ರಾಜ್ಯದಲ್ಲಿ ಎರಡು ತಿಂಗಳು ಮೋಟಾರ್ ವಾಹನ ತೆರಿಗೆ ವಿನಾಯಿತಿ

ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 20: ರಾಜ್ಯದಲ್ಲಿ ನೋಂದಾಯಿಸಲ್ಪಟ್ಟಿರುವ ಎಲ್ಲ ಪ್ರಯಾಣಿಕ ಮತ್ತು ಸರಕು ಸೇವಾ ಸಾರಿಗೆ ವಾಹನಗಳಿಗೆ ಮಾರ್ಚ್ 24ರಿಂದ ಮೇ 23ರವರೆಗೆ ಮೋಟಾರ್ ವಾಹನ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಕೋರೋನ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಹೇರಿರುವ ಲಾಕ್ಡೌನ್ ಹಿನ್ನೆಲೆಯಲ್ಲಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕಾರ್ಮಿಕರನ್ನು ಸ್ವಂತ ಊರುಗಳಿಗೆ ಕಳುಹಿಸಲು ಸರಕಾರದಿಂದ ಅನುಮತಿ ಪಡೆದರೆ ಜೂನ್ 30ರವರೆಗೆ ರಹದಾರಿಗಳಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಲಾಗಿದೆ.
ಇದೇ ವೇಳೆ ಸರಕು ಸಾಗಾಣೆ ವಾಹನಗಳಿಗೆ ಅನ್ವಯಿಸುವಂತೆ 2020ರ ಎಪ್ರಿಲ್ 15ರೊಳಗೆ ಪಾವತಿಸಬೇಕಿದ್ದ ದ್ವಿಪಕ್ಷೀಯ ತೆರಿಗೆ ದಂಡ ರಹಿತವಾಗಿ ಪಾವತಿಸಲು ಜೂನ್ 1ರವರೆಗೆ ವಿಸ್ತರಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಅವರು ಮತ್ತೊಂದು ಆದೇಶದಲ್ಲಿ ಸ್ಪಷ್ಪಪಡಿಸಿದ್ದಾರೆ.
Next Story





