Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳ ಹಿತದೃಷ್ಟಿಯಿಂದ ಎಸೆಸೆಲ್ಸಿ...

ಮಕ್ಕಳ ಹಿತದೃಷ್ಟಿಯಿಂದ ಎಸೆಸೆಲ್ಸಿ ಪರೀಕ್ಷೆ ಅನಿವಾರ್ಯವೇ ಹೊರತು, ಪ್ರತಿಷ್ಠೆಯಲ್ಲ: ಸಚಿವ ಸುರೇಶ್‍ ಕುಮಾರ್

"ಜುಲೈ 31ರೊಳಗೆ ಫಲಿತಾಂಶ ಪ್ರಕಟ"

ವಾರ್ತಾಭಾರತಿವಾರ್ತಾಭಾರತಿ22 May 2020 11:19 PM IST
share
ಮಕ್ಕಳ ಹಿತದೃಷ್ಟಿಯಿಂದ ಎಸೆಸೆಲ್ಸಿ ಪರೀಕ್ಷೆ ಅನಿವಾರ್ಯವೇ ಹೊರತು, ಪ್ರತಿಷ್ಠೆಯಲ್ಲ: ಸಚಿವ ಸುರೇಶ್‍ ಕುಮಾರ್

ಬೆಂಗಳೂರು, ಮೇ 22: ನಮ್ಮ ನಾಡಿನ ಮಕ್ಕಳ ಹಿತದೃಷ್ಟಿಯಿಂದ ಎಸೆಸೆಲ್ಸಿ ತರಗತಿಗೆ ಪರೀಕ್ಷೆ ನಡೆಸುವುದು ಅನಿವಾರ್ಯವೇ ಹೊರತು ಅದು ಯಾರೊಬ್ಬರ ಪ್ರತಿಷ್ಠೆಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಬೆಂಗಳೂರು ಆಕಾಶವಾಣಿ ಸಂದರ್ಶನದಲ್ಲಿ ಮಾತನಾಡಿದ ಸಚಿವರು, ನಮ್ಮ ರಾಜ್ಯದಲ್ಲಿ ಮಕ್ಕಳ ಮುಂದಿನ ವ್ಯಾಸಂಗಕ್ಕೆ ಎಸೆಸೆಲ್ಸಿ ತರಗತಿ ಪ್ರಮುಖ ತಿರುವಾಗಿರುವುದು ಮತ್ತು ಪ್ರಮುಖ ಮಾನದಂಡವಾಗಿರುವುದರಿಂದ 10ನೇ ತರಗತಿ ಪರೀಕ್ಷೆಯನ್ನು ನಡೆಸಬೇಕಾಗಿದೆ ಎಂದು ಹೇಳಿದರು.

ಪರೀಕ್ಷೆಗಳನ್ನು ನಡೆಯಬೇಕೆಂಬುದು ರಾಜ್ಯದ ಬಹುಪಾಲು ವಿದ್ಯಾರ್ಥಿಗಳ ಅಭಿಪ್ರಾಯವಾಗಿದ್ದು, ಈ ಕುರಿತಂತೆ ಶಿಕ್ಷಣ ಇಲಾಖೆಯ ಪ್ರಮುಖ ಪಾಲುದಾರರಾದ ನಮ್ಮ ವಿದ್ಯಾರ್ಥಿಗಳು, ಪೋಷಕರೊಂದಿಗೆ ಚರ್ಚೆ ನಡೆಸಿದ್ದೇನೆ. ಹಾಗೆಯೇ ಶಿಕ್ಷಣ ತಜ್ಞರು, ಸಾಹಿತಿಗಳು, ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಸದಸ್ಯರು ಸೇರಿದಂತೆ ಸಮಾಜದ ವಿವಿಧ ಸ್ತರದ ಪ್ರಮುಖರ ಅಭಿಪ್ರಾಯವೂ ಸಹ ಈ ಪರೀಕ್ಷೆಯನ್ನು ನಡೆಸಬೇಕೆಂಬುದಾಗಿದೆ ಎಂದು ಸಚಿವರು ತಿಳಿಸಿದರು.

ಜೂನ್ 25ರಿಂದ ನಮ್ಮ ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಕೋವಿಡ್ ಹಿನ್ನೆಲೆಯ ಎಲ್ಲ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ, ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ನಿರ್ವಹಣೆ ಮಾಡಲಾಗುವುದು ಎಂದು ಸುರೇಶ್‍ ಕುಮಾರ್ ತಿಳಿಸಿದರು.

ಮಕ್ಕಳ ಹಿತವನ್ನು ರಕ್ಷಿಸುವುದು ನಮ್ಮ ಸರಕಾರದ ಒಂದಂಶದ ಕಾರ್ಯಕ್ರಮವಾಗಿದ್ದು, ಈ ಬಾರಿಯ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳ ನಿರ್ವಹಣೆಯಲ್ಲಿ ಬದಲಾವಣೆ ಹಾಗೂ ಸುಧಾರಣೆಗಳನ್ನು ಕಾಣಬಹುದಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಆರೋಗ್ಯ ತಪಾಸಣೆ, ಮಾಸ್ಕ್ ಪೂರೈಕೆ, ಪರೀಕ್ಷಾ ಕೇಂದ್ರದ ಸ್ವಚ್ಛತೆ, ಸುರಕ್ಷಿತ ಅಂತರ ಕಾಪಾಡುವುದು ಸೇರಿದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಕಂಟೈನ್ಮೆಂಟ್ ವಲಯಗಳಲ್ಲಿ ಪರೀಕ್ಷೆ ಇಲ್ಲ: ಯಾವುದೇ ಕಂಟೈನ್ಮೆಂಟ್ ವಲಯಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಿಲ್ಲ. ಪರೀಕ್ಷೆ ನಡೆಯುವ ದಿನದ ಆಸುಪಾಸಿನಲ್ಲಿ ಯಾವುದೇ ವಲಯ ಕಂಟೈನ್ಮೆಂಟ್ ವಲಯವೆಂದು ಘೋಷಿತವಾದಾಗ ಅಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಪುನರಾವರ್ತಿತ ಅಭ್ಯರ್ಥಿ ಎಂದು ಪರಿಗಣಿಸದೇ ಹೊಸ ಪರೀಕ್ಷಾರ್ಥಿ ಎಂದೇ ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದೆಂದು ಸಚಿವರು ಹೇಳಿದರು. 

ವಲಸೆ ಕಾರ್ಮಿಕರ ಮಕ್ಕಳು, ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಹಾಸ್ಟೆಲ್‍ಗಳ ವಾಸಿ ವಿದ್ಯಾರ್ಥಿಗಳಿಗೆ ಅವರು ವಾಸವಾಗಿರುವ ಸ್ಥಳಗಳ ಹತ್ತಿರದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದ ಸಚಿವರು, ಪರೀಕ್ಷೆಗೆ ಹಾಜರಾಗಲಿರುವ ಎಲ್ಲ ಅಭ್ಯರ್ಥಿಗಳಿಗೆ ಹೊಸದಾಗಿ 'ಹಾಲ್ ಟಿಕೆಟ್‍ಗಳನ್ನು' ಒದಗಿಸಲಾಗುತ್ತಿದೆ. ಜು. 4ಕ್ಕೆ ಪರೀಕ್ಷೆಗಳು ಮುಕ್ತಾಯವಾಗಲಿದ್ದು, ಜು.31ರೊಳಗೆ ಮೌಲ್ಯಮಾಪನ ಮುಗಿಸಿ ಫಲಿತಾಂಶ ಪ್ರಕಟಿಸಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದರು. 

ಶಾಲೆಗಳ ಆರಂಭಕ್ಕೆ ದಿನಾಂಕ ನಿಗದಿ: ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭದ ದಿನಾಂಕವನ್ನು ಮುಂದಿನ ವಾರದಲ್ಲಿ ಅಂತಿಮಗೊಳಿಸಲಾಗುವುದು ಎಂದು ಹೇಳಿದ ಸುರೇಶ್‍ ಕುಮಾರ್, ತರಗತಿಗಳನ್ನು ಈಗಲೇ ಪ್ರಾರಂಭಿಸಬಾರದೆಂದು ಪೋಷಕರ ಒತ್ತಡವಿದ್ದು, ಎಲ್ಲಾ ಆಯಾಮಗಳಲ್ಲಿ ಇದನ್ನು ಚರ್ಚಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X