Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ...

ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆ ಸ್ಥಗಿತಗೊಳಿಸಬೇಡಿ: ಅಧಿಕಾರಿಗಳಿಗೆ ಬಿಎಸ್‌ವೈ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ22 May 2020 5:44 PM IST
share
ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆ ಸ್ಥಗಿತಗೊಳಿಸಬೇಡಿ: ಅಧಿಕಾರಿಗಳಿಗೆ ಬಿಎಸ್‌ವೈ ನಿರ್ದೇಶನ

ಬೆಂಗಳೂರು, ಮೇ 22: ಕೊರೋನ ವೈರಸ್ ಸೋಂಕಿನಿಂದ ಆಗಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಹಣಕಾಸು ತೊಂದರೆಯಾದರೂ ವಿದ್ಯಾರ್ಥಿಗಳ ಉಚಿತ ಬೈಸಿಕಲ್ ವಿತರಣೆ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಹಿಂದುಳಿದ ಪ್ರದೇಶಗಳೆಂದು ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ಮಾಡಿದರು.

ಶಿಕ್ಷಕರ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳ ಅಭ್ಯರ್ಥಿಗಳ ತರಬೇತಿ ನೀಡಲಾಗುತ್ತಿದ್ದು, ಗಣಿತ, ವಿಜ್ಞಾನ ಶಿಕ್ಷಕರ ಕೊರತೆ ನೀಗಿಸಲು ಬಿ.ಎಡ್.ಮಾಡಿರುವ ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಕೇಂದ್ರ ಸರಕಾರದ ವಿಶೇಷ ನೆರವು ಘೋಷಿಸಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಲಿದೆ ಎಂಬ ಆಶಯ ಸಭೆಯಲ್ಲಿ ವ್ಯಕ್ತವಾಯಿತು.

ಅಧ್ಯಯನ: ಕೋವಿಡ್‍ ನಿಂದ ಶಿಕ್ಷಣ ಇಲಾಖೆ ಮೇಲೆ ದೊಡ್ಡ ಪರಿಣಾಮವಾಗಿದ್ದು, ಮುಂದಿನ ದಿನಗಳಲ್ಲಿ ಶಾಲೆಗಳು, ತರಗತಿಗಳನ್ನು ನಡೆಸುವುದು ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಕೊರೋನ ನಂತರ ತರಗತಿಗಳು, ಶಾಲೆಗಳು ಹೇಗಿರಬೇಕು ಎಂಬ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಜೂನ್ 25ರಿಂದ ಎಸೆಸೆಲ್ಸಿ ಪರೀಕ್ಷೆ ನಡೆಯಲಿದ್ದು, ಕೊರೋನ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಎಸೆಸೆಲ್ಸಿ ಪರೀಕ್ಷೆಗೆ ಪ್ರತಿ ಪರೀಕ್ಷಾ ಕೊಠಡಿಯಲ್ಲಿ 25 ವಿದ್ಯಾರ್ಥಿಗಳ ಬದಲಾಗಿ 18ರಿಂದ 20 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಈ ಬಾರಿ 8 ಸಾವಿರ ಹೆಚ್ಚುವರಿ ಕೊಠಡಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಸುರೇಶ್ ಕುಮಾರ್ ವಿವರಿಸಿದರು.

ಉಚಿತ ಮಾಸ್ಕ್: ಪರೀಕ್ಷಾ ಕೊಠಡಿಗಳ ಫ್ಯೂಮಿಗೇಷನ್ ಮತ್ತು ಸ್ಯಾನಿಟೈಸೇಷನ್ ಮಾಡಲು ಕ್ರಮ ವಹಿಸಲಾಗುತ್ತಿದೆ. ಸ್ಕೌಟ್ ಅಂಡ್ ಗೈಡ್ಸ್ ಸಂಸ್ಥೆಯು ಪರೀಕ್ಷಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಿಸಲಿದ್ದು, ಸಂಸ್ಥೆಯ ಸ್ವಯಂ ಸೇವಕರು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಸ್ಯಾನಿಟೈಸರ್ ಬಳಕೆ ಮಾಡಲು ಹಾಗೂ ಮಾಸ್ಕ್ ಧಾರಣೆಯನ್ನು ಪರಿಶೀಲಿಸಲು ಸಹಕರಿಸಲಿದ್ದಾರೆ ಎಂದು ಅವರು ಹೇಳಿದರು.

ತಮ್ಮ ಊರಿನಲ್ಲೆ ಪರೀಕ್ಷೆ: ವಲಸೆ ಕಾರ್ಮಿಕರ ಮಕ್ಕಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು ತಮ್ಮ ಊರಿನಲ್ಲಿಯೇ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿಗಳನ್ನು ನಡೆಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ದೂರದರ್ಶನದಲ್ಲಿ ಪುನರ್ ಮನನ ತರಗತಿಗಳನ್ನು ನಡೆಸಲಾಗುತ್ತಿದೆ. ಇದಕ್ಕೆ ಅತ್ಯುತ್ತಮ ಸ್ಪಂದನೆ ದೊರೆತಿದೆ. ಇದರಿಂದ ಪ್ರೇರಣೆ ಹೊಂದಿ, ಪ್ರತ್ಯೇಕ ವಾಹಿನಿ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಸುದೀರ್ಘ ರಜಾ ಹೊಂದಿರುವ ಶಾಲಾ ಮಕ್ಕಳನ್ನು ಚಟುವಟಿಕೆಗಳ ಮೂಲಕ ಸಕ್ರಿಯರಾಗಿರಿಸಲು ಪ್ರಾರಂಭಿಸಲಾಗಿರುವ ಮಕ್ಕಳವಾಣಿ ಯೂಟ್ಯೂಬ್ ಚಾನೆಲ್ ಬಗ್ಗೆ ಪೋಷಕರಿಂದ ಹಾಗೂ ಮಕ್ಕಳಿಂದ ಮೆಚ್ಚುಗೆ ವ್ಯಕ್ತವಾಗಿದೆ. 45 ಲಕ್ಷಕ್ಕೂ ಹೆಚ್ಚು ಮಕ್ಕಳು ಈ ಚಾನೆಲ್ ಅನ್ನು ವೀಕ್ಷಿಸಿದ್ದಾರೆ. ಶಾಲಾ ತರಗತಿಗಳನ್ನು ಮರು ಪ್ರಾರಂಭಿಸುವ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಮಾರ್ಗಸೂಚಿಗಳನ್ನು ನಿರೀಕ್ಷಿಸಲಾಗುತ್ತಿದೆ. ತಜ್ಞರ ಸಮಿತಿ ರಚಿಸಿ, ಪಠ್ಯಕ್ರಮ ನಿಗದಿ ಪಡಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅನುಭವಿ ಶಿಕ್ಷಕರು ಪಾಠ ಮಾಡುವ ವಿಡಿಯೋಗಳನ್ನು ಯೂಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X