Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೈವಾರಾಧನೆಗೆ ಪ್ರತ್ಯೇಕ ಅಕಾಡೆಮಿ...

ದೈವಾರಾಧನೆಗೆ ಪ್ರತ್ಯೇಕ ಅಕಾಡೆಮಿ ಸ್ಥಾಪನೆ ಅಗತ್ಯ: ದಯಾನಂದ ಕತ್ತಲ್ಸಾರ್

ವಾರ್ತಾಭಾರತಿವಾರ್ತಾಭಾರತಿ29 May 2020 10:59 PM IST
share
ದೈವಾರಾಧನೆಗೆ ಪ್ರತ್ಯೇಕ ಅಕಾಡೆಮಿ ಸ್ಥಾಪನೆ ಅಗತ್ಯ: ದಯಾನಂದ ಕತ್ತಲ್ಸಾರ್

ಉಡುಪಿ, ಮೇ 29: ದೈವಾರಾಧನೆಯ ವ್ಯಾಪ್ತಿಗೆ ತುಳುನಾಡಿನ ಎಲ್ಲ ಜಾತಿ ಯವರು ಕೂಡ ಬರುತ್ತಾರೆ. ಆದುದರಿಂದ ಸರಕಾರ ದೈವಾರಾಧ ನೆಗೆ ಪ್ರತ್ಯೇಕ ಅಕಾಡೆಮಿಯನ್ನು ಸ್ಥಾಪಿಸಬೇಕು ಮತ್ತು ಅಧ್ಯಯನ ಪೀಠವನ್ನು ರಚಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲ ಹೋರಾಟ ಮಾಡಬೇಕಾದ ಅಗತ್ಯ ಇದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಹೇಳಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ವತಿಯಿಂದ ಅಜ್ಜರಕಾಡು ಪುರ ಭವನದ ಮಿನಿಹಾಲ್‌ನಲ್ಲಿ ಶುಕ್ರವಾರ ಆಯೋಜಿಸಲಾದ ಆರ್ಥಿಕವಾಗಿ ಹಿಂದುಳಿದ ತುಳುನಾಡಿನ ಸುಮಾರು 100 ಮಂದಿ ಜನಪದ ಕಲಾವಿದರಿಗೆ, ಸಾಹಿತಿಗಳಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕೋವಿಡ್ ಪರಿಹಾರ ಒದಗಿಸಲು ದೈವಾರಾಧನೆ ಎಂಬುದು ಸರಕಾರದ ಯಾವುದೇ ಪಟ್ಟಿಯಲ್ಲಿ ಇಲ್ಲ. ಆದುದರಿಂದ ಇದಕ್ಕೆ ಅನುದಾನ ಒದಗಿಸಲು ಸರಕಾರ ಹಿಂದೇಟು ಹಾಕುತ್ತಿದೆ. ನಮ್ಮ ಕಲಾವಿದರಲ್ಲಿ ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ಸರಿಯಾದ ದಾಖಲೆಗಳಿಲ್ಲ. ಇದೇ ಕಾರಣಕ್ಕೆ ಅಕಾಡೆಮಿ ಯಿಂದ ಸರಕಾರಕ್ಕೆ ಕಳುಹಿಸಿದ ಕಲಾವಿದರ ಪಟ್ಟಿಯಲ್ಲಿ ಕೆಲವು ಮಂದಿಯ ಹೆಸರುಗಳನ್ನು ಕೈಬಿಡಲಾಗಿದೆ. ಆದುದರಿಂದ ಕಲಾವಿದರು ತಮ್ಮ ದಾಖಲಾತಿ ಗಳನ್ನು ಸರಿಪಡಿಸಿಕೊಳ್ಳಬೇಕು ಎಂದರು.

ಬಡಗುಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಕೊರೋನ ಮಹಾ ಮಾರಿಯ ಪರಿ ಣಾಮ ತುಳುನಾಡಿನ ದೈವಾರಾಧನೆಗೂ ತಟ್ಟಿದೆ. ಇದರಿಂದ ಕಲಾವಿದರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ನಾವು ಇಂತಹ ಸಂಕಷ್ಟದಲ್ಲಿಯೂ ಬದಕು ಬಹುದು ಎಂಬುದು ಕೊರೋನ ಕಲಿಸಿಕೊಟ್ಟಿದೆ. ಕೊರೋನ ವಿರುದ್ಧ ಹೋರಾಟ ನಡೆಸಲು ಪ್ರತಿಯೊಬ್ಬರ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಅಕಾಡೆಮಿ ಸದಸ್ಯ ನಾಗೇಶ್ ಕುಲಾಲ್, ಮಾಜಿ ಸದಸ್ಯ ಯಾದವ್ ಕರ್ಕೇರ, ತುಳುಕೂಟದ ಉಪಾಧ್ಯಕ್ಷರಾದ ಮುಹಮ್ಮದ್ ಮೌಲಾ, ಮನೋಹರ್ ಶೆಟ್ಟಿ ತೋನ್ಸೆ, ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್, ಭುವನಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರಿಗೆ ಮಲಬಾರ್ ಗೋಲ್ಡ್‌ನಿಂದ ಪಿಪಿಇ ಕಿಟ್‌ಗಳನ್ನು ವಿತರಿಸಲಾ ಯಿತು. ಅಕಾಡೆಮಿಯ ಸದಸ್ಯ ಡಾ.ಆಕಾಶ್‌ರಾಜ್ ಜೈನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯೆ ತಾರಾ ಉಮೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X