Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು: ಬೃಹತ್ ಗಾಂಜಾ ಮಾರಾಟ ಜಾಲ ಪತ್ತೆ:...

ಕೊಡಗು: ಬೃಹತ್ ಗಾಂಜಾ ಮಾರಾಟ ಜಾಲ ಪತ್ತೆ: 12 ಮಂದಿಯ ಬಂಧನ, ಲಕ್ಷಾಂತರ ರೂ. ಮೌಲ್ಯದ ಮಾಲು ಜಪ್ತಿ

ವಾರ್ತಾಭಾರತಿವಾರ್ತಾಭಾರತಿ20 May 2020 11:04 PM IST
share
ಕೊಡಗು: ಬೃಹತ್ ಗಾಂಜಾ ಮಾರಾಟ ಜಾಲ ಪತ್ತೆ: 12 ಮಂದಿಯ ಬಂಧನ, ಲಕ್ಷಾಂತರ ರೂ. ಮೌಲ್ಯದ ಮಾಲು ಜಪ್ತಿ

ಮಡಿಕೇರಿ, ಮೇ.20: ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಭೇದಿಸಿರುವ ಕೊಡಗು ಜಿಲ್ಲಾ ಅಪರಾಧ ಪತ್ತೆ ದಳವು, ಈ ಸಂಬಂಧ 12 ಮಂದಿಯನ್ನು ವೀರಾಜಪೇಟೆಯಲ್ಲಿ ಬಂಧಿಸಿ, 9 ಕೆ.ಜಿ.ಗೂ ಹೆಚ್ಚಿನ ಗಾಂಜಾವನ್ನು ವಶಪಡಿಸಿಕೊಂಡಿದೆ.

ವೀರಾಜಪೇಟೆ ನಗರದ ಸುಂಕದ ಕಟ್ಟೆಯ ನಿಸಾರ್ ಅಹಮ್ಮದ್, ಬಂಗಾಳ ಬೀದಿಯ ಎ.ಎಸ್. ಸಾದಿಕ್, ಮಡಿಕೇರಿ ಜಿಲ್ಲಾ ಕ್ರೀಡಾಂಗಣ ಬಳಿಯ ನಿವಾಸಿಗಳಾದ ಬೌತೇಶ್ ಡಿಸೋಜ, ಎಂ.ಹೆಚ್. ರಫೀಕ್, ಹಾಕತ್ತೂರು ತೊಂಬತ್ತುಮಯ ಕರಣ್ ಕುಮಾರ್, ಮಡಿಕೇರಿ ತ್ಯಾಗರಾಜ ಕಾಲೋನಿಯ ಆರೀಸ್, ವೀರಾಜಪೇಟೆ ಸುಣ್ಣದ ಬೀದಿ ನಿವಾಸಿ ಸಾಯಿ ಲಾಲ್, ವೀರಾಜಪೇಟೆ ಮೊಗರಗಲ್ಲಿಯ ರಿಝ್ವಾನ್, ಮಡಿಕೇರಿ ಆಝಾದ್ ನಗರದ ಮುಹಮ್ಮದ್ ಹ್ಯಾರಿಸ್, ಮಡಿಕೇರಿ ಉಕ್ಕುಡ ಕರ್ಣಂಗೇರಿಯ ಸಿ.ಟಿ. ದಿನೇಶ್, ಮಡಿಕೇರಿ ಎಫ್‍ಎಂಕೆಎಂಸಿಯ ಕಾಲೇಜು ಬಳಿಯ ನಿವಾಸಿ ಎನ್. ಪಿ. ಅಯ್ಯಪ್ಪ ಮತ್ತು ಮಡಿಕೇರಿ ಚೈನ್ ಗೇಟ್ ಬಳಿಯ ನಿವಾಸಿ ಮಿಲನ್ ಎಂ.ಜಿ. ಎಂಬವರೆ ಬಂಧಿತ ಆರೋಪಿಗಳು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್ ಅವರು ತಮ್ಮ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ ಬಂಧಿತ ಆರೋಪಿಗಳಿಂದ ಅಂದಾಜು 3 ಲಕ್ಷ ಮೌಲ್ಯದ 9.322 ಕೆ.ಜಿ. ಗಾಂಜಾ, 1,99,670 ರೂ. ನಗದು, 11 ಮೊಬೈಲ್, ಅಂದಾಜು 26 ಲಕ್ಷ ರೂ. ಮೌಲ್ಯದ 5 ನಾಲ್ಕು ಚಕ್ರದ ವಾಹನಗಳು, ಒಂದು ಆಟೋ ರಿಕ್ಷಾ, ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದರು.

ಖಚಿತ ಸುಳಿವು

ವೀರಾಜಪೇಟೆಯ ಸುಂಕದ ಕಟ್ಟೆ ಮೈದಾನದಲ್ಲಿ ಮಂಗಳವಾರ ಗಾಂಜಾ ಮಾರಾಟ ಜಾಲದ ಪ್ರಮುಖ ವ್ಯಕ್ತಿ ನಿಸಾರ್ ಅಹಮ್ಮದ್ ಮತ್ತು ಸಾದಿಕ್ ಅವರು ಸ್ಥಳೀಯವಾಗಿ ಗಾಂಜಾ ಮಾರಾಟ ಮಾಡುವ 10 ಮಂದಿಗೆ ಗಾಂಜಾ ಹಂಚುತ್ತಿರುವ ಬಗ್ಗೆ ದೊರೆತ ಖಚಿತ ಸುಳಿವಿನ ಮೇರೆ ಡಿಸಿಐಬಿ ತಂಡ ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವುದಾಗಿ ಎಸ್‍ಪಿ ಸುಮನ್ ಪನ್ನೇಕರ್ ತಿಳಿಸಿದರು.

ಕೊರೋನ ಲಾಕ್ ಡೌನ್ ಹಂತದಲ್ಲಿ ಮೆಡಿಕಲ್ ಎಮರ್ಜೆನ್ಸಿ ಪಾಸ್‍ನ್ನು ಆನ್ ಲೈನ್ ಮೂಲಕ ಪಡೆದುಕೊಂಡು ಗಾಂಜಾವನ್ನು ಜಿಲ್ಲೆಗೆ ತಂದು ಮಾರಾಟ ಮಾಡುವ ದಂಧೆಯಲ್ಲಿ ಈ ತಂಡ ತೊಡಗಿತ್ತು. ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಗಾಂಜಾ ಮಾರಾಟ ಜಾಲವನ್ನು ಅತ್ಯಂತ ಯಶಸ್ವಿಯಾಗಿ ಭೇದಿಸಲಾಗಿದ್ದು, ಇವರಿಗೆ ಹೊರಗಿನಿಂದ ಗಾಂಜಾ ಪೂರೈಕೆಯಾಗುತ್ತಿದ್ದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿರುವುದಾಗಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ನಿರ್ದೇಶನದಂತೆ, ವೀರಾಜಪೇಟೆ ತಹಶೀಲ್ದಾರ್ ನಂದೀಶ್ ಅವರ ಸಮಕ್ಷಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವೀರಾಜಪೇಟೆ ಪೊಲೀಸ್ ಉಪ ಅಧೀಕ್ಷಕರಾದ ಸಿ.ಟಿ. ಜಯ ಕುಮಾರ್, ವೀರಾಜಪೇಟೆ ಸಿಐ ಕ್ಯಾತೇಗೌಡ, ಡಿಸಿಐಬಿ ಪ್ರಬಾರ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್, ಉಪ ನಿರೀಕ್ಷಕರಾದ ಮರಿ ಸ್ವಾಮಿ, ಬೋಜಪ್ಪ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X