ದೇಶಾದ್ಯಂತ ಜೂನ್ 30ರವರೆಗೆ ಲಾಕ್ಡೌನ್ ವಿಸ್ತರಣೆ
ಜೂನ್ 8 ರಿಂದ ಧಾರ್ಮಿಕ ಸ್ಥಳಗಳು, ಮಾಲ್, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ
ಹೊಸದಿಲ್ಲಿ, ಮೇ.30: ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಆದರೆ ಕಂಟೈನ್ ಮೆಂಟ್ ಝೋನ್ ಗಳಿಗೆ ಮಾತ್ರ ಲಾಕ್ಡೌನ್ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜೂನ್ 8 ರಿಂದ ಧಾರ್ಮಿಕ ಸ್ಥಳಗಳು, ಮಾಲ್, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
Next Story