ದ.ಕ. ಜಿಲ್ಲಾಧಿಕಾರಿಗೆ ಮನಪಾ ಪ್ರತಿಪಕ್ಷ ನಾಯಕ ಮನವಿ

ಮಂಗಳೂರು, ಮೇ 20: ನಗರದ ಸೆಂಟ್ರಲ್ ಮಾರ್ಕೆಟ್‌ನಿಂದ ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಗೊಂಡ ವ್ಯಾಪಾರಸ್ಥರು ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಮಂಗಳೂರು ಮನಪಾ ಪ್ರತಿಪಕ್ಷ ನಾಯಕ ಅಬ್ದುರ್ರವೂಫ್ ನೇತೃತ್ವದ ಕಾಂಗ್ರೆಸ್ ನಿಯೋಗ ಬುಧವಾರ ದ.ಕ.ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಈ ಸಂದರ್ಭ ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ದೆ, ಎಚ್ ಭಾಸ್ಕರ್, ವಸಂತ ಬೇರ್ನಾರ್ಡ್, ಸದಾಶಿವ ಉಳ್ಳಾಲ್, ನವೀನ್ ಡಿಸೋಜ, ಶಾಹುಲ್ ಹಮೀದ್ ಬೆಳ್ತಂಗಡಿ, ಪ್ರತಿಭಾ ಕುಳಾಯಿ, ಅನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Next Story





