Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 150 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು...

150 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಕೇಂದ್ರ ವಿವಿ ಅಭಿವೃದ್ಧಿ: ಡಾ. ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ27 May 2020 9:32 PM IST
share

ಬೆಂಗಳೂರು, ಮೇ 27: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವನ್ನು 150 ಕೋಟಿ ರೂ. ವೆಚ್ಚದಲ್ಲಿ ವಿಶ್ವದರ್ಜೆಯ ಕ್ಯಾಂಪಸ್ ಆಗಿ ಅಭಿವೃದ್ಧಿಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.

ಬುಧವಾರ ವಿಕಾಸಸೌಧದಲ್ಲಿ ನಡೆದ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಅಭಿವೃದ್ಧಿ ಕುರಿತ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕುಲಪತಿ ಪ್ರೊ.ಎಸ್.ಜಾಫೆಟ್ ನೇತೃತ್ವದ ತಂಡ ಪ್ರಸ್ತುತ ಪಡಿಸಿದ ಬೆಂಗಳೂರು ಸೆಂಟ್ರಲ್ ವಿವಿಯ ಅಭಿವೃದ್ಧಿ ಕಾರ್ಯಗಳ ಕುರಿತ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ, ವಿಶ್ವದರ್ಜೆಯ ಕ್ಯಾಂಪಸ್ ನಿರ್ಮಾಣದ ಕುರಿತು ಹಲವಾರು ಸಲಹೆಗಳನ್ನು ನೀಡಿದರು.

ಆದಷ್ಟು ಬೇಗ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗುವುದು. 31 ಎಕರೆ ಜಾಗ ಇದ್ದು, ಅಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾ ಸಮುಚ್ಚಯಗಳ ನಿರ್ಮಾಣ ಮಾಡಲಾಗುವುದು. ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲಾಗುವ ಶೈಕ್ಷಣಿಕ ಘಟಕ, ಐತಿಹಾಸಿಕ ಕಟ್ಟಡಗಳ ನವೀಕರಣಕ್ಕೆ 100 ಕೋಟಿ ರೂ. ಹಾಗೂ ಕ್ರೀಡಾ ಸೌಲಭ್ಯಕ್ಕೆ 50 ಕೋಟಿ ರೂ. ಮೀಸಲಿಡಲಾಗುವುದು. 18 ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸದ್ಯ ವಿಶ್ವವಿದ್ಯಾಲಯದಲ್ಲಿ 800 ವಿದ್ಯಾರ್ಥಿಗಳಿದ್ದು, ಹಲವು ಹೊಸ ಕೋರ್ಸ್‍ಗಳು ಆರಂಭಿಸಲಾಗುವುದು. ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಒಳಗೊಂಡ ಇಂಟಿಗ್ರೇಟೆಡ್ ಕೋರ್ಸ್‍ಗಳನ್ನು ಪರಿಚಯಿಸಲಾಗುವುದು. ಒಟ್ಟು 50 ಸಾವಿರ ವಿದ್ಯಾರ್ಥಿಗಳು ಓದಲು ಅನುಕೂಲವಾಗುವಂಥ ವ್ಯವಸ್ಥೆ ಕಲ್ಪಿಸಲು ಸೂಚಿಸಿದ್ದೇನೆ ಎಂದು ಅಶ್ವಥ್ ನಾರಾಯಣ ಹೇಳಿದರು.

ಶಿಕ್ಷಣದಷ್ಟೇ ಕ್ರೀಡೆಗೂ ವಿಶ್ವವಿದ್ಯಾಲಯದಲ್ಲಿ ಒತ್ತು ನೀಡಲಾಗುವುದು. ಅದಕ್ಕಾಗಿಯೆ ವಿಶ್ವವಿದ್ಯಾಲಯದಲ್ಲಿ ಪ್ರತ್ಯೇಕ ಕ್ರೀಡಾ ಘಟಕ ನಿರ್ಮಿಸಿ ಅಲ್ಲಿ ಮಲ್ಟಿಗೇಮ್ ಕ್ರೀಡಾಂಗಣದ ಸೌಕರ್ಯ ಒದಗಿಸಲಾಗುವುದು. 400 ಮೀಟರ್ ಟ್ರ್ಯಾಕ್ ಸಹ ಅಲ್ಲಿರಲಿದೆ. ಜತೆಗೆ, ಕ್ಯಾಂಪಸ್ ಸುತ್ತ ವಾಕಿಂಗ್ ಪಾತ್ ನಿರ್ಮಿಸಲಾಗುವುದು ಎಂದು ಅವರು ವಿವರಿಸಿದರು.

ವಿಶ್ವವಿದ್ಯಾಲಯವನ್ನು ಪರಿಸರ ಸ್ನೇಹಿಯಾಗಿ ಅಭಿವೃದ್ಧಿಪಡಿಸಲಾಗುವುದು. ಮಳೆ ನೀರು ಸಂಗ್ರಹಕ್ಕೆ 4-5 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಿಸಲಾಗುವುದು. ನೀರನ್ನು ಶೇ.100ರಷ್ಟು ಪುನರ್‍ಬಳಕೆ ಮಾಡಲಾಗುವುದು. ಜತೆಗೆ, 125 ಕಿ.ಲೋ ವ್ಯಾಟ್  ಸಾಮರ್ಥ್ಯದ ಸೌರ ಶಕ್ತಿ ಉತ್ಪಾದನಾ ಘಟಕ ಸ್ಥಾಪಿಸಲಾಗುವುದು. ಕ್ಯಾಂಪಸ್ ಮಧ್ಯ ಹಸಿರು ವಾತಾವರಣ ಸೃಷ್ಟಿಸಿ, ವಿದ್ಯಾರ್ಥಿಗಳು ಅಲ್ಲೆ ಕುಳಿತು ಅಧ್ಯಯನ ನಡೆಸಲು ಅನುಕೂಲ ಮಾಡಿಕೊಡಲಾಗುವುದು ಎಂದು ಅಶ್ವಥ್ ನಾರಾಯಣ ಹೇಳಿದರು.

ವಿಶ್ವವಿದ್ಯಾಲಯದ ಆಡಳಿತ ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಎಲ್ಲವೂ ಆನ್‍ಲೈನ್‍ನಲ್ಲಿರಬೇಕು. ಸರಕಾರದ ಜತೆಗೆ ಆನ್‍ಲೈನ್‍ನಲ್ಲೆ ವ್ಯವಹರಿಸಲು ಸೂಚಿಸಲಾಗಿದೆ. ಈಗಿನಿಂದಲೆ ನವೀನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಬೋಧನಾ ವಿಧಾನವನ್ನೂ ರೂಢಿಸಿಕೊಳ್ಳಬೇಕು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X