Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸೆಸೆಲ್ಸಿ ಪರೀಕ್ಷೆ ಸುಗಮ ನಿರ್ವಹಣೆಗೆ...

ಎಸೆಸೆಲ್ಸಿ ಪರೀಕ್ಷೆ ಸುಗಮ ನಿರ್ವಹಣೆಗೆ ಗೃಹ ಇಲಾಖೆಯಿಂದ ಅಗತ್ಯ ಕ್ರಮ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ1 Jun 2020 10:26 PM IST
share
ಎಸೆಸೆಲ್ಸಿ ಪರೀಕ್ಷೆ ಸುಗಮ ನಿರ್ವಹಣೆಗೆ ಗೃಹ ಇಲಾಖೆಯಿಂದ ಅಗತ್ಯ ಕ್ರಮ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜೂ.1: ಇದೆ ಮೊದಲ ಬಾರಿ ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ತಡವಾಗಿ ನಡೆಯುತ್ತಿರುವ ಎಸೆಸೆಲ್ಸಿ ಪರೀಕ್ಷೆ ಸುಗಮವಾಗಿ ಮತ್ತು ಸಮರ್ಪಕ ನಿರ್ವಹಣೆಗೆ ವಿಶೇಷವಾಗಿ ಗೃಹ ಮತ್ತು ಆರೋಗ್ಯ ಇಲಾಖೆಗಳ ಹೆಚ್ಚಿನ ಸಹಾಯ-ಸಹಕಾರಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಜೂ.25ರಿಂದ ಆರಂಭಗೊಳ್ಳಲಿರುವ ಎಸೆಸೆಲ್ಸಿ ಪರೀಕ್ಷೆಗಳ ಸುಗಮ ನಿರ್ವಹಣೆ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳ ಕುರಿತು ವಿಧಾನಸೌಧದಲ್ಲಿ ಸೋಮವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಗೃಹ ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರ ಸಭೆಯಲ್ಲಿ ಮಾತನಾಡಿದ ಅವರು, ಎಸೆಸೆಲ್ಸಿ ಪರೀಕ್ಷೆ ಇಡಿ ನಾಡಿನ ಮಕ್ಕಳಿಗೆ ಬೇಕಾಗಿದ್ದು, ಅವರ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದರು.

ನಾಡಿನ ಮಕ್ಕಳ ಹಿತದೃಷ್ಟಿಯಿಂದ ಎಸೆಸೆಲ್ಸಿ ಪರೀಕ್ಷೆ ನಡೆಯಬೇಕೆನ್ನುವುದನ್ನು ಹೈಕೋರ್ಟ್ ಪುರಸ್ಕರಿಸಿದೆ. ಆದರೆ ಈ ಬಾರಿಯ ಪರೀಕ್ಷೆ ಬೇಕು-ಬೇಡ ಎಂಬ ಕೆಲ ಮನಸ್ಥಿತಿಗಳ ಮಧ್ಯೆ ನ್ಯಾಯಾಲಯವೂ ಈ ಕುರಿತು ಕಣ್ಗಾವಲು ನಡೆಸುತ್ತಿದ್ದು, ಅದಕ್ಕಾಗಿ ಗೃಹ ಇಲಾಖೆಯ ಹೆಚ್ಚಿನ ಸಹಾಯ ಸಹಕಾರದ ಅಗತ್ಯವಿದೆ ಎಂದು ಸುರೇಶ್ ಕುಮಾರ್ ಮನವಿ ಮಾಡಿದರು.

ಕೊರೋನದಂತಹ ಸಾಂಕ್ರಾಮಿಕ ರೋಗದಿಂದಾಗಿ ತಡವಾಗಿ ನಡೆಯುತ್ತಿರುವ ಈ ಬಾರಿಯ ಪರೀಕ್ಷೆಯ ಸುಗಮ ನಿರ್ವಹಣೆ ಮತ್ತು ಪರೀಕ್ಷೆಯ ಪಾವಿತ್ರ್ಯ ಕಾಪಾಡುವ ಹಿನ್ನೆಲೆಯಲ್ಲಿ ಗೃಹ ಇಲಾಖೆಯ ಸಹಕಾರ ಈ ಬಾರಿ ಎಂದಿಗಿಂತ ಹೆಚ್ಚಾಗಿದೆ. ಕೊರೋನ ಹಿನ್ನೆಲೆಯಲ್ಲಿ ವಿಶೇಷವಾಗಿ ಇಲಾಖೆ ಕೈಗೊಂಡ ಕ್ರಮಗಳು ಮತ್ತು ಗೃಹ ಇಲಾಖೆ ಯಾವ ಯಾವ ಹಂತದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಅವರು ಸಭೆಯಲ್ಲಿ ವಿವರಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆ ಜವಾಬ್ದಾರಿಯಾಗಿದ್ದರೂ ಈ ಬಾರಿಯ ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಗೃಹ ಇಲಾಖೆ ಎಲ್ಲ ರೀತಿಯ ವಿಶೇಷ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಎಸೆಸೆಲ್ಸಿ ಪರೀಕ್ಷೆ ತಡವಾಗಿ ನಡೆಯುತ್ತಿರಬಹುದು. ಆದರೆ ರಾಜ್ಯದ 8.5 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಯಾವುದೇ ರೀತಿಯಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳದಂತೆ ಮಾಡುವ ನಿಟ್ಟಿನಲ್ಲಿ ಕಳೆದ ಮೂರು ತಿಂಗಳಿನಿಂದಲೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಇಡೀ ಶಿಕ್ಷಣ ಇಲಾಖೆ ಕೈಗೊಂಡ ಕ್ರಮಗಳನ್ನು ಗಮನಿಸಿದ್ದೇನೆ. ಇದು ನಿಜಕ್ಕೂ ಅತ್ಯಂತ ಶ್ಲಾಘನೀಯ ಕಾರ್ಯವಾಗಿದ್ದು, ಈ ಬಾರಿಯ ಪರೀಕ್ಷೆಗೆ ಮತ್ತು ಯಾವೊಬ್ಬ ವಿದ್ಯಾರ್ಥಿಗೂ ತೊಂದರೆಯಾಗದಂತೆ ಅಗತ್ಯ ಗಮನ ಹರಿಸಲಾಗುವುದು ಎಂದು ಅವರು ಹೇಳಿದರು.

ಕೆಲ ಸಂಘಟನೆಗಳು ಈ ಸಂದರ್ಭದಲ್ಲಿ ಎಸೆಸೆಲ್ಸಿ ಪರೀಕ್ಷೆ ಮಾಡಬಾರದು ಎಂದು ಸರಕಾರಕ್ಕೆ ಅರ್ಜಿ ಕೊಟ್ಟಿದ್ದವು. ಕೆಲವರು ನ್ಯಾಯಾಲಯಕ್ಕೂ ಹೋಗಿದ್ದರು. ಆದರೆ ಹೈಕೋರ್ಟ್ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದನ್ನು ಪುರಸ್ಕರಿಸಿರುವುದರೊಂದಿಗೆ, ಪರೀಕ್ಷೆಯನ್ನು ಮಕ್ಕಳ ಆರೋಗ್ಯ, ರಕ್ಷಣೆ, ಸಾರಿಗೆ, ಸಾಗಣೆ ಸೇರಿದಂತೆ ಯಾವುದೇ ರೀತಿಯಲ್ಲಿ ತೊಂದರೆಯಾದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಆದೇಶ ಮಾಡಿದೆ ಎಂದು ಬೊಮ್ಮಾಯಿ ತಿಳಿಸಿದರು.

ಆದುದರಿಂದ, ಗೃಹ ಇಲಾಖೆಯ ಜವಾಬ್ದಾರಿಯೂ ಹಿರಿದಾಗಿದ್ದು, ಪರೀಕ್ಷೆಯ ಸುಗಮ ನಿರ್ವಹಣೆಗೆ ಇಲಾಖೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. ಈ ಕುರಿತು ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆದೇಶ ಹೊರಡಿಸಬೇಕು ಮತ್ತು ಪರೀಕ್ಷೆ ಕುರಿತು ಹೆಚ್ಚಿನ ಆಸ್ಥೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಮಕ್ಕಳು ಎಸೆಸೆಲ್ಸಿ ಪರೀಕ್ಷೆ ಬರೆಯಲು ಉತ್ಸುಕರಾಗಿದ್ದಾರೆ. ಪರೀಕ್ಷೆ ಬೇಡ ಎಂದು ಯಾವೊಬ್ಬ ಮಗುವೂ ಹೇಳಿಲ್ಲ. ಇದು ಮಕ್ಕಳು ಮತ್ತು ಪರೀಕ್ಷಾ ಮಂಡಳಿಯ ನಡುವಿನ ವಿಷಯ ಮಾತ್ರ. ಗಡಿ ರಾಜ್ಯದಿಂದ ಬರುವ ಮಕ್ಕಳು ಪರೀಕ್ಷೆಗೆ ಹಾಜರಾಗುವಂತೆ ಮಾಡುವುದರಿಂದ ಹಿಡಿದು ಪರೀಕ್ಷಾ ಕೇಂದ್ರಗಳು, ಪ್ರಶ್ನೆ ಪತ್ರಿಕೆ ಸಂಗ್ರಹಿಸಿಡಲಾದ ತಾಲೂಕು, ಜಿಲ್ಲಾ ಖಜಾನೆಗಳು, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ರವಾನೆ ಮತ್ತು ಪರೀಕ್ಷಾ ಕೇಂದ್ರದ ಬಳಿಯ ಆರೋಗ್ಯ ತಪಾಸಣಾ ಕೇಂದ್ರ, ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಸಾಗಿಸುವ ವಾಹನ ಸೇರಿದಂತೆ ಅಗತ್ಯವಿದ್ದೆಡೆಯಲ್ಲೆಲ್ಲಾ ನಮ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದು ಪರೀಕ್ಷಾ ಕಾರ್ಯದ ಸುಗಮ ನಿರ್ವಹಣೆಗೆ ಶ್ರಮಿಸಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇನ್ನೂ ಸಮಯವಿರುವುದರಿಂದ ಪರೀಕ್ಷೆಗಿಂತ ಒಂದು ವಾರದ ಮೊದಲೆ ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳು ಮಕ್ಕಳನ್ನು ಆಯಾ ಮಟ್ಟದಲ್ಲೆ ಆರೋಗ್ಯ ತಪಾಸಣೆ ಮಾಡುವುದರಿಂದ ಮಕ್ಕಳಲ್ಲಿ ತಮ್ಮ ಸುರಕ್ಷತೆ ಕುರಿತು ಸರಕಾರ ಕೈಗೊಳ್ಳುತ್ತಿರುವ ಉಪಕ್ರಮಗಳ ಹಿನ್ನೆಲೆಯಲ್ಲಿ ಆತ್ಮವಿಶ್ವಾಸ ಮೂಡಿಸಲಿದೆ. ಈ ಕುರಿತು ಗಮನ ಹರಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸಲಹೆ ನೀಡಿದರು

ಸಭೆಯಲ್ಲಿ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಪೊಲೀಸ್ ಮಹಾನಿರ್ದೇಶಕ(ಕಾನೂನು ಮತ್ತು ಸುವ್ಯವಸ್ಥೆ) ಅಮರ್‍ಕುಮಾರ್ ಪಾಂಡೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಸಾರ್ಜವನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ.ಜಗದೀಶ್, ಎಸ್‍ಎಸ್‍ಎ ಎಸ್‍ಪಿಡಿ ಡಾ.ಎಂ.ಟಿ.ರೇಜು, ಸಿಒಡಿ ಅಧಿಕಾರಿಗಳು, ಗೃಹ ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X