ಲಂಚ ಸ್ವೀಕಾರ ಆರೋಪ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ಅಧಿಕಾರಿಗಳಿಗೆ ಎಸಿಬಿ ನೋಟಿಸ್

ಬೆಂಗಳೂರು, ಮೇ.25: ಲಂಚ ಸ್ವೀಕಾರ ಆರೋಪ ಸಂಬಂಧ ಸೋಮವಾರ(ಮೇ.25) ವಿಚಾರಣೆಗೆ ಹಾಜರಾಗುವಂತೆ ಸಿಸಿಬಿಯ ಎಸಿಪಿ, ಇಬ್ಬರು ಇನ್ಸ್ ಸ್ಪೆಕ್ಟರ್ ಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಗೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.
ಸಿಸಿಬಿ ಎಸಿಪಿಯಾಗಿದ್ದ ಪ್ರಭುಶಂಕರ್, ಇನ್ಸ್ ಸ್ಪೆಕ್ಟರ್ ಗಳಾದ ನಿರಂಜನ್ ಹಾಗೂ ಅಜಯ್‍ಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಸಿಗರೇಟು ಮಾರಾಟಕ್ಕೆ ಅನುವು ಮಾಡಿಕೊಡಲು ಕಂಪೆನಿಯಿಂದ ಸುಮಾರು 63 ಲಕ್ಷ ರೂಪಾಯಿ ಲಂಚ ಪಡೆದಿದ್ದರು. ಅಲ್ಲದೆ ನಕಲಿ ಮಾಸ್ಕ್ ತಯಾರಿಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ್ದ ವೇಳೆ ಮಧ್ಯವರ್ತಿಗಳಿಂದ ಲಂಚ ಪಡೆದ ಆರೋಪ ಬೆಳಕಿಗೆ ಬಂದಿತ್ತು. ಈ ಕುರಿತು ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನಂತರ ಎಸಿಬಿಗೆ ಹಸ್ತಾಂತರ ಮಾಡಲಾಗಿತ್ತು.
ಇತ್ತೀಚಿಗಷ್ಟೇ ಆರು ಮಂದಿ ಆರೋಪಿಗಳ ಮನೆ ಮೇಲೆ ದಾಳಿಸಿದ್ದ ಎಸಿಬಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
Next Story





