Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿನ್ನು...

ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿನ್ನು ಕೋವಿಡ್ ಪರೀಕ್ಷೆ: ಐಸಿಎಂಆರ್‌ನಿಂದ ಅನುಮತಿ

ವಾರ್ತಾಭಾರತಿವಾರ್ತಾಭಾರತಿ19 May 2020 10:06 PM IST
share
ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿನ್ನು ಕೋವಿಡ್ ಪರೀಕ್ಷೆ: ಐಸಿಎಂಆರ್‌ನಿಂದ ಅನುಮತಿ

ಮಂಗಳೂರು, ಮೇ 19: ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಐಸಿಎಂಆರ್ ಅನುಮೋದನೆಯನ್ನು ನೀಡಿದೆ ಎಂದು ಆಸ್ಪತ್ರೆಯ ಪ್ರಕಟನೆ ತಿಳಿಸಿದೆ.

ಕೋವಿಡ್ ಪರೀಕ್ಷೆಯನ್ನು ಪ್ರಾರಂಭಿಸಲು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ನಿಮ್ಹಾನ್ಸ್ ಬೆಂಗಳೂರು ಮಾರ್ಗದರ್ಶಿ ಕೇಂದ್ರದಿಂದ ಕಿರುಪಟ್ಟಿ ಪಡೆದ ಕೇಂದ್ರಗಳಲ್ಲಿ ಒಂದಾಗಿದೆ.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ಮೈಕ್ರೋಬಯೊಲಾಜಿ ವಿಭಾಗದ ಪ್ರಾಧ್ಯಾಪಕ ಡಾ. ಅನುಪ್ ಕುಮಾರ್ ಅವರು ಲಾಕ್ ಡೌನ್ ಸಮಯದಲ್ಲಿ ಸಹ ಈ ಉದ್ದೇಶಕಾಗಿ ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ತರಬೇತಿಯನ್ನು ಪಡೆದಿದ್ದಾರೆ.ಾ

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಪ್ರಯೋಗಾಲಯವು ಎನ್‌ಎಬಿಎಲ್ (ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯ ಗಳ ರಾಷ್ಟ್ರೀಯ ಮಾನ್ಯತ ಮಂಡಳಿ)ಯಿಂದ 2012ರಿಂದ ಮಾನ್ಯತೆ ಪಡೆದಿದೆ ಮತ್ತು ಈಗಾಗಲೇ ಆರ್‌ಟಿ- ಪಿಸಿಆರ್ ಪರೀಕ್ಷೆಗೆ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿದೆ. ಲ್ಯಾಬ್ ಮೊದಲು ನಿಮ್ಹಾನ್ಸ್ ಪ್ರಾವೀಣ್ಯತೆಯ ಪರೀಕ್ಷೆಯಲ್ಲಿ ಭಾಗವಹಿಸಿತ್ತು ಮತ್ತು ನಂತರ ಅಂತಿಮ ಐಸಿಎಂಆರ್ ಅನುಮೋದನೆ ಪಡೆಯುವ ಮೊದಲು ಪರೀಕ್ಷೆಗಳ ವ್ಯಾಪ್ತಿಯಲ್ಲಿ ಸಾರ್ಸ್- ಕೋವಿಡ್ -2 ಆರ್‌ಟಿ-ಪಿಸಿಆರ್ ಮೌಲ್ಯ ಮಾಪನದಲ್ಲಿ ಭಾಗವಹಿಸಿತ್ತು. ಪ್ರಯೋಗಾಲಯವು ರಾಷ್ಟ್ರೀಯ/ಅಂತರಾಷ್ಟ್ರೀಯ ಗುಣಮಟ್ಟದ ಮಾರ್ಗ ಸೂಚಿಗಳನ್ನು ಅನುಸರಿಸಿದೆ.

ಪ್ರಾವೀಣ್ಯತೆಯ ಪರೀಕ್ಷೆಯಲ್ಲಿ ಭಾಗವಹಿಸಿದೆ. ಉಪಕರಣಗಳ ಆವರ್ತಕ ಮಾಪಾನಾಂಕ ನಿರ್ಣಯವನ್ನು ಮಾಡಿದೆ ಮತ್ತು ಕಟ್ಟುನಿಟ್ಟಾದ ಸುರಕ್ಷಾತ ಮುನ್ನಚ್ಚರಿಕೆಗಳು ಮತ್ತು ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆಯನ್ನು ಅನುಸರಿಸಿದೆ. ಬೊಧಕವರ್ಗ, ಸಿಬ್ಬಂದಿ ಮತ್ತು ದತ್ತಾಂಶ ನಿವಾರ್ಹಕರು ಉತ್ತಮ ತರಬೇತಿ ಪಡೆದ ತಂಡವಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಉನ್ನತ ಗುಣಮಟ್ಟವನ್ನು ತಲುಪಲು ತಮ್ಮ ಶ್ರಮವನ್ನು ಹಾಕಿದ್ದಾರೆ. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಈಗಾಗಲೇ ಎನ್‌ಎಬಿಎಚ್ ಮಾನ್ಯತೆ ಪಡೆದಿದೆ ಮತ್ತು ವೈದ್ಯಕೀಯ ಕಾಲೇಜು ನ್ಯಾಕ್ ಮಾನ್ಯತೆ ಪಡೆದಿದೆ.

ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಆಸ್ಪತ್ರೆಯ ಐಸೋಲೇಶನ್ ವಾರ್ಡ್ ಮತ್ತು ಸಾಕಷ್ಟು ವೆಂಟಿಲೇಟರ್ಗಳನ್ನು, ಸಿಬ್ಬಂದಿಗಳಿಗಾಗಿ ಅಗತ್ಯ ಪಿಪಿಇ ಗಳನ್ನು ತಯಾರಿ ಮಾಡಿರಿಸಲಾಗಿದೆ. ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ನಿಗದಿಪಡಿಸಿದ ಪ್ರೊಟೊಕಾಲ್ ಬಗ್ಗೆ ಸಿಬ್ಬಂದಿಗಳಿಗೆ ವಿವರಿಸಲಾಗಿದೆ. ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಡಾ. ಉದಯ್ ಕುಮಾರ್ ವೈದ್ಯಕೀಯ ಅಧಿಕ್ಷಕ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಆಸ್ಪತ್ರೆಯ ಸೇವೆಯನ್ನು ಜಿಲ್ಲೆಗೆ ವಿಸ್ತರಿಸ ಲಾಗಿದೆ. ಮಾದರಿ ಸಂಗ್ರಹಕ್ಕಾಗಿ ಮೀಸಲಾದ ಕಿಯೋಸ್ಕ್ ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಲಭ್ಯವಿದೆ. ಮಾದರಿಗಳನ್ನು ಸರಿಯಾದ ಕೋಲ್ಡ್ ಚೈನ್ ಮತ್ತು ಸುರಕ್ಷತಾ ಪ್ರೊಟೋಕಾಲ್‌ಗಳ ಮೂಲಕ ಲ್ಯಾಬ್‌ಗೆ ಸಾಗಿಸಲಾಗುತ್ತದೆ.

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಆಡಳಿತಧಿಕಾರಿ ಫಾ. ರುಡಾಲ್ಫ್ ರವಿ ಡೆಸಾ ರವರು ಲ್ಯಾಬ್‌ನ ಉಪಕರಣಗಳನ್ನು ಸಂಗ್ರಹಿಸಲು ಮತ್ತು ಅಗತ್ಯವಾದ ಪ್ರೊಟೊಕಾಲ್ ಹಾಕಲು ಸಹಕರಿಸಿದ್ದಾರೆ. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಧಿಕಾರಿ ಫಾ. ಅಜಿತ್ ಮಿನೆಜಸ್‌ರವರು ಲ್ಯಾಬ್‌ಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಪೂರೈಕೆಯ ಉಸ್ತುವಾರಿಯನ್ನು ವಹಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X