ಉಡುಪಿ: ಮತ್ತೆ ಐದು ಮಂದಿಯಲ್ಲಿ ಕೊರೋನ ಸೋಂಕು ದೃಢ
ಉಡುಪಿ, ಮೇ 23: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ ಐವರಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಮುಂಬೈಯಿಂದ ಆಗಮಿಸಿದ ನಾಲ್ವರು ಮತ್ತು ವಿದೇಶದಿಂದ ಆಗಮಿಸಿದ ಓರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿರುವುದಾಗಿ ಅವರು ಹೇಳಿದ್ದಾರೆ.
37, 55, 31 ವರ್ಷ ವಯಸ್ಸಿನ ಮೂವರು ಪುರುಷರು ಹಾಗೂ 48 ಮತ್ತು 34 ವರ್ಷದ ಇಬ್ಬರು ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದೆ.
ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ 55ಕ್ಕೆ ಏರಿಕೆಯಾಗಿದೆ.
Next Story