ಜೂಜಾಟ: 18 ಮಂದಿ ಬಂಧನ, 2.74 ಲಕ್ಷ ರೂ. ನಗದು ಜಪ್ತಿ
ಬೆಂಗಳೂರು, ಮೇ 29: ಲಾಕ್ಡೌನ್ ನಿಯಮ ಉಲ್ಲಂಘಿಸಿ ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ 18 ಜನರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 2.74 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ಶೆಟ್ಟಿಹಳ್ಳಿ ಪಾರ್ಕ್ ರಸ್ತೆಯ ಮನೆಯೊಂದರಲ್ಲಿ ಗುಂಪು ಸೇರಿಕೊಂಡು ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
Next Story