ಸೇತುವೆಯಿಂದ ಹಾರಿ ಆತ್ಮಹತ್ಯೆ
ಪಾಣೆಮಂಗಳೂರು ಹಳೆ ಸೇತುವೆ ಬಳಿ ಘಟನೆ
ಬಂಟ್ವಾಳ, ಮೇ 24: ಪಾಣೆಮಂಗಳೂರು ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.
ಕಲ್ಲಡ್ಕ ಸಮೀಪದ ಕೊಳಕೀರು ನಿವಾಸಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡವರು.
ಯುವಕ ನದಿಗೆ ಹಾರಿದ ತಕ್ಷಣ ಗೂಡಿನಬಳಿಯ ಶಮೀರ್, ಮುಹಮ್ಮದ್, ತೌಸೀಫ್, ಝಾಹಿದ್, ಅಕ್ಕರಂಗಡಿಯ ಮುಕ್ತಾರ್, ಆರಿಫ್ ಹೈವೇ ಎಂಬವರು ನೀರಿಗೆ ಜಿಗಿದು ಆತನನ್ನು ಮೇಲಕ್ಕೆತ್ತಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
Next Story





