Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಾಕೃತಿಕ ದುರಂತದಿಂದ ಹಾನಿ ತಪ್ಪಿಸಲು...

ಪ್ರಾಕೃತಿಕ ದುರಂತದಿಂದ ಹಾನಿ ತಪ್ಪಿಸಲು ಈಗಿನಿಂದಲೇ ಕ್ರಮ: ದ.ಕ. ಜಿಲ್ಲಾಧಿಕಾರಿ

ಮೇ ಅಂತ್ಯದಲ್ಲಿ ಎನ್‌ಡಿಆರ್‌ಆರ್‌ಎಫ್ ತಂಡ ಆಗಮನ

ವಾರ್ತಾಭಾರತಿವಾರ್ತಾಭಾರತಿ22 May 2020 10:37 PM IST
share
ಪ್ರಾಕೃತಿಕ ದುರಂತದಿಂದ ಹಾನಿ ತಪ್ಪಿಸಲು ಈಗಿನಿಂದಲೇ ಕ್ರಮ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಮೇ 22: ಕಳೆದ ವರ್ಷದಲ್ಲಿ ಅಪಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡು ರಸ್ತೆ, ಸೇತುವೆ ಸಹಿತ ಅನೇಕ ರೀತಿ ಮೂಲ ಸೌಕರ್ಯಗಳಿಗೆ ಹಾನಿ ಉಂಟಾಗಿತ್ತು. ಹಾಗಾಗು ಪ್ರಸ್ತುತ ಮಳೆಗಾಲದಲ್ಲಿ ಅನಾಹುತ ನಿಭಾಯಿಸಲು ಅಗತ್ಯವಾದ ಸಿದ್ಧತೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಮಾಡಿಕೊಂಡಿದ್ದಾರೆ. ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ವರ್ಷ ಅಧಿಕ ಮಳೆಯಿಂದಾಗಿ ಜಿಲ್ಲೆಯ ಹಲವು ಪ್ರದೇಶದಲ್ಲಿ ಗುಡ್ಡ ಕುಸಿತದಿಂದ ಹಾಗೂ ನೆರೆಯಿಂದ ಜನರು ತೀವ್ರವಾಗಿ ತೊಂದರೆಗೆ ಸಿಲುಕಿದ್ದರು. ಇಂತಹ ಸಂಭಾವ್ಯ ಸೂಕ್ಷ್ಮಪ್ರದೇಶಗಳನ್ನು ಗುರುತಿಸಿ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಅಪಾಯದ ಜಾಗದಲ್ಲಿರುವ ಮನೆಗಳನ್ನು ತೆರವುಗೊಳಿಸಿ ಅವರಿಗೆ ಸುರಕ್ಷಿತವಾದ ಜಾಗದಲ್ಲಿ ನೆಲೆಸುವಂತೆ ಸೂಚಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದರು.

ಮೇ ಅಂತ್ಯದಲ್ಲಿ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡವು ಆಗಮಿಸಲಿದೆ. ಧಾರಾಕಾರ ಮಳೆಯಿಂದ ಅಪಾಯ ಸಂಭವಿಸುವ ಸ್ಥಳಗಳಲ್ಲಿ ತಕ್ಷಣ ನೆರವಿಗಾಗಿ ಜಿಲ್ಲಾಡಳಿತದಿಂದ ಅಗತ್ಯವಿರುವ ಬೋಟ್, ಲೈಫ್‌ಜಾಕೆಟ್ ಟಾರ್ಚ್, ರೋಪ್ ಸಹಿತ ವಿವಿಧ ಉಪಕರಣಗಳನ್ನು ಜಿಲ್ಲಾಡಳಿತ ಒದಗಿಸಲಿದೆ. ಹೆಚ್ಚು ಮಳೆಯಾದರೆ ಜನರಿಗೆ ವ್ಯವಸ್ಥೆ ಕಲ್ಪಿಸಲು ಹಾಸ್ಟೆಲ್, ಸಮುದಾಯ ಭವನ, ಕಲ್ಯಾಣ ಮಂಟಪಗಳನ್ನು ಗುರುತಿಸಿ ಪಟ್ಟಿಯನ್ನು ಮಾಡಬೇಕು ಎಂದು ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಕಡಲ್ಕೊರೆತ ತಡೆಯಲು ಎಡಿಬಿ ವತಿಯಿಂದ ಶಾಶ್ವತ ತಡೆಗೋಡೆ ಕಾಮಗಾರಿ ನಡೆಸಿದ ಸ್ಥಳದಲ್ಲಿಯೇ ಕಳೆದ ವರ್ಷ ಮತ್ತೆ ಕಡಲ್ಕೊರೆತ ಕಾಣಿಸಿಕೊಂಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಈ ಬಾರಿ ಅಂತಹ ಪ್ರಕರಣ ನಡೆಯದಂತೆ ಮುನ್ನಚ್ಚರಿಕೆ ವಹಿಸಬೇಕು. ಗ್ಯಾಸ್‌ಟ್ಯಾಂಕರ್‌ಗಳು ರಸ್ತೆ ಅಪಘಾತಕ್ಕೀಡಾದ ಸಂದರ್ಭ ಸಂಬಂಧಪಟ್ಟ ಅನಿಲ ಸಂಸ್ಥೆಗಳು ತ್ವರಿತವಾಗಿ ಪರಿಹಾರ ಕಾರ್ಯಾಚರಣೆ ನಡೆಸಬೇಕು. ಈ ಹಿಂದೆ ಜಿಲ್ಲೆಯಲ್ಲಿ ನಡೆದ ಕೆಲವು ಗ್ಯಾಸ್‌ಟ್ಯಾಂಕರ್‌ಗಳ ಅಪಘಾತದಲ್ಲಿ ಸಂಬಂಧಿಸಿದ ತೈಲ ಕಂಪೆನಿಗಳು ವಿಳಂಬವಾಗಿ ಸ್ಪಂದಿಸಿದ್ದು, ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಬೇಕಾದೀತು ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಸೆಲ್ವಮಣಿ, ಡಿಸಿಪಿ ಅರುಣಾಂಶ ಗಿರಿ, ದ.ಕ.ಜಿಲ್ಲಾ ಎಸ್ಪಿ ಲಕ್ಷ್ಮಿಪ್ರಸಾದ್, ಕೋಸ್ಟ್ ಗಾರ್ಡ್ ಡಿಐಜಿ ವೆಂಕಟೇಶ್, ವಿಪತ್ತು ನಿರ್ವಹಣಾ ಘಟಕದ ಅಧಿಕಾರಿ ವಿಜಯಕುಮಾರ್ ಮತ್ತಿತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಮಾತನಾಡಿ ನಗರದಲ್ಲಿ ಅಪಾರ ಮಳೆಯಿಂದ ತೊಂದರೆಗೀಡಾಗುವ ಪ್ರದೇಶವನ್ನು ಈಗಾಗಲೇ ಗುರುತಿಸಲಾಗಿದೆ. ನಗರದ 11 ರಾಜಕಾಲುವೆಗಳ ಹೂಳೆತ್ತಲು 168 ಲಕ್ಷ ರೂ. ಮೊತ್ತದ ಕಾಮಗಾರಿ ನಡೆಯುತ್ತಿದ್ದು, ಶೇ.80ರಷ್ಟು ಕಾಮಗಾರಿ ಮುಗಿದಿದೆ. 24 ಗಂಟೆಗಳ ಕಂಟ್ರೋಲ್ ರೂಂ ಮಹಾನಗರಪಾಲಿಕೆಯಲ್ಲಿ ತೆರೆಯಲಾಗಿದ್ದು, ಮಳೆಗಾಲದಲ್ಲಿ ಕಾರ್ಯಾಚರಣೆಗೆ ಪ್ರತೀ 6 ವಾರ್ಡುಗಳಿಗೆ 1 ತಂಡವನ್ನು ರಚಿಸಲಾಗಿದೆ. 16 ಪರಿಹಾರ ಕೇಂದ್ರಗಳನ್ನು ಗುರುತಿಸಿ ಸಿದ್ಧಪಡಿಸಲಾಗಿದೆ ಎಂದರು.

ಈ ಸಂದರ್ಭ ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯನ್ನು ಜಿಲ್ಲಾಧಿಕಾರಿ ಬಿಡುಗಡೆಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X