ಕೊರೋನ ವೈರಸ್: ಉತ್ತಮ ಚಿಕಿತ್ಸೆ, ಮರಣ ಪ್ರಮಾಣ ತಗ್ಗಿಸುವಲ್ಲಿ ಬೆಂಗಳೂರು ಮುಂಚೂಣಿ- ಯಡಿಯೂರಪ್ಪ

ಬೆಂಗಳೂರು, ಮೇ 25: ಕೋವಿಡ್-19ನ ಪರಿಣಾಮಕಾರಿ ನಿರ್ವಹಣೆಗಾಗಿ ನಾಲ್ಕು ಮಾದರಿ ನಗರಗಳನ್ನು ಕೇಂದ್ರ ಸರಕಾರ ಗುರುತಿಸಿದ್ದು, ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.
ಸೋಮವಾರ ಟ್ವೀಟ್ ಮಾಡಿರುವ ಯಡಿಯೂರಪ್ಪ, ನಮ್ಮ ಕೊರೋನ ಯೋಧರ ಪರಿಶ್ರಮಕ್ಕೆ ಹೆಮ್ಮೆಯ ಅನುಮೋದನೆ ದೊರಕಿದೆ. ನಮ್ಮ ಇಡೀ ತಂಡಕ್ಕೆ ಅಭಿನಂದನೆಗಳು, ಈ ಉತ್ತಮ ಸೇವೆಯನ್ನು ಮುಂದುವರಿಸೋಣ. ಕೊರೋನ ವೈರಸ್ ಸೋಂಕಿನ ವಿರುದ್ಧ ಹೋರಾಡೋಣ' ಎಂದು ಇದೇ ವೇಳೆ ತಿಳಿಸಿದ್ದಾರೆ.
Next Story





