Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಲಸೆ ಕಾರ್ಮಿಕರಿಗೆ ವಿಶ್ರಾಂತಿ...

ವಲಸೆ ಕಾರ್ಮಿಕರಿಗೆ ವಿಶ್ರಾಂತಿ ಸ್ಥಳ,ಆಹಾರ ಒದಗಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 May 2020 10:05 PM IST
share
ವಲಸೆ ಕಾರ್ಮಿಕರಿಗೆ ವಿಶ್ರಾಂತಿ ಸ್ಥಳ,ಆಹಾರ ಒದಗಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

 ಹೊಸದಿಲ್ಲಿ,ಮೇ 19: ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಹೆಚ್ಚು ರೈಲುಗಳು ಮತ್ತು ಬಸ್‌ಗಳನ್ನು ಓಡಿಸಲು ರಾಜ್ಯಗಳು ಮತ್ತು ರೈಲ್ವೆ ಸಚಿವಾಲಯ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ಸೂಚಿಸಿದೆ. ಇದೇ ವೇಳೆ,ರಾಜ್ಯಗಳು ಕಾಲ್ನಡಿಗೆಯಿಂದ ತಮ್ಮ ಗ್ರಾಮಗಳಿಗೆ ಮರಳುತ್ತಿರುವ ವಲಸಿಗರಿಗಾಗಿ ವಿಶ್ರಾಂತಿ ಸ್ಥಳಗಳು,ಆಹಾರ ಮತ್ತು ಆಶ್ರಯಗಳ ವ್ಯವಸ್ಥೆಗಳನ್ನು ಮಾಡಬೇಕು ಎಂದೂ ಸಚಿವಾಲಯವು ತಿಳಿಸಿದೆ.

ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ವಲಸೆ ಕಾರ್ಮಿಕರ ಪ್ರಯಾಣವನ್ನು ಸುಲಭಗೊಳಿಸಲು ಹಲವಾರು ಕ್ರಮಗಳನ್ನು ಸೂಚಿಸಿರುವ ಗೃಹ ಕಾರ್ಯದರ್ಶಿ ಅಜಯ ಭಲ್ಲಾ ಅವರು,ರೈಲ್ವೆ ಸಚಿವಾಲಯ ಮತ್ತು ರಾಜ್ಯಗಳು ಪರಸ್ಪರ ಸಮನ್ವಯದೊಂದಿಗೆ ಹೆಚ್ಚಿನ ವಿಶೇಷ ರೈಲುಗಳನ್ನು ಓಡಿಸಬಹುದಾಗಿದೆ. ಜಿಲ್ಲಾಡಳಿತಗಳ ಅಧಿಕಾರಿಗಳು ಕಾಲ್ನಡಿಗೆಯಿಂದ ಸಾಗುತ್ತಿರುವ ವಲಸೆ ಕಾರ್ಮಿಕರಿಗೆ ನಿಯೋಜಿತ ವಿಶ್ರಾಂತಿ ಸ್ಥಳಗಳನ್ನು ಒದಗಿಸಬೇಕು ಮತ್ತು ಅವರಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಸಮೀಪದ ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳ ಬಗ್ಗೆ ಮಾಹಿತಿಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.

 ಶಂಕಿತ ಕೋವಿಡ್-19 ಪ್ರಕರಣಗಳಲ್ಲಿ ಸಂಪರ್ಕ ವ್ಯಕ್ತಿಗಳನ್ನು ಪರೀಕ್ಷೆಗೊಳಪಡಿಸಲು ನೆರವಾಗುವಂತೆ ಹೆಸರು,ವಿಳಾಸ ಮತ್ತು ಫೋನ್ ನಂಬರ್‌ಗಳೊಂದಿಗೆ ವಲಸಿಗರ ಪಟ್ಟಿಯನ್ನು ರಾಜ್ಯಗಳು ಸಿದ್ಧಪಡಿಸಬಹುದಾಗಿದೆ. ರೈಲು ಅಥವಾ ಬಸ್‌ಗಳ ಮೂಲಕ ಊರು ತಲುಪಿದ ಬಳಿಕ ತಮಗೆ ದೀರ್ಘಕಾಲ ಕ್ವಾರಂಟೈನ್ ವಿಧಿಸಲಾಗುತ್ತದೆ ಎಂಬ ವಲಸೆ ಕಾರ್ಮಿಕರಲ್ಲಿಯ ಭೀತಿಯನ್ನು ರಾಜ್ಯಗಳ ಅಧಿಕಾರಿಗಳು ಮತ್ತು ಸರಕಾರೇತರ ಸಂಸ್ಥೆಗಳು ನಿವಾರಿಸಬೇಕು ಎಂದಿರುವ ಭಲ್ಲಾ,ವಲಸೆ ಕಾರ್ಮಿಕರನ್ನು ಸಾಗಿಸುವ ಬಸ್‌ಗಳಿಗೆ ಅಂತರರಾಜ್ಯ ಗಡಿಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡುವಂತೆ ಸೂಚಿಸಿದ್ದಾರೆ.

ವಲಸಿಗರಲ್ಲಿಯ ಆತಂಕವನ್ನು ನಿವಾರಿಸಲು ಸರಕಾರಗಳು ರೈಲುಗಳು ಮತ್ತು ಬಸ್‌ಗಳ ನಿರ್ಗಮನ ಕುರಿತು ಅವರಿಗೆ ಸ್ಪಷ್ಟವಾದ ಮಾಹಿತಿಯನ್ನು ಒದಗಿಸಬೇಕು. ಅವರ ಪೈಕಿ ಮಹಿಳೆಯರು,ಮಕ್ಕಳು ಮತ್ತು ವಯಸ್ಸಾದವರ ನಿರ್ದಿಷ್ಟ ಅಗತ್ಯಗಳನ್ನು ಪೂರೈಸಲು ವಿಶೇಷ ಗಮನವನ್ನು ವಹಿಸಬೇಕು ಎಂದೂ ಭಲ್ಲಾ ಪತ್ರದಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X