ಮಂಗಳೂರು: ಉತ್ತರ ಭಾರತದ ವಲಸೆ ಕಾರ್ಮಿಕರ ಪ್ರತಿಭಟನೆ
ಮಂಗಳೂರು, ಮೇ 19: ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದ ಉತ್ತರ ಭಾರತದ ವಲಸೆ ಕಾರ್ಮಿಕರು ಮಂಗಳವಾರ ನಗರದ ಮಿಲಾಗ್ರಿಸ್ ಬಳಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಕೆಲವು ದಿನಗಳಿಂದ ವಿಶೇಷ ಶ್ರಮಿಕ್ ರೈಲಿನ ಮೂಲಕ ಸ್ವಗ್ರಾಮಕ್ಕೆ ಕಳುಹಿಸಿಕೊಡುವ ಬಗ್ಗೆ ಮಾಹಿತಿ ಪಡೆದ ವಲಸೆ ಕಾರ್ಮಿಕರು ತಾಂತ್ರಿಕ ಕಾರಣದಿಂದ ಸಕಾಲಕ್ಕೆ ತವರು ಜಿಲ್ಲೆಗೆ ಹೋಗಲಾಗದೆ ನಗರದ ಹಂಪನಕಟ್ಟೆ, ಮಿಲಾಗ್ರಿಸ್ ಸುತ್ತಮುತ್ತ ಆಶ್ರಯ ಪಡೆಯುತ್ತಿದ್ದರು. ಮಂಗಳವಾರ ಸುಮಾರು 400ರಷ್ಟು ವಲಸೆ ಕಾರ್ಮಿಕರು ದಿಢೀರ್ ಪ್ರತಿಭಟನೆ ನಡೆಸಿ ತಮ್ಮನ್ನ್ನು ಊರಿಗೆ ಕಳುಹಿಸಿಕೊಡುವಂತೆ ಆಗ್ರಹಿಸಿ ಪಟ್ಟುಹಿಡಿದರು.
ಮಾಹಿತಿ ತಿಳಿದ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಸ್ಥಳಕ್ಕೆ ಆಗಮಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಿದರು. ಅಲ್ಲದೆ ಊರಿಗೆ ಹೋಗಲು ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು. ಆ ಬಳಿಕ ವಲಸೆ ಕಾರ್ಮಿಕರು ಪ್ರತಿಭಟನೆಯನ್ನು ಕೈ ಬಿಟ್ಟರು.
Next Story





