Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ, ಕಾರ್ಕಳದಲ್ಲಿ ಕೋವಿಡ್-19...

ಕುಂದಾಪುರ, ಕಾರ್ಕಳದಲ್ಲಿ ಕೋವಿಡ್-19 ಆಸ್ಪತ್ರೆ ಕಾರ್ಯಾರಂಭ

ಕುಂದಾಪುರ-120, ಕಾರ್ಕಳ- 100 ಬೆಡ್‌ಗಳ ಆಸ್ಪತ್ರೆ ಸಿದ್ಧ: ಡಿಸಿ

ವಾರ್ತಾಭಾರತಿವಾರ್ತಾಭಾರತಿ21 May 2020 9:06 PM IST
share
ಕುಂದಾಪುರ, ಕಾರ್ಕಳದಲ್ಲಿ ಕೋವಿಡ್-19 ಆಸ್ಪತ್ರೆ ಕಾರ್ಯಾರಂಭ

ಕುಂದಾಪುರ, ಮೇ 21: ವಿದೇಶ ಮತ್ತು ಹೊರರಾಜ್ಯದಿಂದ ಉಡುಪಿ ಜಿಲ್ಲೆಗೆ ಬರುತ್ತಿರುವವರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚು ಹೆಚ್ಚು ಕಂಡು ಬರುತ್ತಿರುವುದರಿಂದ ಅವರಿಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಕಾರ್ಕಳ ಮತ್ತು ಕುಂದಾಪುರದ ಸರಕಾರಿ ಆಸ್ಪತ್ರೆಗಳನ್ನು ಕೋವಿಡ್ -19 ಆಸ್ಪತ್ರೆಯನ್ನಾಗಿ ಪರಿವರ್ತನೆಗೊಳಿಸಿದೆ.

ಕುಂದಾಪುರ ಸರಕಾರಿ ಆಸ್ಪತ್ರೆಯ ಅಧೀನದಲ್ಲಿರುವ ಶ್ರೀಮತಿ ಲಕ್ಷ್ಮೀ ಸೋಮ ಬಂಗೇರ ಸ್ಮಾರಕ ಹೆರಿಗೆ ಆಸ್ಪತ್ರೆಯನ್ನು 120 ಬೆಡ್‌ಗಳ ಕೋವಿಡ್ ಆಸ್ಪತ್ರೆಯನ್ನಾಗಿ ಈಗಾಗಲೇ ಮಾಡಲಾಗಿದೆ. ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ 100 ಬೆಡ್‌ಗಳನ್ನು ಕೊರೋನ ಸೋಂಕಿತರಿಗೆ ಚಿಕಿತ್ಸೆಗೆ ನೀಡಲು ಸಿದ್ಧತೆ ನಡೆಸಲಾಗುತ್ತಿದೆ. ಇವು ನಾಳೆಯಿಂದ ಕಾರ್ಯಾರಂಭ ಮಾಡಲಿದೆ. ಹೆರಿಗೆ ಆಸ್ಪತ್ರೆಯನ್ನು ಕೇವಲ 25ಕ್ಕೆ ಇಳಿಸಿ ಕುಂದಾಪುರ ಸರಕಾರಿ ಆಸ್ಪತ್ರೆಯ ಕಟ್ಟಡಕ್ಕೆ ವರ್ಗಾಯಿಸಲಾಗಿದೆ. ಉಳಿದ ರೋಗಿಗಳ ಚಿಕಿತ್ಸೆಯು ಇದೇ ಆಸ್ಪತ್ರೆ ಯಲ್ಲಿ ಮುಂದುವರೆಯಲಿದೆ. ಹೆಚ್ಚಿನ ಹೆರಿಗೆ ಪ್ರಕರಣಗಳು ಬಂದರೆ, ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಥವಾ ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗುತ್ತದೆ.

ಕುಂದಾಪುರ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಜಿಲ್ಲಾಧಿಕಾರಿ ಮಾತನಾಡಿ, ವಿದೇಶ ಮತ್ತು ಹೊರರಾಜ್ಯದಿಂದ ಉಡುಪಿ ಜಿಲ್ಲೆಗೆ ಬರುತ್ತಿರುವ ಸಾಕಷ್ಟು ಮಂದಿ ಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿವೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಕೊರೋನ ಲಕ್ಷ್ಮಣಗಳಿಲ್ಲದ ಸೋಂಕಿ ತರಿಗೆ ಕಾರ್ಕಳ ಮತ್ತು ಕುಂದಾಪುರದಲ್ಲಿ ಚಿಕಿತ್ಸೆ ನೀಡಲು ನಿರ್ಧರಿಸ ಲಾಗಿದೆ ಎಂದು ತಿಳಿಸಿದರು.

ನಮ್ಮಲ್ಲಿ ಶೇ.95ರಷ್ಟು ಕೊರೋನ ರೋಗ ಲಕ್ಷ್ಮಣಗಳಿದ್ದ ಪಾಸಿಟಿವ್ ಪ್ರಕರಣ ಗಳು ಕಂಡುಬರುತ್ತಿವೆ. ಆದುದರಿಂದ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಆಕ್ಸಿಜನ್, ವೆಂಟಿಲೇಟರ್, ಐಸಿಯು ಅಗತ್ಯ ಇಲ್ಲದ ಸೋಂಕಿತ ರಿಗೆ ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಅದಕ್ಕಾಗಿ 120 ಬೆಡ್‌ಗಳು ಸಿದ್ಧವಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರನ್ನು ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುವುದು ಎಂದರು.

ಈ ಹಿನ್ನೆಲೆಯಲ್ಲಿ ವೈದ್ಯರ ತಂಡ ಮತ್ತು ಕೊರೋನ ವಾರಿಯರ್ಸ್‌ಗಳು ಕೂಡ ಸಜ್ಜಾಗಿದ್ದಾರೆ. ಇವರಿಗೆ ಹೆಚ್ಚುವರಿ ಸಿಬ್ಬಂದಿ ಬೇಕಾದರೆ ನೇಮ ಕಾತಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಅದೇ ರೀತಿ ಖಾಸಗಿ ಆಸ್ಪತ್ರೆಯ ವೈದ್ಯರನ್ನು ಬಳಸಿಕೊಳ್ಳುವ ಬಗ್ಗೆ ಈಗಾಗಲೇ ಭಾರತೀಯ ವೈದ್ಯರ ಸಂಘದ ಜೊತೆ ಮಾತುಕತೆ ಮಾಲಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ರೋಗ ಬಂದಾಗಿದೆ. ಇನ್ನು ಜೀವವನ್ನು ರಕ್ಷಿಸುವುದು ನಮ್ಮ ಉದ್ದೇಶವಾಗಿದೆ. ಆದುದರಿಂದ ಪ್ರತಿಯೊಂದು ಪ್ರಕರಣವನ್ನು ಸವಾಲಾಗಿ ಸ್ವೀಕರಿಸಲಾಗುವುದು. ಇದಕ್ಕೆ ಇಡೀ ತಂಡ ಅಣಿಯಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಎಸಿ ರಾಜು, ಡಿಎಚ್‌ಓ ಡಾ.ಸುಧೀರ್‌ಚಂದ್ರ ಸೂಡಾ, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ವೈದ್ಯಾಧಿಕಾರಿ ಡಾ.ರಾಬರ್ಟ್, ಮುಖ್ಯ ಅಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಕಳ ಆಸ್ಪತ್ರೆ ಪರಿಶೀಲನೆ: ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಈ ಆಸ್ಪತ್ರೆಯನ್ನು 100 ಬೆಡ್‌ಗಳ ಕೋವಿಡ್ ಆಸ್ಪತ್ರೆಯನ್ನಾಗಿ ಸಜ್ಜುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಸುನೀಲ್ ಕುಮಾರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X