೆ ಯುಪಿ ಸರಕಾರದ ನಿರ್ಲಕ್ಷ್ಯವೇ ಕಾರಣ: ಎಸ್‍ಡಿಪಿಐ

ವಾರ್ತಾಭಾರತಿವಾರ್ತಾಭಾರತಿ18 May 2020 11:03 PM IST
share

ಹೊಸದಿಲ್ಲಿ, ಮೇ 18: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 200 ಕಿ.ಮೀ ದೂರದಲ್ಲಿರುವ ಔರೈಯಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಸಾವು, ಸರಕಾರದ ನಿರಾಸಕ್ತಿ ಮತ್ತು ನಿರ್ಲಕ್ಷ್ಯದಿಂದಾಗಿ ಉಂಟಾದ ನರಹತ್ಯೆಯಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಫಿ ಆರೋಪಿಸಿದ್ದಾರೆ.

ಈ ರೀತಿಯ ಪ್ರಕರಣಗಳಲ್ಲಿ, ಆರೋಪಿಗಳು ಉನ್ನತ ಸರಕಾರಿ ಹುದ್ದೆಗಳಲ್ಲಿ ಆಕ್ರಮಿಸಿಕೊಂಡಿರುವುದರಿಂದ ಅಪರಾಧಿಗಳನ್ನು ಕಾನೂನಿನ ಮುಂದೆ ತರಲಾಗುವುದಿಲ್ಲ. ಈ ಅಪಘಾತವು ಮೋದಿ ಸರಕಾರದ ಯೋಜಿತವಲ್ಲದ ಲಾಕ್‍ಡೌನ್‍ನಿಂದ ಉಂಟಾದ ಮಾನವೀಯ ಬಿಕ್ಕಟ್ಟಿನ ಫಲಿತಾಂಶವಾಗಿದೆ ಎಂದು ಅವರು ಟೀಕಿಸಿದ್ದಾರೆ.

ವಲಸೆ ಕಾರ್ಮಿಕರು, ಸಮಾಜದ ಅತ್ಯಂತ ಬಡವರು ಆಡಳಿತಗಾರರ ಈ ಬಲವಂತದ ‘ಡೆತ್-ಮಾರ್ಚ್’ಗೆ ಬಲಿಯಾಗುತ್ತಿದ್ದಾರೆ. ಬಿಸಿಲು, ಹಸಿವು, ಬಾಯಾರಿಕೆ ಮತ್ತು ಬಳಲಿಕೆಯೊಂದಿಗೆ ಸಾವಿರಾರು ಕಿಲೋಮೀಟರ್ ನಡೆದುಕೊಂಡು ಅವರು ತಮ್ಮ ಮನೆಗಳಿಗೆ ಹೋಗುತ್ತಿದ್ದಾರೆ. ಸರಿಯಾದ ಪೂರ್ವ ತಯಾರಿ ಇಲ್ಲದೆ ಘೋಷಿಸಲಾದ ಲಾಕ್‍ಡೌನ್‍ನಿಂದಾಗಿ ಕಾರ್ಮಿಕರು ತಮ್ಮ ಮನೆಗಳಿಗೆ ಹೋಗಲು ಸಾಧ್ಯವಾಗದೆ, ಅವರನ್ನು ಅನಿವಾರ್ಯವಾಗಿ ನಡೆದುಕೊಂಡು ಹೋಗುವಂತೆ ಮಾಡಿ ರಸ್ತೆಗಳು ಮತ್ತು ರೈಲ್ವೆ ಹಳಿಗಳಲ್ಲಿ ಅವರನ್ನು ಕೊಲ್ಲಲಾಗುತ್ತಿದೆ ಎಂದು ಮುಹಮ್ಮದ್ ಶಾಫಿ ಕಿಡಿಗಾರಿದ್ದಾರೆ.

ಕೇಂದ್ರ ಮತ್ತು ಕೆಲವು ರಾಜ್ಯಗಳ ಸಂವೇದನಾರಹಿತ ಸರಕಾರಗಳು ಈ ಬಡ ಜನರ ಸಾವನ್ನು ಆನಂದಿಸುತ್ತಿವೆ. ಕೋವಿಡ್-19 ಸೋಂಕು ಹಿಂದುತ್ವ ಬಲಪಂಥೀಯರ ಬೂಟಾಟಿಕೆಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿದೆ. ಬಿಜೆಪಿಯೇತರ ರಾಜ್ಯ ಸರಕಾರಗಳು, ಎನ್‍ಜಿಒಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ಈ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿದ್ದರೆ, ಬಿಜೆಪಿ ಸರಕಾರಗಳು ಕಾರ್ಮಿಕರಿಗೆ ಸಹಾಯ ಮಾಡುವವರನ್ನು ತಪ್ಪಿತಸ್ಥರೆಂದು ಪರಿಗಣಿಸುತ್ತಿವೆ. ಈ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡುವುದನ್ನು ಉತ್ತರ ಪ್ರದೇಶ ಸರಕಾರ ಅಪರಾಧವೆಂದು ಘೋಷಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಲಸೆ-ಕಾರ್ಮಿಕರ ಬಿಕ್ಕಟ್ಟು ಭಾರತದ ಕೊರೋನ ವೈರಸ್ ಲಾಕ್‍ಡೌನ್‍ಗೆ ಅವಮಾನವಾಗಿದೆ. 300ಕ್ಕೂ ಹೆಚ್ಚು ಕಾರ್ಮಿಕರು ಈಗಾಗಲೇ ಸಾವನ್ನಪ್ಪಿದ್ದು, ಅವರ ಸಾವುಗಳು ವೈರಸ್‍ಗೆ ಸಂಬಂಧಿಸಿಲ್ಲ. ವಲಸೆ ಕಾರ್ಮಿಕರಿಗೆ ಸರಿಯಾದ ಸಾರಿಗೆ ವ್ಯವಸ್ಥೆ ಒದಗಿಸಿ ಅವರು ತಮ್ಮ ಮನೆಗೆ ಸುರಕ್ಷಿತವಾಗಿ ತಲುಪುವಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಹಮ್ಮದ್ ಶಾಫಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X