Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕರ್ನಾಟಕದ ಶಿಕ್ಷಣ ಸಚಿವರು ಮತ್ತು ಮಾನ್ಯ...

ಕರ್ನಾಟಕದ ಶಿಕ್ಷಣ ಸಚಿವರು ಮತ್ತು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ...

ಎ ಎಸ್ ದೇರಳಕಟ್ಟೆಎ ಎಸ್ ದೇರಳಕಟ್ಟೆ30 May 2020 6:00 PM IST
share

ರಾಜ್ಯದ ಸುಮಾರು ಎಂಟುವರೆ ಲಕ್ಷ ವಿದ್ಯಾರ್ಥಿಗಳು ಎಸೆಸೆಲ್ಸಿ 2020ನೆ ಸಾಲಿನ ಪರೀಕ್ಷೆ ಬರೆಯಲು ತುದಿಗಾಳಲ್ಲಿ ನಿಂತಿದ್ದು ಸರಕಾರ ಮಾತ್ರ ಮೀನ ಮೇಷ ಎಣಿಸುತ್ತಿದ್ದು, ಗೊಂದಲ ಮಾತ್ರ ನಿವಾರಣೆಯಾಗಿಲ್ಲ. ಕೋರೋನ ಸೋಂಕು ದೈನಂದಿನೆ ಹೆಚ್ಚಾಗುತ್ತಿದ್ದು ಪರೀಕ್ಷೆ ಬರೆಯಲು ಕಾತರದಲ್ಲಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆತಂಕದಲ್ಲಿದ್ದಾರೆ.

ಕಳೆದ ಎರಡು ತಿಂಗಳಿನಿಂದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಕಾಯುತ್ತಿದ್ದು ರಾಜ್ಯದ ಶಿಕ್ಷಣ ಸಚಿವರು ಗೊಂದಲಕಾರಿ ಹೇಳಿಕೆಯನ್ನೇ ನೀಡುತ್ತಿದ್ದು ಇದುವರೆಗೆ ಪರಿಹಾರೋಪಾಯಗಳನ್ನು ಸೂಚಿಸಲಾಗಿಲ್ಲ. ಶಿಕ್ಷಣ ಸಚಿವರೇ ಹೇಳಿದಂತೆ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಬೇಕೇ ಬೇಡವೇ ಎಂದು ಅಭಿಪ್ರಾಯ ಕೇಳಿದಾಗ ಹೆಚ್ಚಿನ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು ಪರೀಕ್ಷೆ ಬೇಕೆಂದು ಒತ್ತಾಯಪಡಿಸಿದ್ದಾರೆ. ಆದ್ದರಿಂದ ಜೂನ್ ತಿಂಗಳಲ್ಲಿ ಪರೀಕ್ಷೆಗೆ ನಡೆಸಲು ಸಾಧ್ಯವಾಗಬಹುದೆಂದು ಅಂದಾಜಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ ವಿಚಾರ ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು ಅಧಿಕಾರಿಗಳು ಸೇರಿದಂತೆ ಸುಮಾರು ಅಂದಾಜು 25 ಲಕ್ಷ ಮಂದಿಗೆ ಸುರಕ್ಷತೆ ಒದಗಿಸುವ ವಿಚಾರದಲ್ಲಿ ಏನೇನು ಮತ್ತು ಯಾವುದೆಲ್ಲಾ ಮುಂಜಾಗರೂಕತೆಯ ಕ್ರಮಗಳನ್ನು ಕೈಗೊಂಡಿದ್ದಾರೆಂದು ಶಿಕ್ಷಣ ಸಚಿವರು ಸಾರ್ವಜನಿಕರಿಗೆ ತಿಳಿಸಬೇಕಾಗಿದೆ.

ಸುಮಾರು ಎರಡು ತಿಂಗಳಿನಿಂದ ಲಾಕ್ ಡೌನ್ ಜಾರಿಯಲ್ಲಿದ್ದು ಈಗ ಸಡಿಲಗೊಳಿಸಿದಾಗ ಕೋರೋನ ಸೋಂಕಿತರು ಹೆಚ್ಚಾಗುತ್ತಲೇ ಇರುವ ಸನ್ನಿವೇಶ ದಲ್ಲಿ ಪುನಃ ಲಾಕ್ ಡೌನ್ ಗೆ ಸಾಧ್ಯತೆ ಹೆಚ್ಚಾಗಿರುವುದರಿಂದ ಜನಸಾಮಾನ್ಯರು ಮನೆಯಿಂದ ಹೊರಗಿಳಿಯಲು ಭಯಬೀತರಾಗಿದ್ದಾರೆ. ಇಂತಹ ಆತಂಕದ ಸನ್ನಿವೇಶದಲ್ಲಿ ಗಂಡಾಂತರಕ್ಕೆ ಎಡೆ ಮಾಡದೆ ಎಲ್ಲ ವಿದ್ಯಾರ್ಥಿಗಳನ್ನೂ ಉತ್ತೀರ್ಣಗೊಳಿಸುವಲ್ಲಿ ಸರಕಾರವು ಶೀಘ್ರವೇ ಕ್ರಮವನ್ನು ಕೈಗೊಳ್ಳಬೇಕಿದೆ.

ಬುದ್ಧಿವಂತ, ಹೆಚ್ಚು ಕಲಿತ ವಿದ್ಯಾರ್ಥಿಗಳಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಬೇಕೆಂಬ ಬಯಕೆ ಇರುವುದು ಸಹಜ.ಆದರೆ ಹಾಗಂತ ಸಾಂಕ್ರಾಮಿಕ ರೋಗವು ಉಲ್ಬಣಗೊಂಡಿರುವ ಪ್ರಸಕ್ತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳ ಮತ್ತು ಅಧಿಕಾರಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಕೈಬಿಡುವುದು ಹಿತವಲ್ಲವೇ ? ಅದರಲ್ಲೂ ವಿದ್ಯಾರ್ಥಿಗಳೊಂದಿಗೆ ಚೆಲ್ಲಾಟವಾಡುವುದು ಉಚಿತವಲ್ಲ. ಪರೀಕ್ಷೆಯನ್ನು ನಡೆಸಿಯೇ ತೀರುವೆವು ಎಂಬ ಹಠವಾದ ಇದೆಯೆಂದಾ ದರೆ ಸರಿ ತಮ್ಮ ಪ್ರಯತ್ನವನ್ನು ಮುಂದುವರಿಸಿ, ಆದರೆ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವರೇ ? ಅವರಿಗೂ ತಮ್ಮ ಬದುಕಿನ ಬಗ್ಗೆ ಆತಂಕವಿಲ್ಲವೇ?  ಮತ್ತು ವಿದ್ಯಾರ್ಥಿಗಳ ಪೋಷಕರು ಯಾವ ಸುರಕ್ಷತೆಯ ಆಧಾರದ ಮೇಲೆ ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಬಲ್ಲರು?
 
ಸರಕಾರವೇನೋ ಮಾಸ್ಕ್ ಮತ್ತು ಗ್ಲೌಸ್ ಧರಿಸಿರೆಂದು ಪುಕ್ಕಟೆ ಸಲಹೆ ನೀಡುತ್ತಿದ್ದರೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅವುಗಳನ್ನು ಖರೀದಿಸುವಷ್ಟು ಸಾಮರ್ಥ್ಯ ಇದೆಯೇ? ಇನ್ನು ಖರೀದಿಸಿದರೂ ಅವುಗಳಿಂದ ಮಾತ್ರ ವಿದ್ಯಾರ್ಥಿಗಳು ಸುರಕ್ಷಿತರಾಗುವರೇ ? ಹಿಂದಿನ ವರ್ಷಗಳಿಗಿಂತ ಭಿನ್ನವಾಗಿ ಕೋರೋನ ತಡೆಗಟ್ಟುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳನ್ನು  ಸುರಕ್ಷತೆಯ ದೃಷ್ಟಿಯಲ್ಲಿ ಯಾವುದಾದರೂ ರೀತಿಯಲ್ಲಿ ಪುನರ್ರಚನೆ ಮಾಡಲಾಗಿದೆಯೇ? ಎಂಬಿತ್ಯಾದಿ ವಿಷಯಗಳಿಗೆ ಸಚಿವರು ಉತ್ತರ ನೀಡಬೇಕಾಗಿದೆ.

ದೂರದೂರಿನಿಂದ ಬಂದು ಶಾಲಾ ಹಾಸ್ಟೆಲುಗಳಲ್ಲಿ ತಂಗಿ ಕಲಿಯುತ್ತಿರುವ ವಿದ್ಯಾರ್ಥಿಗಳು ಲಾಕ್ ಡೌನ್ ಘೋಷಣೆಯಾದ ಬೆನ್ನಲ್ಲೇ ತಮ್ಮೂರಿಗೆ ಮರಳಿದ್ದಾರೆ. ಅಂತಹ ವಿದ್ಯಾರ್ಥಿಗಳನ್ನು ಮರಳಿ ಪರೀಕ್ಷಾ ಕೇದ್ರಗಳಿಗೆ ಬರುವಂತೆ ಆದೇಶಿಸುವ ಮಾತೂ ಸಮಂಜಸವಲ್ಲ. ದೂರದೂರಿನ ಗ್ರಾಮೀಣ ಪ್ರದೇಶದ ಮಕ್ಕಳ ಮತ್ತು ಅವರ ಪೋಷಕರ ಆತಂಕವನ್ನೂ ಸರಕಾರ ಮನಗಾಣಬೇಕಾಗಿದೆ.ಈ ನಿಟ್ಟಿನಲ್ಲಿ ಪರೀಕ್ಷೆಯನ್ನು ರದ್ಧುಗೊಳಿಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬೇಕಾದುದು ಪ್ರಸಕ್ತ ಕಾಲದ ಅನಿವಾರ್ಯ ಬೇಡಿಕೆಯಾಗಿದೆ. 

share
ಎ ಎಸ್ ದೇರಳಕಟ್ಟೆ
ಎ ಎಸ್ ದೇರಳಕಟ್ಟೆ
Next Story
X