Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿ.ಕೆ.ಶಿವಕುಮಾರ್ ದ್ವಂದ್ವ ನೀತಿ ಬಿಡಲಿ:...

ಡಿ.ಕೆ.ಶಿವಕುಮಾರ್ ದ್ವಂದ್ವ ನೀತಿ ಬಿಡಲಿ: ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ19 May 2020 8:38 PM IST
share
ಡಿ.ಕೆ.ಶಿವಕುಮಾರ್ ದ್ವಂದ್ವ ನೀತಿ ಬಿಡಲಿ: ಸಚಿವ ಬಿ.ಸಿ.ಪಾಟೀಲ್

ಕೊಪ್ಪಳ, ಮೇ 19: ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಳಗೊಂದು ಹೊರಗೊಂದು ಮಾತನಾಡುವ ದ್ವಂದ್ವನೀತಿ ಬಿಡಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವು ಹಂಚುವ ಆಹಾರ ಧಾನ್ಯ ಮತ್ತಿತರ ಅವಶ್ಯಕ ಪದಾರ್ಥಗಳ ಕಿಟ್ ಮೇಲೆ ಬಿಜೆಪಿ ಚಿಹ್ನೆ ಹಾಕಿ ವಿತರಿಸುತ್ತಿದ್ದಾರೆ ಎಂಬ ಅವರ ಟೀಕೆ ಹುರುಳಿಲ್ಲದ್ದು ಎಂದು ಹೇಳಿದರು.

ಬಿಜೆಪಿ ಮುಖಂಡರು ತಮ್ಮ ಸ್ವಂತ ಖರ್ಚಿನಲ್ಲಿ ವಿತರಣೆ ಮಾಡುತ್ತಿರುವ ಕಿಟ್‍ಗಳನ್ನು ತಂದು ಅವರು ಈ ರೀತಿ ಆರೋಪ ಮಾಡುವುದು ಸರಿಯಲ್ಲ. ವಿವರಗಳನ್ನು ಪರಿಶೀಲಿಸಿ ಮಾತನಾಡಬೇಕು ಎಂದು ಬಿ.ಸಿ.ಪಾಟೀಲ್ ಹೇಳಿದರು.

ಇತ್ತೀಚೆಗೆ ವಿಧಾನಸೌಧದಲ್ಲಿ ಸರಕಾರ ನಡೆಸಿದ ಸರ್ವಪಕ್ಷಗಳ ಮುಖಂಡರ ಸಭೆಯಲ್ಲಿ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ನೇತೃತ್ವದ ಸರಕಾರ ಕೊರೋನ ಸಂಕಷ್ಟ ಸಮಯದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಹತ್ತಾರು ಬಾರಿ ಹೊಗಳಿದರು. ಹೀಗೆ ಹೇಳಿದವರು ಹೊರಗೆ ಅನಗತ್ಯ ಟೀಕೆ-ಆರೋಪ ಮಾಡುತ್ತಿದ್ದಾರೆ. ಇಂಥ ಇಬ್ಬಗೆ ನೀತಿಯನ್ನು ಅವರು ಬಿಡಬೇಕು ಎಂದು ಬಿ.ಸಿ.ಪಾಟೀಲ್ ಆಗ್ರಹಿಸಿದರು.

ಹುರುಳಿಲ್ಲದಿದ್ದರೂ ಟೀಕೆ ಮಾಡುತ್ತಲೇ ಇರುವ ಅವರಿಗೆ ಟೀಕೆ ಮಾಡದಿದ್ದರೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಪಟ್ಟದಿಂದ ಕಿತ್ತೊಗೆಯುತ್ತಾರೆ ಎಂಬ ಭೀತಿ ಆವರಿಸಿಕೊಂಡಿದೆ ಎಂದು ಅವರು ವ್ಯಂಗ್ಯವಾಡಿದರು.

ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಮಾಡುವ ಹುರುಳಿಲ್ಲದ ಟೀಕೆಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ. ಎಪ್ರಿಲ್ ತಿಂಗಳಿನಲ್ಲಿ ತೀರಾ ಅವಶ್ಯಕ ಸೇವೆ ಹೊರತುಪಡಿಸಿ ಉಳಿದ ಸರಕಾರಿ ಕಚೇರಿಗಳು ಕಾರ್ಯ ನಿರ್ವಹಿಸುತ್ತಿರಲಿಲ್ಲ. ಈಗ ಅವು ಪುನಾರಂಭವಾಗಿದ್ದು ಎಲ್ಲ ಬಿಲ್ ಗಳನ್ನು ಕ್ರಮವಾಗಿ ವಿಲೇವಾರಿ ಮಾಡುತ್ತಿದ್ದಾರೆ. ಬಿಲ್ ಮತ್ತು ಸಂಬಳ ನೀಡಲಾಗದಂಥ ಮಟ್ಟಕ್ಕೆ ಸರಕಾರ ಹೋಗಿಲ್ಲ ಎಂದು ಬಿ.ಸಿ.ಪಾಟೀಲ್ ಹೇಳಿದರು.

ವಲಸೆ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ ವಿವರಿಸಿದ ಅವರು, ಪ್ರತಿ ರಾಜ್ಯಕ್ಕೂ ಓರ್ವ ಐಎಎಸ್ ಹಂತದ ಅಧಿಕಾರಿಯನ್ನು ನಿಯೋಜಿಸಿ ಸೇವಾಸಿಂಧು ಮೂಲಕ ಪ್ರಯಾಣ ಮಾಡುವವರ ವಿವರ ನೋಂದಾಯಿಸಿಕೊಂಡು ಕಳುಹಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X