Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊರ ರಾಜ್ಯಗಳಿಂದ ಆಗಮಿಸಿದ್ದ 1428...

ಹೊರ ರಾಜ್ಯಗಳಿಂದ ಆಗಮಿಸಿದ್ದ 1428 ಮಂದಿಗೆ ಸಾಂಸ್ಥಿಕ ಕ್ವಾರೆಂಟೈನ್: ಶಿವಮೊಗ್ಗ ಡಿಸಿ ಕೆ.ಬಿ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ18 May 2020 11:17 PM IST
share
ಹೊರ ರಾಜ್ಯಗಳಿಂದ ಆಗಮಿಸಿದ್ದ 1428 ಮಂದಿಗೆ ಸಾಂಸ್ಥಿಕ ಕ್ವಾರೆಂಟೈನ್: ಶಿವಮೊಗ್ಗ ಡಿಸಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ: ಬೇರೆ ರಾಜ್ಯಗಳಿಂದ ಜಿಲ್ಲೆಗೆ ಇದುವರೆಗೆ ಆಗಮಿಸಿರುವ 1428ಮಂದಿಯನ್ನು ಸಾಂಸ್ಥಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೊರ ಜಿಲ್ಲೆಗಳಿಂದ ಆಗಮಿಸಿದ್ದವರ ಪೈಕಿ 802 ಮಂದಿಯ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದ್ದು, 14ಪಾಸಿಟಿವ್ ಬಂದಿವೆ. ಇನ್ನುಳಿದವರ ಪರೀಕ್ಷೆಯನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು. ಇದುವರೆಗೆ ಒಟ್ಟು 4554 ಸ್ಯಾಂಪಲ್‍ಗಳ ಪರೀಕ್ಷೆ ನಡೆಸಲಾಗಿದ್ದು, 4349 ವರದಿ ಬಂದಿವೆ. ಇನ್ನೂ 191 ಸ್ಯಾಂಪಲ್‍ಗಳ ವರದಿ ಬರಬೇಕಿದೆ ಎಂದು ಹೇಳಿದರು.

ಕ್ವಾರೆಂಟೈನ್ ವ್ಯವಸ್ಥೆ: ಪ್ರಸ್ತುತ 916ಮಂದಿ ಸಾಂಸ್ಥಿಕ ಕ್ವಾರೆಂಟೈನ್ ಮತ್ತು 64ಮಂದಿ ಹೋಂ ಕ್ವಾರೆಂಟೈನ್‍ನಲ್ಲಿದ್ದಾರೆ ಎಂದು ಹೇಳಿದರು. ಕ್ವಾರೆಂಟೈನ್ ವ್ಯವಸ್ಥೆಗಾಗಿ 50 ವಸತಿ ಶಾಲೆಗಳು, ಹೊಟೇಲ್‍ಗಳು ಮತ್ತು ಗ್ರಾಮೀಣ ಭಾಗದಲ್ಲಿ 7ಶಾಲೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಪಾಸಿಟಿವ್ ಬಂದ ಪ್ರಕರಣಗಳಿಗೆ ಸಂಬಂಧಿಸಿದಂತೆ 67ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದವರು ಹಾಗೂ 150ಮಂದಿ ದ್ವಿತೀಯ ಹಂತದ ಸಂಪರ್ಕ ಹೊಂದಿದವರನ್ನು ಕ್ವಾರೆಂಟೈನ್ ಮಾಡಲಾಗಿದೆ. ಕ್ವಾರೆಂಟೈನ್‍ನಲ್ಲಿರುವವರಿಗೆ ಪ್ರತಿದಿನ ಇಡ್ಲಿ, ಬಾಳೆ ಹಣ್ಣು, ಅನ್ನ ಸಾಂಬಾರು, ಪಲ್ಯ, ಚಪಾತಿ, ಮೊಟ್ಟೆ ಸೇರಿದಂತೆ  ಉತ್ತಮವಾದ ಆಹಾರವನ್ನು ಒದಗಿಸಲಾಗುತ್ತಿದೆ. ಕ್ವಾರೆಂಟೈನ್‍ನಲ್ಲಿರುವವರು ತಮ್ಮ ಅಹವಾಲುಗಳನ್ನು ಸಲ್ಲಿಸಲು 24x7 ಕಂಟ್ರೋಲ್ ರೂಂ ತೆರೆಯಲಾಗಿದ್ದು, 08182-220082 ಸಂಖ್ಯೆಗೆ ಮಾಹಿತಿ ನೀಡಬಹುದಾಗಿದೆ ಎಂದು ಅವರು ಹೇಳಿದರು.

5.12 ಲಕ್ಷ ಜನರ ಆರೋಗ್ಯದ ಮೇಲೆ ನಿಗಾ: ಜಿಲ್ಲೆಯಲ್ಲಿ ಎರಡನೇ ಹಂತದ ಮನೆ ಮನೆ ಆರೋಗ್ಯ ಸಮೀಕ್ಷೆ ಪೂರ್ಣಗೊಂಡಿದ್ದು, 3.26ಜನರ ಆರೋಗ್ಯದ ಮಾಹಿತಿ ಪಡೆಯಲಾಗಿದೆ. ಇದೀಗ ಮೂರನೇ ಹಂತದ ಸಮೀಕ್ಷೆ ಆರಂಭಿಸಲಾಗಿದ್ದು, ಒಟ್ಟು 5.12ಲಕ್ಷ ಜನರ ಆರೋಗ್ಯ ಮಾಹಿತಿ ಪಡೆಯಲಾಗುವುದು. ಇದರಲ್ಲಿ 18ಸಾವಿರ ಮಂದಿ ಗರ್ಭಿಣಿಯರು, 83ಸಾವಿರ ಮಂದಿ ಡಯಾಬಿಟಿಸ್ ವ್ಯಕ್ತಿಗಳು, 60ವರ್ಷ ಮೇಲ್ಪಟ್ಟವರು ಸೇರಿದ್ದಾರೆ. ಆಶಾ ಕಾರ್ಯಕರ್ತೆಯರು ಮತ್ತು ಬಿಎಲ್‍ಒಗಳು ಸಮೀಕ್ಷೆ ಕಾರ್ಯ ಕೈಗೊಂಡಿದ್ದಾರೆ ಎಂದರು.

5200ಮಂದಿಗೆ ಪಾಸ್: ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ತೆರಳಲು ಇದುವರೆಗೆ 5200 ಮಂದಿಗೆ ಪಾಸ್ ನೀಡಲಾಗಿದೆ. ಇದರಲ್ಲಿ 281 ಉತ್ತರ ಪ್ರದೇಶ, 79ಮಂದಿ ಜಾರ್ಖಂಡ್, 316 ಮಂದಿ ಬಿಹಾರ, 150ಮಂದಿ ಪಶ್ಚಿಮ ಬಂಗಾಳ, 250ಮಂದಿ ರಾಜಸ್ತಾನ, 36ಮಂದಿ ಮಧ್ಯಪ್ರದೇಶದವರು ಸೇರಿದ್ದಾರೆ. ಇದೇ ವೇಳೆ ಬೇರೆ ಜಿಲ್ಲೆಗಳಿಂದ ಆರಂಭಿಕ ಹಂತದಲ್ಲಿ 59ಸಾವಿರ ಮಂದಿ ಬಳಿಕ 3300ಮಂದಿ ಪಾಸ್ ಬಳಸಿಕೊಂಡು ಬಂದಿದ್ದಾರೆ. ಸುಮಾರು 150ಮಂದಿ ಪಾಸ್ ಇಲ್ಲದೇ ಜಿಲ್ಲೆಗೆ ಬರುವ ಪ್ರಯತ್ನ ಮಾಡಿದ್ದು, ಅಂತವರನ್ನು ಚೆಕ್‍ಪೋಸ್ಟ್‍ಗಳಲ್ಲಿ ಪತ್ತೆ ಹಚ್ಚಿ ಕ್ವಾರೆಂಟೈನ್‍ಗೆ ಕ್ರಮ ಕೈಗೊಳ್ಳಲಾಗಿದೆ. ಕಳ್ಳಹಾದಿಯಲ್ಲಿ ಬಂದವರನ್ನು ಸಾರ್ವಜನಿಕರ ಸಹಕಾರದೊಂದಿಗೆ ಪತ್ತೆ ಹಚ್ಚಲು ಸಾಧ್ಯವಾಗಿದೆ. ಅಂತಹ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು 08182-221010 ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X