Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಕಲಚೇತನರಿಗೆ ಸಮುದಾಯ ಆಧಾರಿತ ಔದ್ಯೋಗಿಕ...

ವಿಕಲಚೇತನರಿಗೆ ಸಮುದಾಯ ಆಧಾರಿತ ಔದ್ಯೋಗಿಕ ತರಬೇತಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ21 May 2020 9:50 PM IST
share

ಉಡುಪಿ, ಮೇ 21: ಉಡುಪಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯಲ್ಲಿ ಕಾರ್ಯಾಚರಿ ಸುತ್ತಿರುವ ದಿ ಅಸೋಸಿಯೇಶನ್ಸ್ ಆಫ್ ಪೀಪಲ್ ವಿಧ್ ಡಿಸೆಬಿಲಿಟಿ(ಎಪಿಡಿ) ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಪಂ ವ್ಯಾಪ್ತಿಯ ವಿಕಲಚೇತನರಿಗೆ ಬುಧವಾರ ನಡೆದ ಸಮುದಾಯ ಆಧಾರಿತ ಔದ್ಯೋಗಿಕ ತರಬೇತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಚಂದ್ರ ನಾಯ್ಕ ಉದ್ಘಾಟಿಸಿದರು.

ಅಂಗವಿಕಲರಿಗೆ ಅನುಕಂಪ ಅಲ್ಲ, ಅವಕಾಶವನ್ನು ಕಲ್ಪಿಸಬೇಕಾದುದು ಪ್ರತಿ ಯೊಬ್ಬರ ಕರ್ತವ್ಯ. ಈ ನಿಟ್ಟಿನಲ್ಲಿ ಎಪಿಡಿ ಸಂಸ್ಥೆ ನಡೆಸುತ್ತಿರುವ ಈ ಕಾರ್ಯ ಶ್ಲಾಘನೀಯ. ಈ ಸಂಸ್ಥೆಯ ಮುಖಾಂತರ ಆಸಕ್ತ ಅರ್ಹ ಅಂಗವಿಕಲರಿಗೆ ಸುಮಾರು 15 ವಿಧದ ಔದ್ಯೋಗಿಕ ತರಬೇತಿಯನ್ನು ಜಿಲ್ಲೆಯ ವಿಕಲಚೇತರಿಗೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಚಂದ್ರ ನಾಯ್ಕ ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಶಂಕರನಾರಾಯಣ ಗ್ರಾಪಂ ಅಧ್ಯಕ್ಷ ರವಿ ಕುಲಾಲ ಮಾತನಾಡಿ, ಅಂಗವಿಕಲರಿಗೆ ಗ್ರಾಮ ಪಂಚಾಯತ್ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಎಲ್ಲಾ ಸದಸ್ಯರ ಸಹಕಾರದೊಂದಿಗೆ ಅವರೂ ಸಹ ಸಮಾಜದ ಮುಖ್ಯ ವಾಹಿನಿಗೆ ಬರಲು ನೆರವು ನೀಡುವುದಾಗಿ ತಿಳಿಸಿದರು.

ಪ್ರಾಸ್ತಾವಿಕ ಮಾತನಾಡಿದ ಎಪಿಡಿ ಸಂಸ್ಥೆಯ ಉಡುಪಿ ಜಿಲ್ಲಾ ನೋಡಲ್ ಅಧಿಕಾರಿ ಹರೀಶ್ ಶೆಟ್ಟಿ, ಶಂಕರನಾರಾಯಣ ಗ್ರಾಪಂ ವ್ಯಾಪ್ತಿಯ 10 ಜನ ಅಂಗವಿಕಲರಿಗೆ ಒಂದು ತಿಂಗಳು ನೀಡುವ ಔದ್ಯೋಗಿಕ ತರಬೇತಿಯ ಕುರಿತು ಮಾತನಾಡಿದರು. ಅಂಗವಿಕಲರು ಸ್ವಾವಲಂಬಿ ಮತ್ತು ಸ್ವಾಭಿಮಾನದ ಜೀವನ ವನ್ನು ರೂಪಿಸಿಕೊಳ್ಳಲು ಎಪಿಡಿ ಸಂಸ್ಥೆ ಕಾರ್ಯಾಚರಿಸುತ್ತಿದೆ. 1950ರಲ್ಲಿ ಆರಂಭಗೊಂಡ ಈ ಸಂಸ್ಥೆ ಈಗವರೆಗೆ 5 ಲಕ್ಷಕ್ಕೂ ಅಧಿಕ ವಿಕಲಚೇತನರ ಸರ್ವತೋಮುಖ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದು, ನಿರುದ್ಯೋಗಿ ವಿಕಲಚೇತನ ರಿಗೆ ತರಬೇತಿ ಮತ್ತು ಉದ್ಯೋಗವನ್ನು ಉಚಿತವಾಗಿ ನೀಡಿ ಅವರ ಸ್ವಾವಲಂಬಿ ಜೀವನಕ್ಕೆ ದಾರಿ ಮಾಡಿಕೊಟ್ಟಿದೆ ಎಂದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಅಂಗವಿಕಲರಿಗೆ ಒಂದು ತಿಂಗಳಿಗಾಗುವಷ್ಟು ಆಹಾರ ಸಾಮಾಗ್ರಿಗಳನ್ನು ಎಪಿಡಿ ಸಂಸ್ಥೆಯ ವತಿಯಿಂದ ವಿತರಿಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಲಜ ಹೆಗ್ಡೆ, ಪಿಡಿಒ ಶ್ವೇತಲತಾ, ಯೋಜನಾ ಸಹಾಯಕ ಗಣೇಶ್ ಮರಾಠೆ, ವಿಆರ್‌ಡಬ್ಲ್ಯೂ ವನಿತಾ, ಶ್ರೀಮತಿ ಉಪಸ್ಥಿತರಿದ್ದರು. ಎಂಆರ್‌ಡಬ್ಲ್ಯೂ ಮಂಜುನಾಥ್ ಹೆಬ್ಬಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಶೆಟ್ಟಿ ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X